
ಮುಂಬೈ(ಜೂ.15): ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ(ಎಂವಿಎ) ಮೈತ್ರಿಯ ಸರ್ಕಾರದಲ್ಲಿ ಬಿಕ್ಕಟ್ಟು ಉದ್ಭವಿಸಿದೆ ಎಂಬ ಮುನ್ಸೂಚನೆಯೊಂದು ಲಭ್ಯವಾಗಿದೆ. ಮುಂಬರುವ 2024ರ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷವು ಏಕಾಂಗಿಯಾಗಿ ಸ್ಪರ್ಧೆ ಮಾಡಲಿದ್ದು, ಹೈಕಮಾಂಡ್ ನಿರ್ಧರಿಸಿದಲ್ಲಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಲು ಸಿದ್ಧ ಎಂದು ಕಾಂಗ್ರೆಸ್ ರಾಜ್ಯಾಧ್ಯಕ್ಷ ನಾನಾ ಪಟೋಲೆ ಹೇಳಿದ್ದಾರೆ.
5 ಹಂತದಲ್ಲಿ ಮಹಾ ಅನ್‌ಲಾಕ್ : ಲಾಕ್‌ಡೌನ್ ತೆರವು ಹೇಗೆ..?
ಅಮರಾವತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪಟೋಲೆ ಅವರು, ‘ಪ್ರಸ್ತುತ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಅಧ್ಯಕ್ಷನಾಗಿದ್ದೇನೆ. ಹೀಗಾಗಿ ನಮ್ಮ ಪಕ್ಷವು ಮುಂಬರುವ ಸ್ಥಳೀಯ ಸಂಸ್ಥೆಗಳ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಲಾಗಿದೆ. ಆದರೆ ಎನ್ಸಿಪಿ ನಿಲುವು ಏನು ಎಂಬುದು ಗೊತ್ತಿಲ್ಲ. ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತಂದು ನಾನು ಮುಖ್ಯಮಂತ್ರಿ ಆಗುವುದು ಬೇಡವೇ’ ಎಂದು ಪ್ರಶ್ನಿಸಿದರು.
ಓ... ಡಿಸಿಎಂ ಸೋಷಿಯಲ್ ಮೀಡಿಯಾ ಖಾತೆ ನಿರ್ವಹಣೆಗೆ 6 ಕೋಟಿ!
ಇತ್ತೀಚೆಗಷ್ಟೇ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಶಿವಸೇನೆ ಬಗ್ಗೆ ಪ್ರಶಂಸಿಸಿದ್ದರು. ಏತನ್ಮಧ್ಯೆ, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು. ಜೊತೆಗೆ ಚುನಾವಣಾ ರಣತಂತ್ರಗಾರ ಪ್ರಶಾಂತ್ ಕಿಶೋರ್ ಅವರು, ಪವಾರ್ ಅವರನ್ನು ಭೇಟಿ ಮಾಡಿದ್ದರು. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಪಟೋಲೆ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ