
ಶಿಮ್ಲಾ(ಸೆ. 04): ಅನೇಕ ಉಚಿತ ಕೊಡುಗೆಗಳ ಘೋಷಣೆಯ ಕಾರಣ ಆರ್ಥಿಕ ಬಿಕ್ಕಟ್ಟಿಗೆ ಸಿಕ್ಕಿಬಿದ್ದಿರುವ ಹಿಮಾಚಲಪ್ರದೇಶದಲ್ಲಿ ಇದೀಗ ಸರ್ಕಾರಿ ನೌಕರರ ವೇತನ ಪಾವತಿಯಲ್ಲೂ ವಿಳಂಬ ಕಂಡುಬಂದಿದೆ. ಸಾಮಾನ್ಯವಾಗಿ ಪ್ರತಿ ತಿಂಗಳ ಮೊದಲ ದಿನವೇ ಸರ್ಕಾರಿ ನೌಕರರಿಗೆ ವೇತನ ಪಾವತಿಯಾಗುತ್ತಿತ್ತು. ಆದರೆ ಆಗಸ್ಟ್ ತಿಂಗಳ ವೇತನ ಇನ್ನೂ ಅಧಿಕಾರಿಗಳ ಕೈ ಸೇರಿಲ್ಲ.
ಕೆಲ ದಿನಗಳ ಹಿಂದಷ್ಟೇ ರಾಜ್ಯದಲ್ಲಿನ ಆರ್ಥಿಕ ಪರಿಸ್ಥಿತಿಯ ಸಂಕಷ್ಟ ಬಿಚ್ಚಿಟ್ಟಿದ್ದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು, ತಾವೂ, ತಮ್ಮ ಸಚಿವ ಸಂಪುಟದ ಸದಸ್ಯರು, ನಿಗಮ ಮಂಡಳಿ ಸದಸ್ಯರು ತಮ್ಮ ವೇತನವನ್ನು 2 ತಿಂಗಳು ವಿಳಂಬವಾಗಿ ಸ್ವೀಕರಿಸುವುದಾಗಿ ಹೇಳಿದ್ದರು. ಅದರ ಬೆನ್ನಲ್ಲೇ ಆರ್ಥಿಕ ಸಂಕಷ್ಟದ ಬಿಸಿ ಅಧಿಕಾರಿಗಳಿಗೂ ತಟ್ಟಿದೆ.
ಗ್ಯಾರಂಟಿಗಳ ಜಾರಿ ಮಾಡಿದ್ದ ಹಿಮಾಚಲಕ್ಕೆ ಆರ್ಥಿಕ ಸಂಕಷ್ಟ: ಸಂಬಳ ಪಡೆಯದಿರಲು ಸಿಎಂ, ಸಚಿವರ ನಿರ್ಧಾರ
ಭಾನುವಾರವಷ್ಟೇ ಮಾತನಾಡಿದ್ದ ಸುಖು, ಹಣಕಾಸಿನ ಕೊರತೆಗೆ ಬಿಜೆಪಿ ಅಧಿಕಾರದಲ್ಲಿ ಆರಂಭಿಸಿದ ಉಚಿತ ಯೋಚನೆಗಳೇ ಕಾರಣ’ ಎಂದಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ