ಭುವನೇಶ್ವರ (ಡಿ.2): ಜೋವಾದ್ ಚಂಡಮಾರುತ (Cyclone Jowad) ಡಿಸೆಂಬರ್ 4 ರಂದು ರಾಜ್ಯವನ್ನು ತಲುಪುವ ಸಾಧ್ಯತೆಯಿದೆ ಎಂಬ ಸುದ್ದಿ ಬೆನ್ನಲ್ಲೇ ಮುಂಜಾಗ್ರತಾ ಕ್ರಮವಾಗಿ ಒಡಿಶಾ ಸರಕಾರ ಎಲ್ಲಾ ಜಿಲ್ಲೆಗಳಲ್ಲಿ ಎಚ್ಚರಿಕೆ ನೀಡಿದೆ. ಭಾರತೀಯ ಹವಾಮಾನ ಇಲಾಖೆಯು ಒಡಿಶಾದ ಹಲವು ಜಿಲ್ಲೆಗಳಲ್ಲಿ ರೆಡ್, ಆರೆಂಜ್ ಮತ್ತು ಎಲ್ಲೋ ಅಲರ್ಟ್ ಘೋಷಿಸಿದೆ.
ಒಡಿಶಾದ ಕರಾವಳಿ ಭಾಗದಲ್ಲಿ ಅತ್ಯಂತ ಹೆಚ್ಚು ಮಳೆ ಸುರಿಯಲಿದೆ ಎಂದು ಇಲಾಖೆಯು ಮುನ್ಸೂಚನೆ ನೀಡದ ಬೆನ್ನಲ್ಲೇ ಡಿಸೆಂಬರ್ 2ರಂದು 13 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಜನರನ್ನು ಸ್ಥಳಾಂತರ ಮಾಡಲು ಸಿದ್ಧತೆ ಮಾಡಿಕೊಳ್ಳುವಂತೆ ಒಡಿಶಾ ಸರಕಾರ ಸೂಚನೆ ಹೊರಡಿಸಿದೆ. ಮತ್ತು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಾಗಿ ಎನ್‌ಡಿಆರ್‌ಎಫ್ (NDRF)ಓಡಿಆರ್‌ಎಎಫ್ (ODRAF) ಮತ್ತು ಅಗ್ನಿಶಾಮಕ ಇಲಾಖೆ ಸಿಬ್ಬಂದಿಯನ್ನು ಕರೆಸಿಕೊಂಡಿದ್ದು ಈ ಮೂಲಕ ವಿಪತ್ತು ನಿರ್ವಹಣಾ ಕಾರ್ಯತಂತ್ರ ಹೆಣೆದಿದೆ.
undefined
ಯಾವ ಜಿಲ್ಲೆಗಳಲ್ಲಿ ರೆಡ್, ಆರೆಂಜ್ ಮತ್ತು ಎಲ್ಲೋ ಅಲರ್ಟ್:
ಜೋವಾದ್ ಚಂಡಮಾರುತದ ಹಿನ್ನೆಲೆ ಒಡಿಶಾದ ಗಜಪತಿ, ಗಂಜಾಂ, ಪುರಿ ಮತ್ತು ಜಗತ್‌ಸಿಂಗ್‌ಪುರ ಜಿಲ್ಲೆಗಳಲ್ಲಿ ರೆಡ್ ಘೋಷಣೆಯಾಗಿದೆ. ಕೇಂದ್ರಪರ,ಕಟಕ್, ಖುರ್ದಾ,ನಯಾಗಢ, ಕಂಧಮಾಲ್, ರಾಯಗಡ ಮತ್ತು ಕೊರಾಪುಟ್ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ಬಾಲಸೋರ್, ಭದ್ರಕ್, ಜಾಜ್‌ಪುರ್ ಮತ್ತು ಮಲ್ಕಾನ್‌ಗಿರಿ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆಯಶಾಗಿದೆ.
Cyclone Jawad: ಒಡಿಶಾದ ಮೇಲೆ ಕಣ್ಣಿಟ್ಟ ಜೋವಾದ್ ಚಂಡಮಾರುತ
ಬೆಸ್ತರಿಗೆ ಎಚ್ಚರಿಕೆ:
ಚಂಡಮಾರುತದ ವೇಗ ಗಂಟೆಗೆ 08-90 ಕಿಮೀ ಇರಲಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರವೂ ಅಧಿಕವಾಗಿರಲಿದೆ. ಡಿಸೆಂಬರ್ 3 ರಿಂದ ಡಿಸೆಂಬರ್ 5ರವರೆಗೆ ಸಾಗರ ಪ್ರದೇಶಗಳಲ್ಲಿ ನೆಲೆಸಿರುವ ಜನರು ಬಹಳ ಎಚ್ಚರ ವಹಿಸಬೇಕು. ಅದರಲ್ಲೂ ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ತಜ್ಞರು (meteorologist) ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ಮೀನುಗಾರಿಕೆಗೆ ತೆರಳಿರುವವರು ತಕ್ಷಣವೇ ಹಿಂತಿರುಗಬೇಕೆಂದು ಎಂದು ಸೂಚನೆ ಹೊರಡಿಸಲಾಗಿದೆ.
Cyclone Jawad: ಆಂಧ್ರ, ಒಡಿಶಾಗೆ ಆತಂಕ, ಎಚ್ಚೆತ್ತ ಸರ್ಕಾರ: ಪ್ರಧಾನಿ ಮೋದಿಯಿಂದ ಪರಿಶೀಲನಾ ಸಭೆ
ಕರ್ನಾಟಕದ 12 ರೈಲುಗಳ ಸೇವೆ ಸ್ಥಗಿತ:
ಜವಾದ್ ಚಂಡಮಾರುತ ಅಪ್ಪಳಿಸುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಸಂಚರಿಸುವ 12 ರೈಲುಗಳ ಸೇವೆಯನ್ನು ಡಿಸೆಂಬರ್ 2ರಿಂದ ರದ್ದು ಮಾಡುವುದಾಗಿ ನೈಋತ್ಯ ರೈಲ್ವೆ ವಲಯ ಮಾಹಿತಿ ಪ್ರಕಟಿಸಿದೆ.
1. ಡಿಸೆಂಬರ್ 2 : ರೈಲು ಸಂಖ್ಯೆ 12509 ಬೆಂಗಳೂರು ಕಂಟೋನ್ಮೆಂಟ್ – ಗುವಾಹಟಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್.
2. ಡಿಸೆಂಬರ್ 3: ರೈಲು ಸಂಖ್ಯೆ 12245 ಹೌರಾ – ಯಶವಂತಪುರ ದುರೊಂತೋ ಎಕ್ಸ್ ಪ್ರೆಸ್.
3. ಡಿಸೆಂಬರ್ 3: ರೈಲು ಸಂಖ್ಯೆ 22817 ಹೌರಾ – ಮೈಸೂರು ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್.
4. ಡಿಸೆಂಬರ್: 3 ರೈಲು ಸಂಖ್ಯೆ 12863 ಹೌರಾ – ಯಶವಂತಪುರ ಎಕ್ಸ್ ಪ್ರೆಸ್.
5. ಡಿಸೆಂಬರ್ 4: ರೈಲು ಸಂಖ್ಯೆ 18463 ಭುವನೇಶ್ವರ – ಕೆಎಸ್ಆರ್ ಬೆಂಗಳೂರು ಪ್ರಶಾಂತಿ ಎಕ್ಸ್ ಪ್ರೆಸ್.
6. ಡಿಸೆಂಬರ್ 3: ರೈಲು ಸಂಖ್ಯೆ 12889 ಟಾಟಾನಗರ – ಯಶವಂತಪುರ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್.
7. ಡಿಸೆಂಬರ್ 4: ರೈಲು ಸಂಖ್ಯೆ 18637 ಹಟಿಯಾ – ಬೆಂಗಳೂರು ಕಂಟೋನ್ಮೆಂಟ್ ಎಕ್ಸ್ ಪ್ರೆಸ್.
8.ಡಿಸೆಂಬರ್ 3: ರೈಲು ಸಂಖ್ಯೆ 22883 ಪುರಿ – ಯಶವಂತಪುರ ಗರೀಬ್ ರಥ್ ಎಕ್ಸ್ ಪ್ರೆಸ್.
9.ಡಿಸೆಂಬರ್ 3: ರೈಲು ಸಂಖ್ಯೆ 12246 ಯಶವಂತಪುರ – ಹೌರಾ ದುರಾಂಟೊ ಎಕ್ಸ್ ಪ್ರೆಸ್.
10. ಡಿಸೆಂಬರ್ 3: ರೈಲು ಸಂಖ್ಯೆ 12246 ಯಶವಂತಪುರ – ಹೌರಾ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್.
11. ಡಿಸೆಂಬರ್ 3: ರೈಲು ಸಂಖ್ಯೆ 18048 ವಾಸ್ಕೋ-ಡ-ಗಾಮಾ – ಹೌರಾ ಅಮರಾವತಿ ಎಕ್ಸ್ ಪ್ರೆಸ್
12. ಡಿಸೆಂಬರ್ 3. ರೈಲು ಸಂಖ್ಯೆ 18464 ಕೆಎಸ್ಆರ್ ಬೆಂಗಳೂರು – ಭುವನೇಶ್ವರ ಪ್ರಶಾಂತಿ ಎಕ್ಸ್ ಪ್ರೆಸ್.