
ಬೆಂಗಳೂರು(ಜೂ.05): ಕೇಂದ್ರ ಗೃಹ ಸಚಿವಾಲಯ ಹಾಗೂ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ನಿರ್ದೇಶನದಂತೆ ರಾಜ್ಯದಲ್ಲಿ ಆಡಳಿತ ಭಾಷೆ, ಪತ್ರವ್ಯವಹಾರ, ಪ್ರಮಾಣ ಪತ್ರಗಳಲ್ಲಿ ‘ದಲಿತ’ ಎನ್ನುವ ಪದವನ್ನು ಬಳಸದೇ ಪರಿಶಿಷ್ಟಜಾತಿ/ ಪರಿಶಿಷ್ಟಪಂಗಡ ಎಂದು ಬಳಸುವಂತೆ ಸಮಾಜ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.
ಗುರುವಾರ ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಅವರು ಈ ವಿಷಯ ತಿಳಿಸಿದ್ದಾರೆ. ‘ಹರಿಜನ’ ಮತ್ತು ‘ಗಿರಿಜನ’ ಎನ್ನುವ ಪದವನ್ನು ಬಳಕೆ ಮಾಡಬಾರದು. ಆಂಗ್ಲ ಭಾಷೆಯಲ್ಲಿ ಎಸ್‌ಸಿ/ಎಸ್‌ಟಿ ಎಂದು ನಮೂದಿಸಬಹುದಾಗಿದೆ.
1 ಕೊರೋನಾ ಇಂಜೆಕ್ಷನ್‌ಗೆ 7000 ರುಪಾಯಿ..!
ಇತರೇ ಭಾಷೆಗಳಲ್ಲಿ ಸೂಕ್ತ ಭಾಷಾಂತರಗೊಳಿಸಿದ ಪದವನ್ನು ಬಳಸಬೇಕು. ರಾಜ್ಯದಲ್ಲಿ ‘ಪರಿಶಿಷ್ಟಜಾತಿ/ಪರಿಶಿಷ್ಟಪಂಗಡ’ ಎಂದು ನಮೂದಿಸಬಹುದು ಎಂದು ತಿಳಿಸಿದ್ದಾರೆ. ಎಸ್‌ಟಿ, ಎಸ್‌ಸಿ ಜನರ ಮೇಲೆ ದೌರ್ಜನ್ಯ, ಜಾತಿ ನಿಂದನೆ ಘಟನೆಗಳೂ ನಡೆಯುತ್ತಲೇ ಇರುತ್ತವೆ.
'ದಲಿತ' ಎನ್ನುವ ಪದ ಬಳಕೆಯ ಮೂಲಕವೇ ಜನರನ್ನು ನಿಂದಿಸುವ ಘಟನೆಯೂ ವರದಿಯಾಗುತ್ತಿರುತ್ತದೆ. ಈ ನಿಟ್ಟಿನಲ್ಲಿ 'ದಲಿತ' ಪದವನ್ನೇ ಬಳಸದಂತೆ ಸೂಚನೆ ಹೊರಡಿಸಿರುವುದು ಮಹತ್ವದ್ದಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ