ತೀವ್ರ ಜ್ವರದಿಂದ ಬಳಲುತ್ತಿರುವ ಹಿನ್ನೆಲೆ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ(ಸಿಪಿಎಂ)ದ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರನ್ನ ಸೋಮವಾರ ಇಲ್ಲಿನ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್)ಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ದೆಹಲಿ (ಆ.19): ತೀವ್ರ ಜ್ವರದಿಂದ ಬಳಲುತ್ತಿರುವ ಹಿನ್ನೆಲೆ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ(ಸಿಪಿಎಂ)ದ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರನ್ನ ಸೋಮವಾರ ಇಲ್ಲಿನ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್)ಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ತೀವ್ರ ಅನಾರೋಗ್ಯ ಹಿನ್ನೆಲೆ ಐಸಿಯುಗೆ ದಾಖಲಿಸಿ ಚಿಕಿತ್ಸೆ ನೀಡುತ್ತಿರುವ ವೈದ್ಯರು. ಈ ಹಿಂದೆಯೂ ತುರ್ತು ನಿಗಾ ಘಟಕದಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಇದೀಗ ಅವರನ್ನು ಮತ್ತೆ ಐಸಿಯುಗೆ ಶಿಫ್ಟ್ ಮಾಡಲಾಗಿದೆ. ಆಸ್ಪತ್ರೆ ಮೂಲಗಳ ಪ್ರಕಾರ ಸೀತಾರಾಮ್ ಯೆಚೂರಿ ನ್ಯೂಮೊನಿಯಾದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಸೋಮವಾರ ಸಂಜೆ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದರ ಸದ್ಯ ಅವರ ಆರೋಗ್ಯ ಹೇಗಿದೆ, ಅನಾರೋಗ್ಯದ ನಿಖರ ಸ್ವರೂಪದ ಆಸ್ಪತ್ರೆ ಬಹಿರಂಗಪಡಿಸಿಲ್ಲ ಎಂದು ವರದಿಯಾಗಿದೆ.
ಎನ್‌ಡಿಎ ಸೇರ್ತಾರಾ ಜಾರ್ಖಂಡ್ ಮಾಜಿ ಸಿಎಂ ಚಂಪೈ ಸೊರೆನ್?
72 ರ ಇಳಿವಯಸ್ಸಿನ ಸೀತರಾಮ್ ಯೆಚೂರಿ ನ್ಯುಮೋನಿಯಾದಿಂದ ಬಳಲುತ್ತಿದ್ದಾರೆ. ಇತ್ತೀಚೆಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ಈ ನಡುವೆ ಇಂದು ಸಂಜೆ ಜ್ವರ ತೀವ್ರಗೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಸದ್ಯ ಆರೋಗ್ಯ ಸ್ಥಿರವಾಗಿ ಎಂದು ಮೂಲಗಳು ತಿಳಿಸಿವೆ.