
ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರು ಜನ ಮಾತ್ರ ಪಾಠ ಕಲಿಯುತ್ತಿಲ್ಲ. ಗುಜರಾತ್‌ನಲ್ಲಿ ಬಿಜೆಪಿ ನಾಯಕರೊಬ್ಬರು ಏರ್ಪಡಿಸಿದ ಮದುವೆಯೊಂದರ ಡಿಜೆ ಪಾರ್ಟಿಗೆ ಸಾವಿರಕ್ಕೂ ಹೆಚ್ಚು ಜನ ಸೇರಿದ್ದು ಕೋವಿಡ್ ನಿಯಮಗಳನ್ನು ಮೀರಿ ಜನ ಸೇರಿಸಿದ್ದಾರೆ. ಕರ್ನಾಟಕದಲ್ಲಿ ಮಾತ್ರ ರಾಜಕೀಯ ನಾಯಕರು ಕೋವಿಡ್ ರೂಲ್ಸ್ ಬ್ರೇಕ್ ಮಾಡುವುದಲ್ಲ. ಈಗ ಗುಜರಾತ್‌ನಲ್ಲೂ ಅದೇ ಸ್ಥಿತಿ ನಿರ್ಮಾಣವಾಗಿದೆ.
ಗುಜರಾತ್‌ನ ತಾಪಿ ಜಿಲ್ಲೆಯಲ್ಲಿ (Tapi district) ಈ ಘಟನೆ ನಡೆದಿದೆ. ಸ್ಥಳೀಯ ಬಿಜೆಪಿ ನಾಯಕರೊಬ್ಬರು ಮದುವೆಯೊಂದರ ಡಿಜೆಯನ್ನು ಆಯೋಜಿಸಿದ್ದು, ಇದರಲ್ಲಿ ಸಾವಿರಕ್ಕೂ ಹೆಚ್ಚು ಜನ ಸೇರಿದ್ದಾರೆ. ಗುಜರಾತ್ ಸರ್ಕಾರ ಕೂಡ ಕೋವಿಡ್ ಸೋಂಕು ಹೆಚ್ಚಳದ ಹಿನ್ನೆಲೆಯಲ್ಲಿ ರೋಗ ನಿಯಂತ್ರಣಕ್ಕೆ ತರುವ ಸಲುವಾಗಿ ದೊಡ್ಡ ದೊಡ್ಡ ಸಮಾರಂಭಗಳನ್ನು ನಡೆಸುವುದಕ್ಕೆ ನಿರ್ಬಂಧ ಹೇರಿದೆ. ಈ ನಡುವೆ ಬಿಜೆಪಿ ನಾಯಕರೇ ಹೀಗೆ ಮದುವೆಯ ಹೆಸರಲ್ಲಿ ಡಿಜೆ ಆಯೋಜಿಸಿ ಕೋವಿಡ್ ತೀವ್ರ ಸ್ವರೂಪದಲ್ಲಿ ಹರಡುವುದಕ್ಕೆ ಕಾರಣರಾಗಿದ್ದಾರೆ.
Covid Vaccine: ಬಲವಂತವಾಗಿ ಲಸಿಕೆ ನೀಡುವಂತಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ
ಗುಜರಾತ್ ಸರ್ಕಾರ ಹೇರಿರುವ ಕೋವಿಡ್ ನಿಯಮಾವಳಿ ಪ್ರಕಾರ ಮದುವೆ ಸಮಾರಂಭಗಳಲ್ಲಿ 150ಕ್ಕೂ ಹೆಚ್ಚಿನ ಜನ ಸೇರುವ ಹಾಗಿಲ್ಲ. ಅದಾಗ್ಯೂ ಈ ನಿಯಮಗಳನ್ನು ಡೊಲ್ವಾನ್ ಬ್ಲಾಕ್‌ನ ಜನ ತುಂಬಾ ಕೇವಲವಾಗಿ ತೆಗೆದುಕೊಂಡಿದ್ದು, ಇಲ್ಲಿನ ಸ್ಥಳೀಯ ಬಿಜೆಪಿ (BJP) ನಾಯಕ ಹಾಗೂ ಡೊಲ್ವಾನ್ (Dolvan) ತೆಹ್ಸಿಲ್‌ನಲ್ಲಿ ಉಪಾಧ್ಯಕ್ಷರು ಆಗಿರುವ ಸುನಂದಾ (Sunanda) ಅವರು ಆಯೋಜಿಸಿದ್ದ ಕುಟುಂಬದ ಮದುವೆ ಸಮಾರಂಭದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದಾರೆ.
Covid-19 Crisis: ಭಾರತದಲ್ಲೀಗ ಕೋವಿಡ್ ಕೇಸ್ ಇಳಿಕೆ, ಪಾಸಿಟಿವಿಟಿ ದರ ಏರಿಕೆ
ಘಟನೆಯ ಬಗ್ಗೆ ಗುಜರಾತ್ ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆ ಆರಂಭಿಸಿದ್ದಾರೆ. ಪ್ರಸ್ತುತ ಗುಜರಾತ್‌ನಲ್ಲಿ ಮೂರನೇ ಅಲೆ ವ್ಯಾಪಕವಾಗಿ ಹಬ್ಬಿದ್ದು, ಸೋಮವಾರ ಗುಜರಾತ್ (Gujarat) ರಾಜ್ಯದಲ್ಲಿ 12,753 ಹೊಸ ಕೋವಿಡ್ (Covid-19) ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೇ ಒಟ್ಟು ಐದು ಜನ ಕೋವಿಡ್‌ನಿಂದಾಗಿ ಸಾವನ್ನಪ್ಪಿದ್ದಾರೆ. ಅಲ್ಲದೇ ಪ್ರಸ್ತುತ ಗುಜರಾತ್ 70,000 ಸಕ್ರಿಯ ಪ್ರಕರಣಗಳನ್ನು ಹೊಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ