
ನವದೆಹಲಿ: ನಿಗದಿತ ಅವಧಿಯೊಳಗೆ ಪ್ರವೇಶ ಶುಲ್ಕ ಪಾವತಿಸಲು ಆಗದ ಕಾರಣ ಐಐಟಿ ಧನಬಾದ್‌ನಲ್ಲಿ ಕಳೆದುಕೊಂಡಿದ್ದ ದಲಿತ ಯುವಕನಿಗೆ ಮರಳಿ ಸೀಟು ನೀಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಸಂವಿಧಾನದ 142 ವಿಧಿ ಅಡಿ ಸುಪ್ರೀಂಕೋರ್ಟಿಗಿರುವ ವಿಶೇಷ ಶಕ್ತಿ ಬಳಸಿ ಈ ಆದೇಶ ಹೊರಡಿಸಿದೆ. ಅತುಲ್ ಕುಮಾರ್‌ಎಂಬ ವಿದ್ಯಾರ್ಥಿ ಜಾರ್ಖಂಡ್‌ನಲ್ಲಿನ ಐಐಟಿ ಧನ್‌ಬಾದ್‌ನಲ್ಲಿ ಪ್ರವೇಶ ಪಡೆಯಲು ಎಲ್ಲಾ ಪರೀಕ್ಷೆ ಎದುರಿಸಿದ್ದ. ಆದರೆ ಕೊನೆಯ ದಿನದ ಒಳಗೆ ಶುಲ್ಕ ಪಾವತಿ ಮಾಡಲು ಆಗಿರಲಿಲ್ಲ. ಹೀಗಾಗಿ ಇವರ ಪ್ರವೇಶವನ್ನು ಐಐಟಿ ನಿರಾಕರಿಸಿತ್ತು.
ಇದನ್ನು ವಿರೋಧಿಸಿ ಅತುಲ್ ಕುಟುಂಬವು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಇದರ ವಿಚಾರಣೆ ನಡೆಸಿದ ಪೀಠ, ಶುಲ್ಕ ಕಾರಣ ಇಂಥ ಪ್ರತಿಭಾವಂತ ವಿದ್ಯಾರ್ಥಿ ಹೊರ ಹೋಗಲು ನಾವು ಬಿಡಬಾರದು. ಅವಕಾಶದಿಂದ ವಂಚಿತನಾಗಲು ಅನುವು ಮಾಡಿಕೊಡಬಾರದು. ಹೀಗಾಗಿ ಸಂವಿಧಾನದ 142ರ ವಿಶೇಷ ಅಧಿಕಾರದ ಅಡಿ ಪ್ರವೇಶಕ್ಕೆ ಅವಕಾಶ ಮಾಡಿಕೊಡಲು ಐಐಟಿ ಧನಬಾದ್‌ಗೆ ಆದೇಶ ಹೊರಡಿಸಲಾಗುವುದು ಎಂದು ಹೇಳಿತು.
ಉತ್ತರ ಪ್ರದೇಶದ ಮುಜಫ್ಫರ್‌ನಗರದ ಕೂಲಿ ಕಾರ್ಮಿಕನ ಮಗ 18 ವರ್ಷದ ಅತುಲ್ ಕುಮಾರ್ ಎನ್ನುವ ದಲಿತ ಯುವಕ ಧನಬಾದ್ ಐಐಟಿಯಲ್ಲಿ ಸೀಟ್ ಪಡೆದುಕೊಂಡಿದ್ದ. ಆದರೆ ಕಾಲೇಜಿಗೆ 17,500 ರು. ಹಣವನ್ನು ಠೇವಣಿ ರೂಪದಲ್ಲಿ ಕಟ್ಟಬೇಕಿತ್ತು. ಬಡ ಕುಟುಂಬದ ಈ ಯುವಕನಿಗೆನಿಗದಿತ ಸಮಯದೊಳಗೆ ಹಣವನ್ನು ಕಟ್ಟುವುದಕ್ಕೆ ಸಾಧ್ಯವಾಗದೇ ಐಐಟಿ ಪ್ರವೇಶದ ಅವಕಾಶ ಕೈ ತಪ್ಪಿ ಹೋಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ