
ನವದೆಹಲಿ(ನ.10): ವಿಧಾನಸಭೆ ಚುನಾವಣೆ ನಿಗದಿಯಾಗಿರುವ ಪಂಚರಾಜ್ಯಗಳ ಕೋವಿಡ್ ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ಇರುವುದಿಲ್ಲ. ಕೇಂದ್ರ ಆರೋಗ್ಯ ಸಚಿವಾಲಯ ಕೋವಿನ್ ಆ್ಯಪ್ ಮತ್ತು ವೆಬ್‌ಸೈಟಲ್ಲಿ ಈ ಕುರಿತ ಅಗತ್ಯ ಬದಲಾವಣೆಯನ್ನು ಮಾಡಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಲಸಿಕೆ ಪ್ರಮಾಣಪತ್ರದಿಂದ ಮೋದಿಯವರ ಹೆಸರು ಮತ್ತು ಫೋಟೋವನ್ನು ಹೊರಗಿಡಲು ಶನಿವಾರ ರಾತ್ರಿಯೇ ಅಗತ್ಯ ಫಿಲ್ಟರ್‌ಗಳನ್ನು ಅನ್ವಯಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಚುನಾವಣಾ ಸಮಿತಿಯು ಶನಿವಾರ ಮಾಧ್ಯಮಗಳನ್ನು ಉದ್ದೇಶಿಸಿ ಮತ್ತು ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಮತ್ತು ಗೋವಾ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸಿತು. ಫೆಬ್ರವರಿ 10 ರಿಂದ ಮಾರ್ಚ್ 7 ರ ನಡುವೆ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.
ಸರ್ಕಾರಗಳು, ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳಿಗೆ ಮಾದರಿ ನೀತಿ ಸಂಹಿತೆ ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ ತಕ್ಷಣ ಜಾರಿಗೆ ಬರುತ್ತದೆ ಮತ್ತು ಚುನಾವಣೆಗಳು ಪೂರ್ಣಗೊಳ್ಳುವವರೆಗೆ ಜಾರಿಯಲ್ಲಿರುತ್ತದೆ. 'ಮಾದರಿ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಐದು ಚುನಾವಣೆಗೆ ಒಳಪಡುವ ರಾಜ್ಯಗಳಲ್ಲಿ ಜನರಿಗೆ ನೀಡಲಾಗುವ COVID-19 ಪ್ರಮಾಣಪತ್ರಗಳಿಂದ ಪ್ರಧಾನ ಮಂತ್ರಿಯ ಚಿತ್ರವನ್ನು ಹೊರಗಿಡಲು ಆರೋಗ್ಯ ಸಚಿವಾಲಯವು CoWIN ಪ್ಲಾಟ್‌ಫಾರ್ಮ್‌ನಲ್ಲಿ ಅಗತ್ಯ ಫಿಲ್ಟರ್‌ಗಳನ್ನು ಅನ್ವಯಿಸುತ್ತದೆ' ಎಂದು ಮೂಲಗಳು ತಿಳಿಸಿವೆ.
ಳೆದ ವರ್ಷ ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಪುದುಚೇರಿ ವಿಧಾನಸಭೆ ಚುನಾವಣೆ ವೇಳೆಯೂ ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿ ಮೋದಿ ಭಾವಚಿತ್ರ ಇರದಂತೆ ಆರೋಗ್ಯ ಸಚಿವಾಲಯ ಇಂಥದ್ದೇ ಕ್ರಮ ಕೈಗೊಂಡಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ