ತಮಿಳುನಾಡು ಮತ್ತು ದೆಹಲಿ ಸರ್ಕಾರಗಳು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಬಳಕೆ ಮತ್ತು ಕೋವಿಡ್ ಮಾರ್ಗಸೂಚಿಗಳ ಪಾಲನೆ ಕಡ್ಡಾಯಗೊಳಿಸಿ ಆದೇಶ ಹೊರಡಿಸಿವೆ.
ಚೆನ್ನೈ/ನವದೆಹಲಿ (ಏ.23): ರಾಷ್ಟ್ರ ರಾಜಧಾನಿ ದೆಹಲಿ, ತಮಿಳುನಾಡು ಸೇರಿದಂತೆ ದೇಶದ ಹಲವೆಡೆ ಕೊರೋನಾ ಸೋಂಕು (Coronavirus) ದಿನೇ ದಿನೇ ಆತಂಕಕಾರಿಯಾಗಿ ಏರಿಕೆ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು (Tamil Nadu) ಮತ್ತು ದೆಹಲಿ ಸರ್ಕಾರಗಳು (Delhi Government) ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಬಳಕೆ (Mask) ಮತ್ತು ಕೋವಿಡ್ ಮಾರ್ಗಸೂಚಿಗಳ ಪಾಲನೆ ಕಡ್ಡಾಯಗೊಳಿಸಿ ಆದೇಶ ಹೊರಡಿಸಿವೆ. ಮಾಸ್ಕ್ ಧರಿಸದೆ ನಿಯಮ ಉಲ್ಲಂಘಿಸಿದರೆ 500 ರು. ದಂಡ ವಿಧಿಸುವುದಾಗಿ ಎರಡೂ ರಾಜ್ಯಗಳು ಎಚ್ಚರಿಕೆ ನೀಡಿವೆ.
ಮಾಸ್ಕ್ ಕಡ್ಡಾಯ: ತಮಿಳುನಾಡು ಸರ್ಕಾರ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಬಳಕೆಯನ್ನು ಕಡ್ಡಾಯ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ. ಈ ನಿಯಮ ಉಲ್ಲಂಘನೆಗೆ 500 ರು. ದಂಡ ವಿಧಿಸುವುದಾಗಿ ತಿಳಿಸಿದೆ. ಅಲ್ಲದೆ ರಾಜ್ಯಾದ್ಯಂತ ಕೋವಿಡ್ ಮಾರ್ಗಸೂಚಿಗಳು ಕಡ್ಡಾಯವಾಗಿ ಅನುಷ್ಠಾನಗೊಳ್ಳುವಂತೆ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆಗೆ ಜನರು ನಿರ್ಲಕ್ಷ ತೋರಿಸುತ್ತಿರುವ ಕಾರಣ ನಿಯಮ ಉಲ್ಲಂಘನೆಗೆ 500 ರು. ದಂಡ ನಿಗದಿಪಡಿಸಲಾಗಿದೆ ಎಂದು ಪ್ರಧಾನ ಆರೋಗ್ಯ ಕಾರ್ಯದರ್ಶಿ ಜೆ ರಾಧಾಕೃಷ್ಣನ್ ತಿಳಿಸಿದ್ದಾರೆ.
undefined
ದೀರ್ಘ ಕೋವಿಡ್ ಸೋಂಕಿನ ಪ್ರಭಾವ ಮಹಿಳೆಯರ ಆರೋಗ್ಯದ ಮೇಲೆಯೇ ಅಧಿಕ
ಇನ್ನು ರಾಷ್ಟ್ರ ರಾಜಧಾನಿಯಲ್ಲಿ ಸಹ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ದೆಹಲಿ ಸರ್ಕಾರ ಕಡ್ಡಾಯಗೊಳಿಸಿದೆ. ಒಂದು ವೇಳೆ ಮಾಸ್ಕ್ ಧರಿಸದಿದ್ದರೆ 500 ರು. ದಂಡ ವಿಧಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆದರೆ ಈ ನಿಯಮ ಖಾಸಗಿ ಕಾರುಗಳಲ್ಲಿ ಪ್ರಯಾಣಿಸುವವರಿಗೆ ಅನ್ವಯವಾಗುವುದಿಲ್ಲ ಎಂದು ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಶಾಲೆಗಳಲ್ಲಿ ಥರ್ಮಲ್ ಸ್ಕ್ಯಾನಿಂಗ್ ಕಡ್ಡಾಯ: ದೆಹಲಿಯಲ್ಲಿ ಕೊರೋನಾ ಸೋಂಕು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಅಲ್ಲಿನ ಸರ್ಕಾರ ಶಾಲೆಗಳಿಗೆ ನೂತನ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಥರ್ಮಲ್ ಸ್ಕಾ್ಯನಿಂಗ್ ಆಗದೆ ಯಾವುದೇ ವಿದ್ಯಾರ್ಥಿ ಮತ್ತು ಸಿಬ್ಬಂದಿ ಶಾಲೆ ಒಳಗೆ ಪ್ರವೇಶಿಸುವಂತಿಲ್ಲ. ವಿದ್ಯಾರ್ಥಿಗಳು ತಾವು ತಂದ ಊಟ ಅಥವಾ ಬರವಣಿಗೆಯ ಪರಿಕರಗಳನ್ನು ಯಾರೊಂದಿಗೂ ಹಂಚಿಕೊಳ್ಳಬಾರದು.
ಕುಟುಂಬದಲ್ಲಿ ಯಾರಿಗಾದರೂ ಸೋಂಕು ದೃಢಪಟ್ಟರೆ, ಅಥವಾ ಸೋಂಕಿನ ಲಕ್ಷಣಗಳಿದ್ದರೆ ಅಂಥ ಮಕ್ಕಳನ್ನು ಶಾಲೆಗೆ ಕಳುಹಿಸಕೂಡದು ಎಂದು ತಿಳಿಸಲಾಗಿದೆ. ಶಾಲೆಯೊಳಗೆ ಇದ್ದಾಗಲೇ ಯಾರಿಗಾದರೂ ಕೊರೋನಾ ಸೋಂಕು ದೃಢಪಟ್ಟರೆ ಸಂಸ್ಥೆಯ ಅಧಿಕಾರಿಗಳೇ ಕ್ವಾರಂಟೈನ್ ಬಗ್ಗೆ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿ ಅಥವಾ ಸಿಬ್ಬಂದಿ ನಿಯಮ ಉಲ್ಲಂಘಿಸಿದಲ್ಲಿ ಪ್ರತ್ಯೇಕ ಕೋಣೆಯಲ್ಲಿ ಇರಿಸಬೇಕು ಸೂಚಿಸಿದೆ.
ದಿಲ್ಲಿಯಲ್ಲಿ 1042 ಕೋವಿಡ್ ಕೇಸು: ದೆಹಲಿಯಲ್ಲಿ ದಿನೇ ದಿನೇ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು ಶುಕ್ರವಾರ ಒಂದೇ ದಿನ 1,042 ಕೋವಿಡ್ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ ಇಬ್ಬರು ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಪಾಸಿಟಿವಿಟಿ ದರ ಗುರುವಾರಕ್ಕಿಂತ ಕೊಂಚ ಇಳಿಕೆಯಾಗಿದ್ದು ಶೇ.4.64 ರಷ್ಟುದಾಖಲಾಗಿದೆ. ಗುರುವಾರ ಶೇ.4.71ರಷ್ಟುಪಾಸಿಟಿವಿಟಿ ದರದೊಂದಿಗೆ 965 ಪ್ರಕರಣಗಳು ದಾಖಲಾಗಿತ್ತು.
ಕಳೆದ ಕೆಲವು ದಿನಗಳಿಂದ ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್ ಸೋಂಕು ವೇಗವಾಗಿ ಹೆಚ್ಚಾಗುತ್ತಿದೆ. ಏ.11ರಂದು 601 ಇದ್ದ ಸಕ್ರಿಯ ಪ್ರಕರಣಗಳು 3,253ಕ್ಕೆ ಏರಿಕೆಯಾಗಿವೆ. ಆದರೆ ಆಸ್ಪತ್ರೆಗೆ ದಾಖಲಾಗುತ್ತಿರುವವರ ಪ್ರಮಾಣ ಕೇವಲ ಶೇ.3 ಇದೆ. ಕಳೆದ 24 ಗಂಟೆಗಳಲ್ಲಿ 22,442 ಮಾದರಿಗಳ ಪರೀಕ್ಷೆ ನಡೆಸಲಾಗಿದೆ. ಈ ಮೂಲಕ ದೆಹಲಿಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 18.72 ಲಕ್ಷಕ್ಕೆ, ಒಟ್ಟು ಸಾವು 26 ಸಾವಿರಕ್ಕೆ ಏರಿಕೆಯಾಗಿದೆ.
Covid cases ದೆಹಲಿ, ಪಂಜಾಬ್ ಬಳಿಕ ಮತ್ತೊಂದು ರಾಜ್ಯದಲ್ಲಿ ಕೊರೋನಾ ನಿರ್ಬಂಧ ಜಾರಿ!
ದಿಲ್ಲಿ ಶಾಲೆಗಳಲ್ಲಿ ಕೋವಿಡ್ ನಿಯಮ ಕಠಿಣ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕು ದಿನೇ ದಿನೇ ಆತಂಕಕಾರಿಯಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಅಲ್ಲಿನ ಸರ್ಕಾರ ಶಾಲೆಗಳಿಗೆ ನೂತನ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.ಥರ್ಮಲ್ ಸ್ಕ್ಯಾನಿಂಗ್ ಆಗದೆ ಯಾವುದೇ ವಿದ್ಯಾರ್ಥಿ ಮತ್ತು ಸಿಬ್ಬಂದಿ ಶಾಲೆ ಒಳಗೆ ಪ್ರವೇಶಿಸುವಂತಿಲ್ಲ. ಇಲ್ಲಿ ಯಾರಿಗಾದರೂ ಕೊರೋನಾ ಸೋಂಕು ದೃಢಪಟ್ಟರೆ ಸಂಸ್ಥೆಯ ಅಧಿಕಾರಿಗಳೇ ಕ್ವಾರಂಟೈನ್ ಬಗ್ಗೆ ಕ್ರಮ ಕೈಗಳ್ಳಬೇಕು. ವಿದ್ಯಾರ್ಥಿ ಅಥವಾ ಸಿಬ್ಬಂದಿ ನಿಯಮ ಉಲ್ಲಂಘಿಸಿದಲ್ಲಿ ಪ್ರತ್ಯೇಕ ಕೋಣೆಯಲ್ಲಿ ಇರಿಸಬೇಕು ಸೂಚಿಸಿದೆ.