'ಕರ್ನಾಟಕ ಸೇರಿ ಕೆಲ ರಾಜ್ಯಗಳಲ್ಲಿ ದುಸ್ಥಿತಿ: ಸೋಂಕು, ಸಾವಿನ ಏರುಗತಿ ಆತಂಕಕಾರಿ'

Published : May 01, 2021, 07:39 AM ISTUpdated : May 01, 2021, 08:15 AM IST
'ಕರ್ನಾಟಕ ಸೇರಿ ಕೆಲ ರಾಜ್ಯಗಳಲ್ಲಿ ದುಸ್ಥಿತಿ: ಸೋಂಕು, ಸಾವಿನ ಏರುಗತಿ ಆತಂಕಕಾರಿ'

ಸಾರಾಂಶ

ಕರ್ನಾಟಕ ಸೇರಿ ಕೆಲ ರಾಜ್ಯಗಳಲ್ಲಿ ದುಸ್ಥಿತಿ| ಸೋಂಕು, ಸಾವಿನ ಏರುಗತಿ ಆತಂಕಕಾರಿ| ಕೇಂದ್ರ ಆರೋಗ್ಯ ಸಚಿವಾಲಯ ಕಳವಳ

ನವದೆಹಲಿ(ಮೇ.01): ಕರ್ನಾಟಕ ಸೇರಿ ದೇಶದ ಹಲವು ರಾಜ್ಯಗಳಲ್ಲಿ ಕೊರೋನಾ ಪ್ರಕರಣಗಳು ಹಾಗೂ ಸಾವಿನ ತೀವ್ರಗತಿಯ ಏರಿಕೆಯ ಬಗ್ಗೆ ಕೇಂದ್ರ ಸರ್ಕಾರ ಶುಕ್ರವಾರ ಮತ್ತೊಮ್ಮೆ ಕಳವಳ ವ್ಯಕ್ತಪಡಿಸಿದೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ‍್ಯದರ್ಶಿ ಲವ್‌ ಅಗರ್‌ವಾಲ್‌, ‘ಕರ್ನಾಟಕ, ಕೇರಳ, ಪಶ್ಚಿಮ ಬಂಗಾಳ, ತಮಿಳುನಾಡು, ಗೋವಾ ಹಾಗೂ ಒಡಿಶಾದಲ್ಲಿ ಪ್ರಕರಣಗಳ ಸಂಖ್ಯೆ ಭಾರೀ ಹೆಚ್ಚುತ್ತಿದೆ. ಏರಿಕೆಯ ದರ ಕೂಡ ಆತಂಕಕಾರಿಯಾಗಿದೆ. ಇನ್ನು ಮಹಾರಾಷ್ಟ್ರ, ಉತ್ತರ ಪ್ರದೇಶ, ಛತ್ತೀಸ್‌ಗಢ, ದಿಲ್ಲಿ, ಆಂಧ್ರಪ್ರದೇಶ ಹಾಗೂ ರಾಜಸ್ಥಾನಗಳು ದೈನಂದಿನ ಪ್ರಕರಣಗಳ ಹೊಸ ದಾಖಲೆ ಬರೆಯುತ್ತಿವೆ’ ಎಂದರು.

ಯ ಭೂ ಸೇನೆಯ ಮುಖ್ಯಸ್ಥ ಜನರಲ್ ಎಂ. ಎಂ. ನರವಣೆ ಬಳಿ ಮಾಹಿತಿ ಪಡೆದುಕಜೊಂಡಿದ್ದಾರೆ. ಈ ವೇಳೆ ಕೋವಿಡ್ ನಿರ್ವಹಣೆಗೆ ಸೇನೆ ಕೈಗೊಳ್ಳುತ್ತಿರುವ ವಿವಿಧ ಕ್ರಮಗಳ ಕುರಿತಾಗಿಯೂ ಚರ್ಚೆ ನಡೆದಿದೆ.

"

‘ಮಹಾರಾಷ್ಟ್ರ, ಕರ್ನಾಟಕ, ಛತ್ತೀಸ್‌ಗಢ, ಉತ್ತರ ಪ್ರದೇಶ, ದಿಲ್ಲಿ, ತಮಿಳುನಾಡು ಹಾಗೂ ಪಂಜಾಬ್‌ನಲ್ಲಿ ಕಳೆದ 4 ವಾರದಲ್ಲಿ ಸಾವು ಕೂಡ ದಾಖಲೆ ಪ್ರಮಾಣದಲ್ಲಿ ವರದಿ ಆಗುತ್ತಿದೆ. ಇದು ಕಳವಳಕಾರಿ’ ಎಂದು ಹೇಳಿದರು.

‘ಇದರ ನಿಯಂತ್ರಣಕ್ಕೆ ಆರೋಗ್ಯ ಮೂಲಸೌಕರ‍್ಯ ಬಹುಮುಖ್ಯ. ರಾಜ್ಯಗಳಿಗೆ ಸ್ಥಳೀಯ ಕಂಟೇನ್ಮೆಂಟ್‌ ವಲಯ ಸೃಷ್ಟಿಸಲು ಸೂಚಿಸಲಾಗಿದೆ. ಮಾಸ್ಕ್‌ ಧಾರಣೆ, ಸಾಮಾಜಿಕ ಅಂತರ, ಸ್ವಚ್ಛತೆ ಪಾಲನೆ ಕೂಡ ಮಹತ್ವದ ಕ್ರಮಗಳು’ ಎಂದರು.

ಪರಿಸ್ಥಿತಿ ಹೀಗಿದ್ದರೂ ಕೆಲವರು ‘ಕೊರೋನಾ ಎಂಬುದು ಒಂದು ಹಗರಣ. ಮಾಸ್ಕ್‌ ಅಗತ್ಯವೇ ಇಲ್ಲ’ ಎಂದು ಉಡಾಫೆ ಮಾಡುತ್ತಿದ್ದಾರೆ. ನಿಯಮ ಪಾಲಿಸಿ ಜನ ಹೈರಾಣಾಗಿರಬಹುದು. ಆದರೆ ವೈರಸ್‌ ಹೈರಾಣಾಗಿಲ್ಲ’ ಎಂದು ಅವರು ಎಚ್ಚರಿಸಿದರು.

ಎಲ್ಲೆಲ್ಲಿ ಕಳವಳ?

ಕರ್ನಾಟಕ, ಕೇರಳ, ಪಶ್ಚಿಮ ಬಂಗಾಳ, ತಮಿಳುನಾಡು, ಗೋವಾ, ಒಡಿಶಾ, ಮಹಾರಾಷ್ಟ್ರ, ದೆಹಲಿ, ಉತ್ತರಪ್ರದೇಶ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಪ್ರಾಡಾದಿಂದ ಕೊಲ್ಹಾಪುರಿ ಚಪ್ಪಲಿ ಸೇಲ್‌, ಬೆಲೆ ₹83000!
ಸದನದಲ್ಲಿ ಶಾ ಒತ್ತಡದಲ್ಲಿದ್ರು, ಕೈ ಕಂಪಿಸುತ್ತಿತ್ತು : ರಾಹುಲ್‌