
ನವದೆಹಲಿ(ಏ.20): ಕರ್ನಾಟಕ ವಿಧಾನಸಭಾ ಚುನಾವಣೆ ಗೆಲ್ಲಲು ಬಿಜೆಪಿ ಭಾರಿ ಪ್ಲಾನ್ ಮಾಡಿದೆ. ಈಗಾಗಲೇ ಸ್ಟಾರ್ ಪ್ರಚಾರಕ ಪಟ್ಟಿ ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ, ಯುಪಿ ಸಿಎ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ಪ್ರಮುಖರು ಈ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಈ ಪಟ್ಟಿ ಬಿಡುಗಡೆ ಬೆನ್ನಲ್ಲೇ ಬಿಜೆಪಿಗೆ ತಲೆನೋವು ಹೆಚ್ಚಾಗಿದೆ. ಒಬ್ಬೊಬ್ಬ ಸ್ಟಾರ್ ಪ್ರಚಾರಕರು ಅಲಭ್ಯರಾಗುತ್ತಿದ್ದಾರೆ. ಇದೀಗ ಕೇಂದ್ರ ರಕ್ಷಣಾ ಸಚಿವ, ಕರ್ನಾಟಕದ ಸ್ಟಾರ್ ಪ್ರಚಾರಕ ರಾಜನಾಥ್ ಸಿಂಗ್‌ಗೆ ಕೋವಿಡ್ ಕಾಣಿಸಿಕೊಂಡಿದೆ. ಹೀಗಾಗಿ ರಾಜನಾಥ್ ಸಿಂಗ್ ಸದ್ಯ ಕ್ವಾರಂಟೈನ್‌ನಲ್ಲಿದ್ದು, ಹಲವು ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ.
ಭಾರತೀಯ ವಾಯುಸೇನಾ ಕಮಾಂಡರ್ಸ್ ಕಾನ್ಫರೆನ್ಸ್‌ನಲ್ಲಿ ರಾಜನಾಥ್ ಸಿಂಗ್ ಭಾಗವಹಿಸಬೇಕಿತ್ತು. ಆದರೆ ಕೋವಿಡ್ ಕಾರಣ ಈ ಕಾರ್ಯಕ್ರಮದಲ್ಲಿ ರಾಜನಾಥ್ ಸಿಂಗ್ ಪಾಲ್ಗೊಳ್ಳುತ್ತಿಲ್ಲ. ರಾಜನಾಥ್ ಸಿಂಗ್‌ಗೆ ಮೈಲ್ಡ್ ಸಿಂಪ್ಟಮ್ಸ್ ಕಾಣಿಸಿಕೊಂಡಿದೆ. ರಾಜನಾಥ್ ಸಿಂಗ್ ಆರೋಗ್ಯವಾಗಿದ್ದಾರೆ. ವೈದ್ಯರ ಸಲಹೆಯಂತೆ ರಾಜನಾಥ್ ಸಿಂಗ್ ವಿಶ್ರಾಂತಿ ಪಡೆದುಕೊಂಡಿದ್ದಾರೆ. ವೈರಸ್ ಹರಡು ಭೀತಿ ಇರುವುದರಿಂದ ಹೋಮ್ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.
ದೇಶದ ರಕ್ಷಣಾ ರಫ್ತು ದಾಖಲೆಯ .15920 ಕೋಟಿಗೆ: 6 ವರ್ಷಗಳಲ್ಲಿ 10 ಪಟ್ಟು ಏರಿಕೆ
ರಾಜನಾಥ್ ಸಿಂಗ್‌ಗೆ ಕೋವಿಡ್ ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ಇದೀಗ ಕರ್ನಾಟಕ ಚುನಾವಣಾ ಪ್ರಚಾರದಿಂದ ಹಿಂದೆ ಸರಿಯುವ ಸಾಧ್ಯತೆ ಇದೆ. ವೈದ್ಯರು ವಿಶ್ರಾಂತಿ ಸೂಚಿಸಿರುವ ಹಿನ್ನಲೆಯಲ್ಲಿ, ರಾಜನಾಥ್ ಸಿಂಗ್ ಕರ್ನಾಟಕ ಪ್ರಚಾರದಿಂದ ಹೊರಗುಳಿಯಲು ಬಯಸಿದ್ದಾರೆ. ಈ ತಿಂಗಳ ಅಂತ್ಯದಲ್ಲಿ ರಾಜನಾಥ್ ಸಿಂಗ್ ಕರ್ನಾಟಕದಲ್ಲಿ ಪ್ರಚಾರಕ್ಕೆ ಆಗಮಿಸಬೇಕಿತ್ತು.
ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವರಾದ ಅಮಿತ್ ಶಾ, ನಿತಿನ್ ಗಡ್ಕರಿ, ಸ್ಮೃತಿ ಇರಾನಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಶಾಸಕ ಬಸನಗೌಡ ಪಾಟೀಲ ಯತ್ನಾಳ ಸೇರಿದಂತೆ ರಾಜ್ಯ ವಿಧಾನಸಭೆಯಲ್ಲಿ ಪ್ರಚಾರ ನಡೆಸಲಿರುವ 40 ಮಂದಿ ಸ್ಟಾರ್ ಪ್ರಚಾರಕರ ಹೆಸರುಗಳನ್ನು ಒಳಗೊಂಡ ಪಟ್ಟಿಯನ್ನು ಬಿಜೆಪಿಯು ಚುನಾವಣಾ ಆಯೋಗಕ್ಕೆ ಸಲ್ಲಿಸಿದೆ.
ರಾಮ ಕಲ್ಲಲ್ಲ, ದೇಶದ ಹೆಗ್ಗುರುತು: ಮಂದಿರ ಟೀಕೆಗೆ ರಾಜನಾಥ್ ತಿರುಗೇಟು
ಬಿಜೆಪಿ ಸ್ಟಾರ್ ಪ್ರಚಾರಕ ಪಟ್ಟಿ: ನರೇಂದ್ರ ಮೋದಿ, ಜೆ.ಪಿ.ನಡ್ಡಾ, ರಾಜನಾಥ್ ಸಿಂಗ್, ಅಮಿತ್ ಶಾ, ನಿತಿನ್ ಗಡ್ಕರಿ, ಬಿ.ಎಸ್.ಯಡಿಯೂರಪ್ಪ, ನಳಿನ್‌ಕುಮಾರ್ ಕಟೀಲ್, ಬಸವರಾಜ ಬೊಮ್ಮಾಯಿ, ಪ್ರಹ್ಲಾದ್ ಜೋಶಿ, ಡಿ.ವಿ.ಸದಾನಂದಗೌಡ, ಕೆ.ಎಸ್.ಈಶ್ವರಪ್ಪ, ಗೋವಿಂದ ಕಾರಜೋಳ, ಆರ್.ಅಶೋಕ್, ನಿರ್ಮಲಾ ಸೀತಾರಾಮನ್, ಸ್ಮೃತಿ ಇರಾನಿ, ಧರ್ಮೇಂದ್ರ ಪ್ರಧಾನ್, ಮನ್ಸುಖ್ ಮಾಂಡವಿಯ, ಕೆ.ಅಣ್ಣಾಮಲೈ, ಅರುಣ್ ಸಿಂಗ್, ಡಿ.ಕೆ.ಅರುಣಾ, ಸಿ.ಟಿ.ರವಿ, ಯೋಗಿ ಆದಿತ್ಯನಾಥ್, ಶಿವರಾಜ್ ಸಿಂಗ್ ಚೌಹಾಣ್, ಹಿಮಂಬಿಸ್ವ ಶರ್ಮ, ದೇವೇಂದ್ರ ಫಡ್ನವೀಸ್, ಪ್ರಭಾಕರ್ ಕೋರೆ, ಶೋಭಾ ಕರಂದ್ಲಾಜೆ, ಎ.ನಾರಾಯಣಸ್ವಾಮಿ, ಭಗವಂತ್ ಖೂಬ, ಅರವಿಂದ್ ಲಿಂಬಾವಳಿ, ಬಿ.ಶ್ರೀರಾಮುಲು, ಕೋಟ ಶ್ರೀನಿವಾಸ ಪೂಜಾರಿ, ಡಾ.ಉಮೇಶ್ ಜಾಧವ್, ಛಲವಾದಿ ನಾರಾಯಣಸ್ವಾಮಿ, ಎನ್.ರವಿಕುಮಾರ್, ಜಿ.ವಿ.ರಾಜೇಶ್, ಜಗ್ಗೇಶ್, ಶ್ರುತಿ ಹಾಗೂ ತಾರಾ ಅನುರಾಧ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ