COVID19: ವೈದ್ಯರಿಗೆ ದುಪ್ಪಟ್ಟು ವೇತನ ನೀಡಲು ನಿರ್ಧಾರ

By Suvarna NewsFirst Published Apr 10, 2020, 3:16 PM IST
Highlights

ಕೊರೋನಾ ವೈರಸ್ ಸೋಂಕಿತರಿಗೆ ಹಗಲಿರುಳು ಸೇವೆ ಮಾಡಿ ಚಿಕಿತ್ಸೆ ನೀಡುತ್ತಿರುವ ವೈದ್ಯರು, ದಾದಿಯರಿಗೆ ನೆರವಾಗಲು ಸರ್ಕಾರ ನಿರ್ಧರಿಸಿದೆ. ವೈದ್ಯ ಸಿಬ್ಬಂದಿ ಅವಿರತವಾಗಿ ಶ್ರಮಿಸುತ್ತಿದ್ದು, ಅವರಿಗೆ ದುಪ್ಪಟ್ಟು ವೇತನ ನೀಡಲು ನಿರ್ಧರಿಸಲಾಗಿದೆ.

ಚಂಡೀಗಢ(ಏ.10): ಕೊರೋನಾ ವೈರಸ್ ಹರಡುವುದನ್ನು ತಡೆಯಲು ಲಾಕ್‌ಡೌನ್‌ ಘೋಷಿಸಿದ್ದರೂ ಇದೀಗ ಆರ್ಥಿಕತೆಯ ಮೇಲೆ ಹೊಡೆತ ಬೀಳುವ ಆತಂಕ ಎದುರಾಗಿದೆ. ಈ ನಡವೆಯೇ ರಾಜ್ಯ ಸರ್ಕಾರ ಸರ್ಕಾರಿ ನೌಕರರ ವೇತನ ಕಡಿತಗೊಳಿಸುವ ಬಗ್ಗೆ ಚಿಂತಿಸುತ್ತಿದೆ.

ಹರಿಯಾಣ ಸರ್ಕಾರ ವೈದ್ಯರು, ದಾದಿಯರು, ಪಾರಾ ಮೆಡಿಕಲ್ ಸಿಬ್ಬಂದಿಯ ವೇತನ ಹೆಚ್ಚಿಸಲು ನಿರ್ಧಾರ ಮಾಡಿದೆ. ಈಗಿರುವ ವೇತನದ ದುಪ್ಪಟ್ಟು ವೇತನವನ್ನು ನೀಡಲು ಸರ್ಕಾರ ನಿರ್ಧರಿಸಿದೆ.

ಕೊರೋನಾ ಸೋಂಕಿತರಿಗೆ ಕೇರಳದಲ್ಲಿ ಪ್ಲಾಸ್ಮಾ ಚಿಕಿತ್ಸೆ, 3-7 ದಿನದಲ್ಲಿ ಗುಣಮುಖ

ಹರಿಯಾಣ ಮುಖ್ಯಮಂತ್ರಿ ಮನೋಹರ್‌ಲಾಲ್‌ ಖತ್ತರ್ ಈ ಬಗ್ಗೆ ಸೂಚನೆ ನೀಡಿದ್ದು, ವೈದ್ಯರ ಸೇವೆಯನ್ನು ಶ್ಲಾಘಿಸಿದ್ದಾರೆ. ಹಾಗೆಯೇ ವೈದ್ಯರ ವೇತನವನ್ನು ದುಪ್ಪಟ್ಟು ಮಾಡುವುದಾಗಿ ತಿಳಿಸಿದ್ದಾರೆ.

ಕೊರೋನಾ ವೈರಸ್ ಕರ್ತವ್ಯದ ಸಂದರ್ಭ ಪೊಲೀಸ್ ಸಿಬ್ಬಂದಿ ಸೋಂಕಿತನಾದರೆ ಕಂಪನ್ಸೆಷನ್ ನೀಡಲು ತೀರ್ಮಾನಿಸಲಾಗಿದೆ. ಪೊಲೀಸ್ ಸಿಬ್ಬಂದಿ ಕುಟುಂಬಕ್ಕೆ 30 ಲಕ್ಷ ರೂಪಾಯಿ ನೀಡಲಾಗುತ್ತದೆ ಎಂದು ಘೋಷಿಸಲಾಗಿದೆ. ಹರಿಯಾಣದಲ್ಲಿ 169 ಕೊರೋನಾ ಪ್ರಕರಣಗಳಿದ್ದು, ಮೂವರು ಸಾವನ್ನಪ್ಪಿದ್ದಾರೆ.

click me!