ಅಮಿತ್ ಶಾ-ಯೋಗಿ ಮೇಲೆ ಆತ್ಮಾಹುತಿ ದಾಳಿಗೆ ಪ್ಲಾನ್; CRPF ಕಚೇರಿಗೆ ಬಂತು ಇಮೇಲ್!

Published : Apr 06, 2021, 06:08 PM IST
ಅಮಿತ್ ಶಾ-ಯೋಗಿ ಮೇಲೆ ಆತ್ಮಾಹುತಿ ದಾಳಿಗೆ ಪ್ಲಾನ್; CRPF ಕಚೇರಿಗೆ ಬಂತು ಇಮೇಲ್!

ಸಾರಾಂಶ

ಭಾರತೀಯ CRPF ಯೋಧರ ಮೇಲೆ ನಕ್ಸಲರ ದಾಳಿ ನಡೆದ ಬೆನ್ನಲ್ಲೇ ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೇಲೆ ಆತ್ಮಾಹುತಿ ದಾಳಿ ನಡೆಸುವ ಕುರಿತು CRPF ಕಚೇರಿಗೆ ಇಮೇಲ್ ಬಂದಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.

ನವದೆಹಲಿ(ಏ.06):  ಮುಂಬೈನ CRPF ಕಚೇರಿಗೆ ಇ ಮೇಲ್ ಸಂದೇಶವೊಂದು ಬಂದಿತ್ತು. ಅನಾಮಿಕ ಸಂದೇಶ ಇದಾಗಿತ್ತು. ಆದರೆ ಇ ಮೇಲ್ ಪರಿಶೀಲಿಸಿದ CRPF ಅಧಿಕಾರಿಗಳು ತಕ್ಷಣವೇ ಅಲರ್ಟ್ ಆಗಿದ್ದಾರೆ. ಕಾರಣ ಈ ಇಮೇಲ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೇಲೆ ಆತ್ಮಾಹುತಿ ದಾಳಿ ಮಾಡುವ ಎಚ್ಚರಿಕೆ ನೀಡಲಾಗಿದೆ.

ನಕ್ಸಲ್ ದಾಳಿ ಬೆನ್ನಲ್ಲೇ ಉನ್ನತ ಮಟ್ಟದ ಸಭೆ ನಡೆಸಿದ ಅಮಿತ್ ಶಾ!

ಅಮಿತ್ ಶಾ ಹಾಗೂ ಯೋಗಿ ಆದಿತ್ಯನಾಥ್ ಮೇಲಿನ ಆತ್ಮಾಹುತಿ ದಾಳಿಗೆ 11 ಮಂದಿ ತರಬೇತಿ ಪಡೆದಿದ್ದಾರೆ. ಸೂಕ್ತ ಸ್ಥಳದಲ್ಲಿ ಆತ್ಮಾಹುತಿ ದಾಳಿ ನಡೆಯಲಿದೆ. ಈ ನಾಯಕರ ಮೇಲೆ ಮಾತ್ರವಲ್ಲ, ದೇವಾಲಯಗಳು, ಇತರ ಪ್ರದೇಶದಲ್ಲೂ ಆತ್ಮಾಹುತಿ ದಾಳಿ ನಡೆಯಲಿದೆ ಎಂದು ಇ  ಮೇಲ್ ಮೂಲಕ ತಿಳಿಸಲಾಗಿದೆ.

CRPF ಅಧಿಕಾರಿಗಳು ತಕ್ಷಣವೇ ಇ ಮೇಲ್ ಸಂದೇಶದ ಕುರಿತು ಕೇಂದ್ರ ಗೃಹ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಉತ್ತರ ಪ್ರದೇಶಕ್ಕೂ ಮಾಹಿತಿ ನೀಡಲಾಗಿದೆ. ಇದೀಗ ಇ ಮೇಲ್ ಸರ್ವರ್ ಸೇರಿದಂತೆ ಹಲವು ಮಾಹಿತಿಗಳನ್ನು ಕಲೆಹಾಕಲಾಗುತ್ತಿದೆ.

ಚತ್ತೀಸಘಡ ಬಿಜಾಪುರ್ ಅರಣ್ಯ ಪ್ರದೇಶದಲ್ಲಿ CRPF ಯೋಧರ ಮೇಲೆ ದಾಳಿ ನಡೆದ ಬೆನ್ನಲ್ಲೇ ಇದೀಗ ಈ ಸಂದೇಶ CRPF ಕಚೇರಿಗೆ ಬಂದಿರುವುದು ಕೆಲ ಅನುಮಾನಗಳಿಗೆ ಕಾರಣವಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಿಪೇರಿಗೆ 5 ಗಂಟೆ ಬೇಕೆಂದ ರೈಲ್ವೆ ಅಧಿಕಾರಿಗಳು; ಸುತ್ತಿಗೆಯಿಂದ 10 ನಿಮಿಷದಲ್ಲಿ ಸರಿ ಮಾಡಿದ ಅಂಕಲ್
India Latest News Live: ರಿಪೇರಿಗೆ 5 ಗಂಟೆ ಬೇಕೆಂದ ರೈಲ್ವೆ ಅಧಿಕಾರಿಗಳು; ಸುತ್ತಿಗೆಯಿಂದ 10 ನಿಮಿಷದಲ್ಲಿ ಸರಿ ಮಾಡಿದ ಅಂಕಲ್