
ಭೋಪಾಲ್(ಮೇ.01): ಆ್ಯಂಬುಲೆನ್ಸ್‌ಗಳ ತೀವ್ರ ಕೊರತೆಯಿಂದ ಕೊರೋನಾಕ್ಕೆ ತುತ್ತಾಗುವ ರೋಗಿಗಳು ಆಸ್ಪತ್ರೆಗೆ ತೆರಳಲು ದುಸ್ತರವಾಗಿರುವ ಬೆನ್ನಲ್ಲೇ, ಮಧ್ಯಪ್ರದೇಶದ ಆಟೋ ಚಾಲಕರೊಬ್ಬರು ಪತ್ನಿಯ ಚಿನ್ನಾಭರಣಗಳನ್ನು ಮಾರಾಟ ಮಾಡಿ ತಮ್ಮ ಆಟೋವನ್ನು ಉಚಿತ ಆ್ಯಂಬುಲೆನ್ಸ್ ಸೇವೆಗೆ ಮೀಸಲಿಟ್ಟಿದ್ದಾರೆ. ಅಲ್ಲದೆ ಈ ಆಟೋದಲ್ಲಿ ಅವರು ಆಮ್ಲಜನಕ ನೆರವಿನ ವ್ಯವಸ್ಥೆಯನ್ನೂ ಮಾಡಿದ್ದಾರೆ!
"
- ಆಟೋ ಬಾಡಿಗೆಯಿಂದ ದಿನಕ್ಕೆ 200-300 ರು. ಸಂಪಾದನೆ ಮಾಡುವ ಜಾವೇದ್ ಖಾನ್ ಎಂಬುವರೇ ಈ ಪುಣ್ಯದ ಕೆಲಸ ಮಾಡುತ್ತಿರುವವರು.
ಈ ಬಗ್ಗೆ ಪ್ರತಿಕ್ರಿಯಿಸಿದ ಖಾನ್ ಅವರು, ‘ಸಾಮಾಜಿಕ ಜಾಲತಾಣಗಳು ಮತ್ತು ಸುದ್ದಿ ವಾಹಿನಿಗಳಲ್ಲಿ ಆ್ಯಂಬುಲೆನ್ಸ್‌ಗಳಿಲ್ಲದೆ ಆಸ್ಪತ್ರೆಗೆ ಹೋಗಲು ಪರದಾಡುತ್ತಿದ್ದನ್ನು ನೋಡಿದೆ. ಹೀಗಾಗಿ ನನ್ನ ರಿಕ್ಷಾವನ್ನೇ ಆ್ಯಂಬುಲೆನ್ಸ್ ಆಗಿ ಪರಿವರ್ತಿಸಿದೆ. ಇದಕ್ಕೆ ಹಣದ ಕೊರತೆಯಾದಾಗ ಪತ್ನಿಯ ಚಿನ್ನಾಭರಣ ಮಾರಿದ್ದೇನೆ. ಕಳೆದ 15-20 ದಿನದಲ್ಲಿ ತೀವ್ರ ಅನಾರೋಗ್ಯದಲ್ಲಿದ್ದ 9ಕ್ಕೂ ಹೆಚ್ಚು ರೋಗಿಗಳನ್ನು ಆಸ್ಪತ್ರೆಗೆ ಸೇರಿಸಿದ್ದೇನೆ’ ಎಂದಿದ್ದಾರೆ.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ