
ನೆಲ್ಲೂರು(ಮೇ.11): ಕೊರೋನಾ ರೋಗಿಗಳ ಚಿಕಿತ್ಸೆಗೆ ಪರಿಣಾಮಕಾರಿ ಎಂದು ಹೇಳಲಾಗುತ್ತಿರುವ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಅಭಿವೃದ್ಧಿಪಡಿಸಿರುವ ಹೊಸ ಔಷಧ 2-ಡಿಜಿ, ಮಂಗಳವಾರ ಅಥವಾ ಬುಧವಾರವೇ ರೋಗಿಗಳ ಬಳಕೆಗೆ ಲಭ್ಯವಾಗಲಿದೆ. ಡಿಆರ್‌ಡಿಒ ಮುಖ್ಯಸ್ಥ ಡಾ.ಸತೀಶ್ ರೆಡ್ಡಿ ಸೋಮವಾರ ಈ ವಿಷಯವನ್ನು ತಿಳಿಸಿದ್ದಾರೆ. ಇದರಿಂದಾಗಿ ತೀವ್ರ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿರುವವರು ಮತ್ತು ಆಕ್ಸಿಜನ್ ಸಿಲಿಂಡರ್ ಮೇಲೆ ಅವಲಂಬಿತವಾಗಿರುವವರಿಗೆ ದೊಡ್ಡ ಪ್ರಮಾಣದಲ್ಲಿ ನೆರವಾಗುವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.
ಡಿಆರ್‌ಡಿಒ ಕೋವಿಡ್ ಔಷಧಿ ಯಾವಾಗ ಬಿಡುಗಡೆ? ಸಿಕ್ತು ಗುಡ್ ನ್ಯೂಸ್!!
2-ಡಿಆಕ್ಸಿ-ಡಿ- ಗ್ಲುಕೋಸ್ ಅನ್ನು ಮೇ 11 ಅಥವಾ 12ರಂದು ಬಿಡುಗಡೆ ಮಾಡಲಾಗುವುದು. ಮೊದಲ ಕಂತಿನಲ್ಲಿ 10 ಸಾವಿರ ಪೊಟ್ಟಣಗಳು ರೋಗಿಗಳ ಬಳಕೆಗೆ ಲಭ್ಯವಾಗಲಿದೆ ಎಂದು ಡಿಆರ್‌ಡಿಒ ಮುಖ್ಯಸ್ಥ ಡಾ.ಜಿ.ಸತೀಶ್ ರೆಡ್ಡಿ ಹೇಳಿದ್ದಾರೆ. ಈ ಔಷಧಿಗೆ ಈಗಾಗಲೇ ಭಾರತೀಯ ಔಷಧ ನಿಯಂತ್ರಣ ಸಂಸ್ಥೆ (ಡಿಸಿಜಿಐ) ಅನುಮೋದನೆ ನೀಡಿದೆ. ಹೈದರಾಬಾದ್ ಮೂಲದ ಡಾ| ರೆಡ್ಡೀಸ್ ಲ್ಯಾಬ್ ಸಹಯೋಗದಲ್ಲಿ ಈ ಔಷಧಿಯನ್ನು ಉತ್ಪಾದನೆ ಮಾಡಲಾಗುತ್ತಿದೆ.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ