90 ಕೋಟಿ ರೂಪಾಯಿಯ ಸೈಬರ್ ವಂಚನೆ: ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ

Published : Nov 27, 2025, 01:05 PM IST
Engineering Students Arrested in cyber fraud

ಸಾರಾಂಶ

ಪುದುಚೇರಿಯಲ್ಲಿ 90 ಕೋಟಿ ರೂಪಾಯಿ ಮೌಲ್ಯದ ಬೃಹತ್ ಸೈಬರ್ ವಂಚನೆ ಜಾಲವನ್ನು ಪೊಲೀಸರು ಬೇಧಿಸಿದ್ದಾರೆ. ಈ ಪ್ರಕರಣದಲ್ಲಿ, ಎಂಜಿನಿಯರಿಂಗ್ ವಿದ್ಯಾರ್ಥಿಗಳೇ ಆರೋಪಿಗಳಾಗಿದ್ದು,  ಆರೋಪಿಗಳು ಸಿಕ್ಕಿಬಿದ್ದಿದ್ದು ಹೇಗೆ ಎಂಬ ಡಿಟೇಲ್ ಇಲ್ಲಿದೆ.

90 ಕೋಟಿ ರೂ. ಮೌಲ್ಯದ ಸೈಬರ್ ವಂಚನೆ: ಎಂಜಿನಿಯರಿಂಗ್ ವಿದ್ಯಾರ್ಥಿಗಳು ಅಂದರ್:

ಪುದುಚೇರಿ: 90 ಕೋಟಿ ರೂಪಾಯಿ ಮೌಲ್ಯದ ಸೈಬರ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಎಂಜಿನಿಯರ್ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಸೈಬರ್ ವಂಚಕರ ಜಾಲವೂ ಎಂಜಿನಿಯರಿಂಗ್ ಕಾಲೇಜಿನೊಳಗಿನಿಂದಲೇ ಕಾರ್ಯಾಚರಿಸುತ್ತಿತ್ತು. ಪುದುಚೇರಿ ಸೈಬರ್ ಕ್ರೈಂ ಪೊಲೀಸರು ಈ ಬೃಹತ್ ಜಾಲವನ್ನು ಬೇಧಿಸಿದ್ದು, ಆರೋಪಿ ವಿದ್ಯಾರ್ಥಿಗಳು ಸೈಬರ್ ಅಪರಾಧಿಗಳಿಗೆ ತಮ್ಮ ಸ್ನೇಹಿತರು ಹಾಗೂ ಕ್ಲಾಸ್‌ಮೇಟ್‌ಗಳ ಬ್ಯಾಂಕ್‌ ಡಿಟೇಲ್‌ಳನ್ನು ಮಾರಾಟ ಮಾಡುತ್ತಿದ್ದರು. ನಂತರ ಸೈಬರ್ ವಂಚಕರು ಅವರ ಖಾತೆಯಲ್ಲಿದ್ದ ಹಣವನ್ನು ಭಾರತದ ಮೂಲಕ ಅಕ್ರಮವಾಗಿ ವರ್ಗಾಯಿಸಿ ದುಬೈ ಮತ್ತು ಚೀನಾದ ನೆಟ್‌ವರ್ಕ್‌ಗಳ ಮೂಲಕ ಕ್ರಿಪ್ಟೋಕರೆನ್ಸಿಯಾಗಿ ಪರಿವರ್ತಿಸುತ್ತಿದ್ದರು. ಪ್ರಕರಣ ಬೇಧಿಸಿದ ಪೊಲೀಸರು ಈ ಎಂಜಿನಿಯರಿಂಗ್ ಕಾಲೇಜನ್ನು ಸೈಬರ್ ಕ್ರೈಂಗಳ ಹಾಟ್‌ಸ್ಪಾಟ್ ಎಂದು ಕರೆದಿದ್ದಾರೆ.

ಸ್ನೇಹಿತರ ಖಾತೆ ವಿವರಗಳನ್ನು ಸೈಬರ್ ವಂಚಕರಿಗೆ ಮಾರುತ್ತಿದ್ದ ಆರೋಪಿಗಳು:

ದಿನೇಶ್ ಮತ್ತು ಜಯಪ್ರತಾಪ್ ಎಂಬ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳು ಇದ್ದಕ್ಕಿದ್ದಂತೆ ಸ್ಥಗಿತಗೊಂಡಾಗ ಅವರು ಪೊಲೀಸರನ್ನು ಸಂಪರ್ಕಿಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ದಿನೇಶ್ ಮತ್ತು ಜಯಪ್ರತಾಪ್ ಅವರು ತಮ್ಮ ಖಾತೆಯ ವಿವರಗಳನ್ನು ತಮ್ಮ ಸ್ನೇಹಿತನಾದ ಈಗ ಸೈಬರ್ ಅಪರಾಧಿಯಾಗಿರುವ ಹರೀಶ್‌ಗೆ ಹಸ್ತಾಂತರಿಸಿದ್ದರು. ಈ ವಂಚಕ ಹರೀಶ್ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ 20 ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳ ವಿವರಗಳನ್ನು ಸಂಗ್ರಹಿಸಿದ್ದ ಎಂದು ತನಿಖೆಯಿಂದ ತಿಳಿದು ಬಂದಿದೆ. ಈ ವಂಚನೆಯಿಂದ ಬಂದ ಆದಾಯವನ್ನು ಸಂಗ್ರಹಿಸಲು ಸೈಬರ್ ವಂಚಕರು ಇವುಗಳನ್ನು ಬಳಸುತ್ತಿದ್ದರು. ಈ ಖಾತೆಗಳ ಮೂಲಕ ಕನಿಷ್ಠ 7 ಕೋಟಿ ರೂ.ಗಳನ್ನು ಆರೋಪಿಗಳು ವಿತ್ ಡ್ರಾ ಮಾಡಿದ್ದಾರೆ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.

ಒಟ್ಟು 7 ಜನರ ಬಂಧನ: 

ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಎಂಜಿನಿಯರಿಂಗ್ ಪದವೀಧರರು ಸೇರಿದಂತೆ ಏಳು ಜನರನ್ನು ಇಲ್ಲಿಯವರೆಗೆ ಬಂಧಿಸಲಾಗಿದೆ. ಥಾಮಸ್ ಅಲಿಯಾಸ್ ಹಯಗ್ರೀವ, ಹರೀಶ್, ಗಣೇಶನ್, ಗೋವಿಂದರಾಜ್, ಯಶ್ವಿನ್, ರಾಹುಲ್ ಮತ್ತು ಅಯ್ಯಪ್ಪನ್ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಪೊಲೀಸರು 5 ಲಕ್ಷ ರೂ. ನಗದು, 171 ಚೆಕ್ ಪುಸ್ತಕಗಳು, 75 ಎಟಿಎಂ ಕಾರ್ಡ್‌ಗಳು, 20 ಮೊಬೈಲ್ ಫೋನ್‌ಗಳು, ಲ್ಯಾಪ್‌ಟಾಪ್‌ಗಳು, ಕಂಪ್ಯೂಟರ್‌ಗಳು, ಹಲವಾರು ಬ್ಯಾಂಕ್ ಪಾಸ್‌ಬುಕ್‌ಗಳು, ಕ್ರೆಡಿಟ್ ಕಾರ್ಡ್‌ಗಳು ಮತ್ತು ಹುಂಡೈ ವೆರ್ನಾ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಭಾರತದ ಅತೀ ದುಬಾರಿ ನಂಬರ್ ಪ್ಲೇಟ್: ಈ ನಂಬರ್‌ಗಾಗಿ ಅರ್ಜಿ ಸಲ್ಲಿಸಿದವರೆಷ್ಟು? ಸೇಲ್ ಆಗಿದ್ದು ಎಷ್ಟು ಕೋಟಿಗೆ

ಪ್ರಮುಖ ಆರೋಪಿ ಗಣೇಶನ್ ಬ್ಯಾಂಕ್ ಖಾತೆಗಳಿಂದ ಡ್ರಾ ಮಾಡಿದ ಹಣವನ್ನು, ಚೀನಾದ ಸೈಬರ್ ಅಪರಾಧಿಗಳೊಂದಿಗೆ ಸೇರಿ ಕ್ರಿಪ್ಟೋಕರೆನ್ಸಿಯಾಗಿ ಪರಿವರ್ತಿಸಿ , ಕಮಿಷನ್‌ಗಾಗಿ ಅದನ್ನು ಟೆಲಿಗ್ರಾಮ್ ಮೂಲಕ ಕಳುಹಿಸುತ್ತಿದ್ದನೆಂದು ತನಿಖೆಯಿಂದ ತಿಳಿದು ಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಪುದುಚೇರಿಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಸೈಬರ್ ಅಪರಾಧ) ನಿತ್ಯಾ ರಾಧಾಕೃಷ್ಣನ್ ಮಾತನಾಡಿ,, ಈ ಬಂಧನಗಳು ಸೈಬರ್ ವಂಚಕರ ವಿರುದ್ಧ ಮಾತ್ರವಲ್ಲದೆ ಆನ್‌ಲೈನ್ ವಂಚಕರಿಗೆ ಅನುವು ಮಾಡಿಕೊಡುವವರ ವಿರುದ್ಧ ನಡೆದ ಮಹತ್ವದ ಕಾರ್ಯಾಚರಣೆಯಾಗಿದೆ. ಸೈಬರ್ ಅಪರಾಧಿಗಳಿಗೆ ಹಣವನ್ನು ಅಕ್ರಮವಾಗಿ ವರ್ಗಾಯಿಸುತ್ತಿದ್ದವರನ್ನು ಬಂಧಿಸಲು ನಮಗೆ ಸಾಧ್ಯವಾಗಿದೆ. ಈ ಘಟನೆಯಿಂದ ಈ ಸೈಬರ್ ವಂಚಕರ ಈ ಜಾಲಗಳು ಎಷ್ಟು ಸಂಘಟಿತ ಮತ್ತು ಅಂತರರಾಷ್ಟ್ರೀಯವಾಗಿ ಮಾರ್ಪಟ್ಟಿವೆ ಎಂಬುದನ್ನು ಇದು ತೋರಿಸುತ್ತದೆ ಎಂದು ಅವರು ಹೇಳಿದ್ದಾರೆ.

ಸ್ನೇಹಿತರೊಂದಿಗೂ ಬ್ಯಾಂಕ್ ಡಿಟೇಲ್ ವಿವರ ಹಂಚುವುದು ಬೇಡ:

ಇಂತಹ ಘಟನೆಯಿಂದಾಗಿ ಬ್ಯಾಂಕ್ ಡಿಟೇಲ್‌ಗಳನ್ನು ಸ್ನೇಹಿತರೆನಿಸಿಕೊಂಡವರೊಂದಿಗೂ ಹಂಚಿಕೊಳ್ಳುವುದು ಗಂಭೀರ ಕಾನೂನು ಮತ್ತು ಆರ್ಥಿಕ ಪರಿಣಾಮಗಳನ್ನು ಉಂಟುಮಾಡಬಹುದು ಎಂಬುದು ಸಾಬೀತಾಗಿದೆ. ಹೀಗಾಗಿ ಸಾರ್ವಜನಿಕರಿಗೆ ತಮ್ಮ ಬ್ಯಾಂಕ್ ಖಾತೆ ವಿವರಗಳು, ಎಟಿಎಂ ಕಾರ್ಡ್‌ಗಳು ಅಥವಾ ಆನ್‌ಲೈನ್ ಬ್ಯಾಂಕಿಂಗ್ ವಿವರಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ ಮತ್ತು ಇತರರು ತಮ್ಮ ಖಾತೆಗಳನ್ನು ನಿರ್ವಹಿಸಲು ಎಂದಿಗೂ ಅನುಮತಿಸಬೇಡಿ ಎಂದು ಪುದುಚೇರಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಚೀನಾದ 9 ಗಗನಚುಂಬಿ ವಸತಿ ಸಂಕೀರ್ಣದಲ್ಲಿ ಒಮ್ಮಿಂದೊಮ್ಮೆಲೆ ಬೆಂಕಿ: 13 ಜನ ಸಜೀವ ದಹನ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕೆಲಸ ಇಲ್ಲದ ಗಂಡನಿಗೆ ಪತ್ನಿ ಶೀಲದ ಮೇಲೆ ಶಂಕೆ: ನಿದ್ರೆಯಲ್ಲಿದ್ದ ಮಗಳ ಕತ್ತು ಸೀಳಿದ ಪತಿ
ಪುಟಿನ್‌ಗೆ ರಷ್ಯನ್ ಭಾಷೆ ಭಗವದ್ಗೀತೆ ಉಡುಗೊರೆ ನೀಡಿದ ಪ್ರಧಾನಿ ಮೋದಿ, ಭಾರಿ ಮೆಚ್ಚುಗೆ