ಕರ್ನಾಟಕದ 5 ಸೇರಿ 37 ಜಿಲ್ಲೆಗಳಲ್ಲಿ ಸೋಂಕು ಹೆಚ್ಚಳ: ಕೇಂದ್ರ!

Published : Aug 11, 2021, 09:57 AM IST
ಕರ್ನಾಟಕದ 5 ಸೇರಿ 37 ಜಿಲ್ಲೆಗಳಲ್ಲಿ ಸೋಂಕು ಹೆಚ್ಚಳ: ಕೇಂದ್ರ!

ಸಾರಾಂಶ

* ಕೊಡಗು, ಉ.ಕ., ದ.ಕ. ಚಾ.ನಗರ, ಉಡುಪಿಯಲ್ಲಿ ಏರಿಕೆ * ಕರ್ನಾಟಕದ 5 ಸೇರಿ 37 ಜಿಲ್ಲೆಗಳಲ್ಲಿ ಸೋಂಕು ಹೆಚ್ಚಳ: ಕೇಂದ್ರ * 5 ರಾಜ್ಯಗಳಲ್ಲಿ ಸೋಂಕು ‘ಆರ್‌’ ದರ ಹೆಚ್ಚಳ * ಕೇರಳದಲ್ಲೇ ಶೇ.51ರಷ್ಟು ಹೊಸ ಪ್ರಕರಣ

ನವದೆಹಲಿ(ಆ.11): ಕಳೆದ 2 ವಾರದಲ್ಲಿ ಕರ್ನಾಟಕದ 5 ಜಿಲ್ಲೆಗಳು ಸೇರಿ 37 ಜಿಲ್ಲೆಗಳಲ್ಲಿ ಕೋವಿಡ್‌ ಸೋಂಕು ಹೆಚ್ಚಳವಾಗುತ್ತಿದೆ. ಇದು ಕಳವಳಕಾರಿ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಕಳವಳ ವ್ಯಕ್ತಪಡಿಸಿದೆ. ಕರ್ನಾಟಕದ ಆ 5 ಜಿಲ್ಲೆಗಲೆಂದರೆ ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಾಮರಾಜನಗರ ಹಾಗೂ ಉಡುಪಿ.

ಇದೇ ವೇಳೆ, ಹಿಮಾಚಲ ಪ್ರದೇಶ, ಪಂಜಾಬ್‌, ಗುಜರಾತ್‌, ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದಲ್ಲಿ ಸೋಂಕು ಮರುಉತ್ಪತ್ತಿ (ಒಬ್ಬರಿಂದ ಇನ್ನೊಬ್ಬರಿಗೆ ಹರಡುವಿಕೆ- ‘ಆರ್‌’ ದರ) ಪ್ರಮಾಣ 1ಕ್ಕಿಂತ ಹೆಚ್ಚಿದೆ. ಇದೂ ಕೂಡ ಅಪಾಯಕಾರಿ ಎಂದಿದೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವಾಲಯದ ಅಧಿಕಾರಿಗಳು, ಕಳೆದ 7 ದಿನಗಳಿಂದ ಭಾರತದಲ್ಲಿ ಪತ್ತೆಯಾಗುತ್ತಿರುವ ಒಟ್ಟು ಕೋವಿಡ್‌ ಪ್ರಕರಣಗಳ ಪೈಕಿ ಶೇ.51.51ರಷ್ಟುಕೇಸುಗಳು ಕೇರಳವೊಂದರಲ್ಲಿಯೇ ಪತ್ತೆಯಾಗುತ್ತಿವೆ ಎಂದಿದೆ.

ಕೇರಳದ 11 ಜಿಲ್ಲೆ, ತಮಿಳುನಾಡಿನ 7, ಕರ್ನಾಟಕದ 5 ಜಿಲ್ಲೆಗಳೂ ಸೇರಿ ದೇಶದ 9 ರಾಜ್ಯಗಳ 37 ಜಿಲ್ಲೆಗಳಲ್ಲಿ ಕೋವಿಡ್‌ ಸೋಂಕು ಪ್ರಮಾಣ ಏರುಗತಿಯಲ್ಲಿದೆ. 11 ರಾಜ್ಯಗಳ 44 ಜಿಲ್ಲೆಗಳಲ್ಲಿ ವಾರದ ಸೋಂಕು ಪ್ರಮಾಣ ಶೇ.10ಕ್ಕಿಂತ ಅಧಿಕವಿದೆ,

ಈ ನಡುವೆ ಮಹಾರಾಷ್ಟ್ರದಲ್ಲಿ 34 ಸೋಂಕಿತರೂ ಸೇರಿ ದೇಶದಲ್ಲಿ ಒಟ್ಟು 86 ಅಪಾಯಕಾರಿ ಡೆಲ್ಟಾಪ್ಲಸ್‌ ವೈರಸ್‌ ಮಾದರಿ ಪತ್ತೆಯಾಗಿವೆ ಎಂದು ಎಚ್ಚರಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಶೇ.100ರಷ್ಟು ಕ್ರಿಶ್ಚಿಯನ್ ಜನಸಂಖ್ಯೆ ಇರುವ ಕೇರಳದ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಗೆಲುವು
ಬಾಡಿಗೆದಾರರ ಮನೆಯಿಂದ ಹೊರಹಾಕಲು ಬಂದ ಮಾಲೀಕನಿಗೆ ಆಘಾತ, ತಾಯಿ-ಇಬ್ಬರು ಮಕ್ಕಳ ಶವಪತ್ತೆ