ಕನ್ಹಯ್ಯಾ ವಿರುದ್ಧ ದೇಶದ್ರೋಹ ಕೇಸ್‌ ವಿಚಾರಣೆಗೆ ಆಪ್ ಅನುಮತಿ

By Kannadaprabha News  |  First Published Feb 29, 2020, 8:42 AM IST

ದೇಶವಿರೋಧಿ ಘೋಷಣೆ ಕೂಗಿದ ಆರೋಪದ ಮೇಲೆ 2016 ರಲ್ಲಿ ದಾಖಲಾದ ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ಜವಾಹರಲಾಲ್‌ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆಯ ಮಾಜಿ ಅಧ್ಯಕ್ಷ ಕನ್ಹಯ್ಯಾ ಕುಮಾರ್‌ ಹಾಗೂ ಇತರರನ್ನು ವಿಚಾರಣೆ ನಡೆಸಲು ದೆಹಲಿ ಸರ್ಕಾರ ಅನುಮೋದನೆ ನೀಡಿದೆ. 


ನವದೆಹಲಿ (ಫೆ. 29): ದೇಶವಿರೋಧಿ ಘೋಷಣೆ ಕೂಗಿದ ಆರೋಪದ ಮೇಲೆ 2016 ರಲ್ಲಿ ದಾಖಲಾದ ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ಜವಾಹರಲಾಲ್‌ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆಯ ಮಾಜಿ ಅಧ್ಯಕ್ಷ ಕನ್ಹಯ್ಯಾ ಕುಮಾರ್‌ ಹಾಗೂ ಇತರರನ್ನು ವಿಚಾರಣೆ ನಡೆಸಲು ದೆಹಲಿ ಸರ್ಕಾರ ಅನುಮೋದನೆ ನೀಡಿದೆ.

Tap to resize

Latest Videos

undefined

ಪ್ರಕರಣಕ್ಕೆ ಸಂಬಂಧಿಸಿದಂತೆ ಜ.14 ರಂದು ದೆಹಲಿ ಪೊಲೀಸರು ಕನ್ಹಯ್ಯಾ ಕುಮಾರ್‌, ಜೆಎನ್‌ಯು ಮಾಜಿ ವಿದ್ಯಾರ್ಥಿಗಳಾದ ಉಮರ್‌ ಖಾಲಿದ್‌ ಮತ್ತು ಅನಿರ್ಬನ್‌ ಭಟ್ಟಾಚಾರ್ಯ ಹಾಗೂ ಇತರರ ವಿರುದ್ಧ ಆರೋಪಪಟ್ಟಿದಾಖಲಿಸಿದ್ದರು. ಆದರೆ, ವಿಚಾರಣೆಗೆ ಒಳಪಡಿಸಲು ದೆಹಲಿ ಸರ್ಕಾರದ ಅನುಮೋದನೆ ಸಿಕ್ಕಿರಲಿಲ್ಲ.

ಏನಿದು ಪ್ರಕರಣ?

ಸಂಸತ್‌ ದಾಳಿಯ ರೂವಾರಿ ಅಫ್ಜಲ್‌ ಗುರುಗೆ ಗಲ್ಲು ಶಿಕ್ಷೆ ನೀಡಿದ್ದನ್ನು ವಿರೋಧಿಸಿ 2016 ಫೆ.9ರಂದು ಜೆಎನ್‌ಯು ಕ್ಯಾಂಪಸ್‌ನಲ್ಲಿ ಆಯೋಜಿಸಿದ್ದ ಪ್ರತಿಭಟನೆಯ ವೇಳೆ ಕನ್ಹಯ್ಯಾ ಕುಮಾರ್‌ ಹಾಗೂ ಇತರರು ದೇಶ ವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೆ ಈ ಕಾರ್ಯಕ್ರಮ ಆಯೋಜನೆಗೆ ಅನುಮತಿಯನ್ನು ಪಡೆದುಕೊಂಡಿರಲಿಲ್ಲ.

ಫೆಬ್ರವರಿ 29ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

click me!