ಕಾವೇರಿ ನೀರಿಗಾಗಿ ಕೇಂದ್ರಕ್ಕೆ ನಿಯೋಗ: ತಮಿಳುನಾಡು ಸಿಎಂ ಸ್ಟಾಲಿನ್‌

Published : Sep 17, 2023, 08:01 AM IST
ಕಾವೇರಿ ನೀರಿಗಾಗಿ ಕೇಂದ್ರಕ್ಕೆ ನಿಯೋಗ: ತಮಿಳುನಾಡು ಸಿಎಂ ಸ್ಟಾಲಿನ್‌

ಸಾರಾಂಶ

ತಮಿಳುನಾಡಿಗೆ ನೀರು ಬಿಡುವುದರ ವಿರುದ್ಧ ಕರ್ನಾಕಟವು ದೋಷಪೂರಿತ ಮತ್ತು ಆಧಾರರಹಿತ ವಾದಗಳನ್ನು ಮಾಡುತ್ತಿದೆ. ಆದರೆ ಇದನ್ನೆಲ್ಲ ಪರಿಗಣಿಸಬಾರದು. ಹೀಗಾಗಿ ತಮಿಳುನಾಡಿಗೆ 12,500 ಕ್ಯೂಸೆಕ್‌ ನೀರು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ಸೂಚಿಸುವಂತೆ ಕೋರಲಾಗುವುದು ಎಂದು ತಿಳಿಸಿದ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್‌ 

ಚೆನ್ನೈ(ಸೆ.17): ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಲು ಕರ್ನಾಟಕಕ್ಕೆ ನಿರ್ದೇಶಿಸಿ ಎಂದು ಕೇಂದ್ರಕ್ಕೆ ಮನವಿ ನೀಡಲು ರಾಜ್ಯದ ನಿಯೋಗ ಕಳುಹಿಸಲಾಗುವುದು ಎಂದು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಹೇಳಿದ್ದಾರೆ.

ತಮಿಳುನಾಡಿಗೆ ನೀರು ಬಿಡುವುದರ ವಿರುದ್ಧ ಕರ್ನಾಕಟವು ದೋಷಪೂರಿತ ಮತ್ತು ಆಧಾರರಹಿತ ವಾದಗಳನ್ನು ಮಾಡುತ್ತಿದೆ. ಆದರೆ ಇದನ್ನೆಲ್ಲ ಪರಿಗಣಿಸಬಾರದು. ಹೀಗಾಗಿ ತಮಿಳುನಾಡಿಗೆ 12,500 ಕ್ಯೂಸೆಕ್‌ ನೀರು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ಸೂಚಿಸುವಂತೆ ಕೋರಲಾಗುವುದು ಎಂದು ಸ್ಟಾಲಿನ್‌ ತಿಳಿಸಿದ್ದಾರೆ.

ತಮಿಳುನಾಡಿಗೆ ಮತ್ತೆ 15 ದಿನ ತಲಾ 5 ಸಾವಿರ ಕ್ಯೂಸೆಕ್ಸ್‌ ಕಾವೇರಿ ನೀರು ಹರಿಸಿ: ಸಿಡಬ್ಲ್ಯೂಆರ್‌ಸಿ ಸೂಚನೆ

ರಾಜ್ಯದ ಎಲ್ಲ ಪಕ್ಷಗಳ ಸಂಸದರು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್ ಅವರನ್ನು ಭೇಟಿ ಮಾಡಿ, ರಾಜ್ಯಕ್ಕೆ ಕಾವೇರಿ ನೀರು ಬಿಡುವಂತೆ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಿದ್ದಾರೆ. ರಾಜ್ಯ  ಜಲ ಸಂಪನ್ಮೂಲ ಸಚಿವ ದುರೈಮುರುಗನ್‌ ಈ ನಿಯೋಗದ ನೇತೃತ್ವ ವಹಿಸಲಿದ್ದಾರೆ ಎಂದು ಸ್ಟಾಲಿನ್‌ ಹೇಳಿದ್ದಾರೆ.

ಈ ವರ್ಷದ ಸೆ.14ರವರೆಗೆ ರಾಜ್ಯಕ್ಕೆ 103.5 ಟಿಎಂಸಿ ಅಡಿ ನೀರು ಬಿಡಗಡೆಯಾಗಬೇಕಿತ್ತು. ಆದರೆ ಕೇವಲ 38.4 ಟಿಎಂಸಿ ಅಡಿ ನೀರು ಬಿಡಲಾಗಿದ್ದು ಇನ್ನೂ 65.1 ಟಿಎಂಸಿ ಅಡಿ ನೀರು ನಮಗೆ ಕೊರತೆಯಾಗಿದೆ ಎಂದು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಭೂರೂಪ ಬದಲಾಯಿಸಿದ ಪ್ರವಾಹ.. ವಿಶ್ವದ ಅತಿದೊಡ್ಡ ನದಿ ಮಜುಲಿ ದ್ವೀಪ ಬಗ್ಗೆ ನಿಮಗೆ ಗೊತ್ತೇ?
ಅಗರ್ಭ ಶ್ರೀಮಂತನೆಂದು ಎಂಜಿನಿಯರ್‌ನನ್ನ ಮದುವೆಯಾದಳು... ಫಸ್ಟ್‌ ನೈಟ್‌ನಲ್ಲೇ ಬಯಲಾಯ್ತು ಕರಾಳ ಸತ್ಯ!