
ಕೋಯಿಕ್ಕೋಡ್ (ಜ.21): ಬಸ್ಸಿನಲ್ಲಿ ಲೈಂಗಿಕ ದೌರ್ಜನ್ಯಕ್ಕೊಳಗಾದ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿಪ್ರಸಾರವಾದ ನಂತರ ಕೋಝಿಕ್ಕೋಡ್ ಮೂಲದ ದೀಪಕ್ ಆ*ತ್ಮಹ*ತ್ಯೆ ಮಾಡಿಕೊಂಡ ಪ್ರಕರಣದ ಆರೋಪಿ ಶಿಮ್ಜಿತಾಳನ್ನು ಬಂಧಿಸಲಾಗಿದೆ. ವಡಕಾರದಲ್ಲಿರುವ ಆಕೆಯ ಸಂಬಂಧಿಕರ ಮನೆಯಿಂದ ಮಹಿಳೆಯನ್ನು ಬಂಧಿಸಲಾಗಿದೆ. ಪ್ರಕರಣ ದಾಖಲಾದ ನಂತರ ಶಿಮ್ಜಿತಾ ತಲೆಮರೆಸಿಕೊಂಡಿದ್ದರು. ಪೊಲೀಸರ ತನಿಖೆಯ ನಂತರ ಆಕೆಯನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಶಿಮ್ಜಿತಾ ಈ ಹಿಂದೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಕೋಝಿಕ್ಕೋಡ್ ಜಿಲ್ಲಾ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಲಾಗಿತ್ತು.
ಶಿಮ್ಜಿತಾ ಮುಸ್ತಫಾಗಾಗಿ ಪೊಲೀಸರು ಲುಕ್ ಔಟ್ ನೋಟಿಸ್ ಹೊರಡಿಸಿದ್ದರು. ಪೊಲೀಸರು ಹೆಚ್ಚಿನ ದೃಶ್ಯಗಳನ್ನು ಸಂಗ್ರಹಿಸುವ ಪ್ರಯತ್ನದಲ್ಲಿದ್ದಾರೆ. ಅದರೊಂದಿಗೆ ಖಾಸಗಿ ಬಸ್ ನೌಕರರಿಂದ ಹೇಳಿಕೆಗಳನ್ನು ಪಡೆಯುವ ಪ್ರಕ್ರಿಯೆಯಲ್ಲಿದ್ದಾರೆ. ಬಸ್ಸಿನಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಕೂಡ ಪರಿಶೀಲನೆ ಮಾಡಲಾಗಿದ. ಆದರೆ, ಯಾವುದೇ ಪ್ರಮುಖ ಮಾಹಿತಿ ಇದರಿಂದ ಸಿಕ್ಕಿಲ್ಲ.
ಇನ್ನು ಬಸ್ ಪ್ರಯಾಣದ ಸಂದರ್ಭದಲ್ಲಿ ಕಿರುಕುಳಕ್ಕೆ ಒಳಗಾದ ಬಗ್ಗೆ ಯಾರೂ ದೂರು ನೀಡಿಲ್ಲ ಎಂದು ಪ್ರಯಾಣಿಕರೊಬ್ಬರು ಪ್ರತಿಕ್ರಿಯೆ ನೀಡಿದ್ದಾರೆ. ಬಸ್‌ನಲ್ಲಿ ಪ್ರಯಾಣಿಸಿದ ಇತರರ ಜೊತೆಗೆ ನೌಕರರ ಹೇಳಿಕೆಗಳನ್ನು ಶೀಘ್ರದಲ್ಲೇ ದಾಖಲಿಸಲಾಗುವುದು ಎಂದಿದ್ದಾರೆ.
ಘಟನೆ ನಡೆದ ಆರನೇ ದಿನದಂದು ಶಿಮ್ಜಿತಾಳನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಕಾರಣವಾದ ಘಟನೆ ಕಳೆದ ಶುಕ್ರವಾರ ನಡೆದಿದೆ. ಪಯ್ಯನ್ನೂರಿನಲ್ಲಿ ಬಸ್ ಪ್ರಯಾಣದ ಸಮಯದಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಆರೋಪಿಸಿ ಶಿಮ್ಜಿತಾ ಇನ್ಸ್ಟಾಗ್ರಾಮ್ನಲ್ಲಿ ವೀಡಿಯೊ ಪೋಸ್ಟ್ ಮಾಡಿದ್ದರು. ಈ ವೀಡಿಯೊವನ್ನು ಒಂದು ದಿನದಲ್ಲಿ 2.3 ಮಿಲಿಯನ್ ಬಾರಿ ವೀಕ್ಷಿಸಲಾಗಿದೆ. ಇದು ವೈರಲ್ ಆದ ನಂತರ ದೀಪಕ್ ಆ*ತ್ಮಹ*ತ್ಯೆ ಮಾಡಿಕೊಂಡರು. ಘಟನೆಯ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ವಿವಿಧ ವಾದಗಳು ನಡೆಯುತ್ತಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ