ತಮ್ಮ ಸಮಾಧಿಯನ್ನು ತಾವೇ ಅಗೆಯುತ್ತಿರುವವರನ್ನು ನಾವು ಏಕೆ ತಡೆಯಬೇಕು? ಮೋದಿ ವ್ಯಂಗ್ಯ

Published : Aug 06, 2025, 07:44 AM IST
Narendra Modi

ಸಾರಾಂಶ

ಪ್ರಧಾನಿ ಮೋದಿ, ವಿಪಕ್ಷಗಳು ಆಪರೇಷನ್ ಸಿಂದೂರ ಚರ್ಚೆಗೆ ಒತ್ತಾಯಿಸುವುದನ್ನು 'ತಮ್ಮ ಗೋರಿಯನ್ನು ತಾವೇ ತೋಡಿಕೊಳ್ಳುವುದು' ಎಂದು ವ್ಯಂಗ್ಯವಾಡಿದ್ದಾರೆ. 

ನವದೆಹಲಿ: ‘ವಿಪಕ್ಷಗಳು ಮುಂಗಾರು ಅಧಿವೇಶನದಲ್ಲಿ ಆಪರೇಷನ್ ಸಿಂದೂರ ಕುರಿತಾದ ಚರ್ಚೆಗೆ ಸಮಯ ಕೇಳುವ ಮೂಲಕ ತಮ್ಮ ಗೋರಿಯನ್ನು ತಾವೇ ತೋಡಿಕೊಂಡವು’ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಕ್ಷ ವಿರುದ್ಧ ವ್ಯಂಗ್ಯವಾಡಿದ್ದಾರೆ. ನರೇಂದ್ರ ಮೋದಿ 3.0 ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಎನ್‌ಡಿಎ ಕೂಟದ 2ನೇಯ ಸಂಸದೀಯ ಸಭೆ ದೆಹಲಿಯಲ್ಲಿ ನಡೆಯಿತು.

ಈ ವೇಳೆ ಮಾತನಾಡಿದ ಪ್ರಧಾನಿ, ‘ ವಿಪಕ್ಷಗಳು ಪ್ರತಿದಿನ ಸಂಸತ್ತಿನ ಬಾವಿಗಿಳಿದು ಘೋಷಣೆಗಳನ್ನು ಕೂಗುವುದು, ಪ್ರತಿಭಟನೆ ನಡೆಸುವ ಮೂಲಕ ತಮ್ಮನ್ನು ತಾವು ಬಹಿರಂಗಪಡಿಸಿಕೊಳ್ಳುತ್ತಿದ್ದಾರೆ. ತಮ್ಮ ಸಮಾಧಿಯನ್ನು ತಾವೇ ಅಗೆಯುತ್ತಿರುವವರನ್ನು ನಾವು ಏಕೆ ತಡೆಯಬೇಕು? ಅವರು ತಮ್ಮ ಕಾಲಿನ ಮೇಲೆ ತಾವೇ ಕಲ್ಲು ಹಾಕಿಕೊಳ್ಳುತ್ತಿದ್ದಾರೆ. ಮೈತ್ರಿಕೂಟದ ಸಂಸದರು ಸದನದಲ್ಲಿ ಏನೂ ನಡೆಯುತ್ತಿಲ್ಲ ಎಂದು ಭಾವಿಸಬಹುದು. ಆದರೆ ಬಹಳಷ್ಟು ನಡೆಯುತ್ತಿದೆ. ರಾಷ್ಟ್ರವು ಇದನ್ನೆಲ್ಲ ಗಮನಿಸುತ್ತಿದೆ’ ಎಂದು ಹರಿಹಾಯ್ದರು.

ಇದೇ ವೇಳೆ ಪಹಲ್ಗಾಂ ನರಮೇಧಕ್ಕೆ ದಿಟ್ಟ ಉತ್ತರವಾಗಿ ಭಾರತ ನಡೆಸಿದ ಆಪರೇಷನ್ ಸಿಂದೂರ, ಪಹಲ್ಗಾಂ ಉಗ್ರರ ವಿರುದ್ಧದ ಮಹಾದೇವ ಕಾರ್ಯಾಚರಣೆ ಯಶಸ್ಸಿಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಮೈತ್ರಿಕೂಟದ ಸಂಸದರು ಸನ್ಮಾನಿಸಿದರು.

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದೇಗುಲ ದುಡ್ಡು ಅನ್ಯ ಕೆಲಸಕ್ಕೆ ಬಳಸಕೂಡದು : ಸುಪ್ರೀಂ
ಉಗ್ರವಾದದ ವಿರುದ್ಧ ಜಂಟಿ ಹೋರಾಟ : ಮೋದಿ ಘೋಷಣೆ