ಕರಾವಳಿಯತ್ತ ನುಗ್ಗಿ ಬರುತ್ತಿದೆ ಭೀಕರ ‘ಅರ್ನಬ್‌’ ಚಂಡಮಾರುತ; 3 ರಾಜ್ಯಕ್ಕೆ ಮಳೆ ಸಾಧ್ಯತೆ

Published : Oct 27, 2026, 06:34 AM IST
Cyclone Arnab

ಸಾರಾಂಶ

ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ 'ಅರ್ನಬ್' ಚಂಡಮಾರುತವು ಬುಧವಾರ ಆಂಧ್ರಪ್ರದೇಶದ ಕರಾವಳಿಗೆ ಅಪ್ಪಳಿಸಲಿದೆ. ಇದರ ಪ್ರಭಾವದಿಂದ ಆಂಧ್ರ, ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಭಾರಿ ಮಳೆಯಾಗಲಿದ್ದು, ಭೂಕುಸಿತದ ಆತಂಕ ಎದುರಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮೀನುಗಾರಿಕೆ ಮತ್ತು ಪ್ರವಾಸೋದ್ಯಮವನ್ನು ನಿಷೇಧಿಸಲಾಗಿದೆ.

ಅಮರಾವತಿ/ಭುವನೇಶ್ವರ/ಕೋಲ್ಕತಾ: ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ತೀವ್ರ ವಾಯುಭಾರ ಕುಸಿತವು ಸೋಮವಾರ ಚಂಡಮಾರುತವಾಗಿ ರೂಪಾಂತರಗೊಂಡಿದ್ದು, ಬುಧವಾರ ತೀವ್ರ ಸ್ವರೂಪ ಪಡೆದುಕೊಂಡು ಆಂಧ್ರಪ್ರದೇಶದ ಕರಾವಳಿಗೆ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. ಇದು ಆಂಧ್ರಪ್ರದೇಶ, ಒಡಿಶಾ, ಪಶ್ಚಿಮ ಬಂಗಾಳ ಕರಾವಳಿ ಪ್ರದೇಶಗಳಲ್ಲಿ ತೀವ್ರ ಆತಂಕ ಮೂಡಿಸಿದೆ.

ಸೋಮವಾರ ಬೆಳಿಗ್ಗೆ 5.30ರ ವೇಳೆ ಕೇಂದ್ರೀಕೃತಗೊಂಡ ಮಾರುತವು, ಮಧ್ಯರಾತ್ರಿ ವೇಳೆ ತೀವ್ರ ‘ಅರ್ನಬ್‌’ (ಸಮುದ್ರ ಎಂದರ್ಥ) ಚಂಡಮಾರುತವಾಗಿ ಮಾರ್ಪಟ್ಟಿದೆ. ಮಂಗಳವಾರ ಇದು ಅತ್ಯಂತ ತೀವ್ರ ಸ್ವರೂಪ ಪಡೆದುಕೊಂಡು, ಅಂತಿಮವಾಗಿ ಬುಧವಾರ ಮುಂಜಾನೆ ಆಂಧ್ರ ಕರಾವಳಿಗೆ ಅಪ್ಪಳಿಸಲಿದೆ.

ಆಂಧ್ರ ಕರಾವಳಿಗೆ ಹೈಅಲರ್ಟ್

ಚಂಡಮಾರುತದ ಪ್ರಭಾವದಿಂದ 3 ದಿನಗಳ ಕಾಲ ಆಂಧ್ರ ಕರಾವಳಿ, ಯಾನಾಂ ಮತ್ತು ರಾಯಲಸೀಮಾ ಪ್ರದೇಶಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದೆ. ಹೀಗಾಗಿ ಈ ಭಾಗಗಳಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ.

ಒಡಿಶಾದಲ್ಲಿ ಮೀನುಗಾರಿಕೆ ನಿಷೇಧ

ನೆರೆಯ ಆಂಧ್ರಪ್ರದೇಶದಕ್ಕೆ ಅಪ್ಪಳಿಸುತ್ತಿರುವ ಚಂಡಮಾರುತವು, ಒಡಿಶಾದ ದಕ್ಷಿಣ ಜಿಲ್ಲೆಗಳಾದ ಗಂಜಾಂ, ಗಜಪತಿ, ರಾಯಗಢ, ಮಲ್ಕಾನ್‌ಗಿರಿ, ಕೊರಾಪುಟ್ ಮತ್ತು ನಬರಂಗ್‌ಪುರಗಳಿಗೂ ತಟ್ಟಲಿದೆ. ಈ ಹಿನ್ನೆಲೆಯಲ್ಲಿ ಒಡಿಶಾ ಸರ್ಕಾರವು 6 ಜಿಲ್ಲೆಗಳಲ್ಲಿ ಮೀನುಗಾರಿಕೆ ಚಟುವಟಿಕೆಗಳನ್ನು ಹಾಗೂ ಬೆಟ್ಟಗಳು, ಜಲಪಾತಗಳು ಮತ್ತು ಅಣೆಕಟ್ಟುಗಳ ಬಳಿ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಿದೆ.

ಪಶ್ಚಿಮ ಬಂಗಾಳದಲ್ಲೂ ಭೀತಿ

ಪಶ್ಚಿಮ ಬಂಗಾಳದಲ್ಲೂ ಚಂಡಮಾರುತದ ಪ್ರಭಾವದಿಂದ ಅ.28ರಿಂದ 30 ರವರೆಗೆ ಭಾರಿ ಮಳೆಯಾಗಲಿದೆ ಎಂದು ಕೋಲ್ಕತ್ತಾದ ಹವಾಮಾನ ಇಲಾಖೆ ಎಚ್ಚರಿಸಿದೆ. ಡಾರ್ಜೀಲಿಂಗ್, ಕಾಲಿಂಪಾಂಗ್, ಅಲಿಪುರ್ದಾರ್ ಮತ್ತು ಜಲ್ಪೈಗುರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಡಾರ್ಜೀಲಿಂಗ್‌ನ ಬೆಟ್ಟ ಪ್ರದೇಶಗಳಲ್ಲಿ ಭೂಕುಸಿತ ಉಂಟಾಗುವ ಭೀತಿ ಎದುರಾಗಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಭಾರತ ಸೇರಿ 60 ಸಾವಿರ ಉದ್ಯೋಗಿಗಳಿಗೆ ಸ್ವಯಂ ನಿವೃತ್ತಿ ಕೊಟ್ಟು ಮನೆಗೆ ಕಳಿಸ್ತಿರೋ Microsoft
ಸಚಿನ್ ತೆಂಡೂಲ್ಕರ್ ಕುಟುಂಬದಲ್ಲಿ ಮತ್ತೊಂದು ಸಂಭ್ರಮ! ಸೋದರ ಸೊಸೆಯ ಸಾಧನೆಗೆ ಮಾಸ್ಟರ್ ಬ್ಲಾಸ್ಟರ್ ಹೇಳಿದ್ದೇನು?