ಗೋಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದು, ಪಂಜಾಬ್ ಹೈಕೋರ್ಟ್‌ನಿಂದ ಮಹತ್ವದ ಹೇಳಿಕೆ!

Kannadaprabha News, Ravi Janekal |   | Kannada Prabha
Published : Aug 27, 2025, 07:11 AM IST
punjab HC on Cow slaughter case

ಸಾರಾಂಶ

ಗೋವು ಕೇವಲ ಧಾರ್ಮಿಕ ಪ್ರಾಣಿಯಲ್ಲ, ಭಾರತದ ಕೃಷಿ ಆರ್ಥಿಕತೆಯ ಅವಿಭಾಜ್ಯ ಅಂಗ. ಗೋಹತ್ಯೆ ಪ್ರಕರಣದಲ್ಲಿ ಆರೋಪಿಗಳ ನಿರೀಕ್ಷಣಾ ಜಾಮೀನು ರದ್ದುಗೊಳಿಸಿದ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್, ಬಹುಸಂಖ್ಯಾತರ ನಂಬಿಕೆಗೆ ಧಕ್ಕೆಯಾದಾಗ ಶಾಂತಿಗೆ ಧಕ್ಕೆ ಎಂದು ಅಭಿಪ್ರಾಯಪಟ್ಟಿದೆ.

ಚಂಡೀಗಢ (ಆ.27): ಭಾರತೀಯ ಸಮಾಜದಲ್ಲಿ ಗೋವಿಗೆ ವಿಶಿಷ್ಟ ಸ್ಥಾನಮಾನವಿದೆ. ಗೋವು ಭಾವನಾತ್ಮಕ ಮತ್ತು ಸಾಂಸ್ಕೃತಿಕ ಹಿನ್ನೆಲೆಯನ್ನೂ ಹೊಂದಿದೆ. ಕೆಲವು ಕೃತ್ಯಗಳು ಬಹುಸಂಖ್ಯಾತರ ನಂಬಿಕೆಗಳನ್ನು ಕೆರಳಿಸಿದಾಗ ಶಾಂತಿಯ ಮೇಲೆ ತೀವ್ರ ಪರಿಣಾಮ ಉಂಟಾಗುತ್ತದೆ ಎಂದು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ವಧೆಗಾಗಿ ರಾಜಸ್ಥಾನಕ್ಕೆ ಗೋವುಗಳನ್ನು ಸಾಗಿಸಿದ ಆರೋಪದ ಮೇಲೆ ನೂಹ್ ನಿವಾಸಿ ಆಸಿಫ್‌ ಹಾಗೂ ಇತರ ಇಬ್ಬರ ಮೇಲೆ ಪ್ರಕರಣ ದಾಖಲಾಗಿತ್ತು. ಅವರಿಗೆ ನೀಡಲಾಗಿದ್ದ ನಿರೀಕ್ಷಣಾ ಜಾಮೀನನ್ನು ವಜಾಗೊಳಿಸಿದ ಪೀಠ ಈ ರೀತಿ ಅಭಿಪ್ರಾಯಪಟ್ಟಿದೆ.

‘ಗೋವು ಕೇವಲ ಧಾರ್ಮಿಕ ಪ್ರಾಣಿಯಲ್ಲ, ಬದಲಾಗಿ ಭಾರತದ ಕೃಷಿ ಆರ್ಥಿಕತೆಯ ಅವಿಭಾಜ್ಯ ಅಂಗವಾಗಿದೆ. ಭಾರತೀಯ ಸಮಾಜದಲ್ಲಿ ಹಸುವಿಗೆ ಇರುವ ವಿಶಿಷ್ಟ ಸ್ಥಾನಮಾನವನ್ನು ಗಮನಿಸಿದರೆ, ಪ್ರಸ್ತುತ ಅಪರಾಧವು ಅದರ ಕಾನೂನು ಪರಿಣಾಮಗಳ ಜೊತೆಗೆ, ಭಾವನಾತ್ಮಕ ಮತ್ತು ಸಾಂಸ್ಕೃತಿಕ ಅಂಶಗಳನ್ನೂ ಹೊಂದಿದೆ. ನಮ್ಮಂತಹ ಬಹುತ್ವ ಸಮಾಜದಲ್ಲಿ, ಕೆಲವು ಕೃತ್ಯಗಳು ಖಾಸಗಿಯಾಗಿದ್ದರೂ, ಗಮನಾರ್ಹ ಜನಸಂಖ್ಯೆಯುಳ್ಳ ಸಮಾಜದ ಆಳವಾದ ನಂಬಿಕೆಗಳನ್ನು ಕೆರಳಿಸಿದಾಗ ಸಾರ್ವಜನಿಕ ಶಾಂತಿಯ ಮೇಲೆ ತೀವ್ರ ಪರಿಣಾಮಗಳನ್ನು ಬೀರಬಹುದು. ಸಂವಿಧಾನವು ಕೇವಲ ಅಮೂರ್ತ ಹಕ್ಕುಗಳನ್ನು ರಕ್ಷಿಸುವುದಿಲ್ಲ, ಬದಲಾಗಿ ನ್ಯಾಯಯುತ, ಸಹಾನುಭೂತಿಯುಳ್ಳ ಮತ್ತು ಒಗ್ಗಟ್ಟಿನ ಸಮಾಜವನ್ನು ನಿರ್ಮಿಸಲು ಪ್ರಯತ್ನಿಸುತ್ತದೆ’ ಎಂದು ಕೋರ್ಟ್‌ ಅಭಿಪ್ರಾಯ ವ್ಯಕ್ತಪಡಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
ಪುಟಿನ್ ಔತಣಕೂಟಕ್ಕೆ ರಾಹುಲ್ ಗಾಂಧಿ-ಖರ್ಗೆಗಿಲ್ಲ ಆಮಂತ್ರಣ, ಶಶಿ ತರೂರ್‌ಗೆ ಜಾಕ್‌ಪಾಟ್