
ನವದೆಹಲಿ(ಏ.19): ಕೊರೋನಾ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿದ್ದು, ಮಹಾಮಾರಿ ನಿಒಯಂತ್ರಣ ತಪ್ಪಿದೆ. ಅದರಲ್ಲೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ನಾಲ್ಕನೇ ಅಲೆ ಗಂಭೀರ ಸ್ವರೂಪ ಪಡೆದುಕೊಂಡಿದೆ. ಹೀಗಿರುವಾಗ ಪರಿಸ್ಥಿತಿ ನಿಯಂತ್ರಿಸಲು ದೆಹಲಿಯಲ್ಲಿ 6 ದಿನಗಳ ಕಾಲ ಸಂಪೂರ್ಣ ಲಾಕ್‌ಡೌನ್ ವಿಧಿಸಿರುವುದಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ಒಂದು ವಾರದ ಈ ಲಾಕ್‌ಡೌನ್ ಇಂದು, ಸೋಮವಾರ ರಾತ್ರಿ 10 ಗಂಟೆಯಿಂದ ಮುಂದಿನ ಸೋಮವಾರ ಏಪ್ರಿಲ್ 26ರ ಬೆಳಿಗ್ಗೆ 5 ಗಂಟೆವರೆಗೆ ಜಾರಿಯಲ್ಲಿರಲಿದೆ. ಈ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿ ಸಂಪೂರ್ಣ ಬಂದ್ ಮಾಡಲಾಗುತ್ತಿದ್ದು, ಅಗತ್ಯ ಸೇವೆಗಳಲ್ಲಿ ವ್ಯತ್ಯಯವಿಲ್ಲ, ವಲಸೆ ಕಾರ್ಮಿಕರು ಯಾವುದೇ ಕಾರಣಕ್ಕೂ ಆತಂಕ ಪಡಬೇಕಾಗಿಲ್ಲ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.
"
ಕೊರೋನಾ ಪ್ರಕರಣಗಳ ಸಂಖ್ಯೆ ನಿಯಂತ್ರಣ ಮೀರಿ ಏರುತ್ತಿವೆ. ಕಳೆದ ಇಪ್ಪತ್ನಾಲ್ಕು ಗಂಟೆಯಲ್ಲಿ 25,462 ಹೊಸ ಪ್ರಕರಣಗಳು ದೆಹಲಿಯಲ್ಲಿ ದಾಖಲಾಗಿದ್ದು, ಭಾರೀ ಆತಂಕ ಸೃಷ್ಟಿಯಾಗಿದೆ. ಹೀಗಿರುವಾಗಲೇ ಸಿಎಂ ಕೇಜ್ರೀವಾಲ್ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಜೊತೆ ಸಭೆ ನಡೆಸಿ ಈ ಮಹತ್ವದ ಘೋಷಣೆ ಮಾಡಿದ್ದಾರೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಲಾಕ್‌ಡೌನ್ ಘೋಷಿಸಿದ ಕೇಜ್ರೀವಾಲ್, ಎಲ್ಲಾ ಖಾಸಗಿ ಕಚೇರಿಗಳು ವರ್ಕ್ ರ್ಫರಂ ಹೋಂ ಮಾಡಲಿವೆ. ಕೇವಲ ಸರ್ಕಾರಿ ಕಚೇರಿಗಳು ಹಾಗೂ ಅಗತ್ಯ ಸೇವೆಗಳಷ್ಟೇ ಎಂದಿನಂತೆ ಲಗ್ಯವಿರಲಿವೆ. ಮಾತನಾಡಿದ ಅವರು ಇದು ಸಣ್ಣ ಲಾಕ್‌ಡೌನ್. ವಲಸೆ ಕಾರ್ಮಿಕರು ದೆಹಲಿ ಬಿಟ್ಟು ತೆರಳಬೇಡಿ. ದಯವಿಟ್ಟು ಇಲ್ಲೇ ಇರಿ. ಈ ಲಾಕ್ ಡೌನ್ ನ್ನು ವಿಸ್ತರಿಸುವ ಸಂದರ್ಭ ಬರಲಾರದು ಎಂದು ನಾನು ಭಾವಿಸುತ್ತೇನೆ. ಈ ಆರು ದಿನಗಳಲ್ಲಿ ಹೆಚ್ಚು ಹಾಸಿಗೆಗಳ ವ್ಯವಸ್ಥೆ ಮಾಡಲಾಗುತ್ತದೆ, ಈ ಲಾಕ್‌ಡೌನ್ ಸಂದರ್ಭವನ್ನು ಆಮ್ಲಜನಕ ಶೇಖರಣೆ, ಔಷಧಗಳ ಶೇಖರಣೆಗೆ ಬಳಕೆ ಮಾಡಲಾಗುತ್ತದೆ. ಪ್ರತಿಯೊಬ್ಬರೂ ಲಾಕ್‌ಡೌನ್ ನಿಯಮ ಪಾಲಿಸುವಂತೆ ಕೇಜ್ರಿವಾಲ್ ಮನವಿ ಮಾಡಿದ್ದಾರೆ.
ಈ ಹಿಂದೆಯೇ ಕೊರೊನಾವೈರಸ್ ನಿಯಂತ್ರಣಕ್ಕಾಗಿ ಆಡಿಟೋರಿಯಂ, ರೆಸ್ಟೊರೆಂಟ್,ಮಾಲ್, ಜಿಮ್ ಮತ್ತು ಸ್ಪಾಗಳನ್ನು ಮುಚ್ಚಲು ಆದೇಶಿಸಿದ್ದ ದೆಹಲಿ ಸರ್ಕಾರ ಸಿನಿಮಾ ಥಿಯೇಟರ್ ಗಳಲ್ಲಿ 3ನೇ1ರಷ್ಟು ಜನರಿಗೆ ಮಾತ್ರ ಆಸನ ವ್ಯವಸ್ಥೆ ಕಲ್ಪಿಸಲು ಆದೇಶಿಸಿತ್ತು. ಅದೇ ವೇಳೆ ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ಕಾರ್ಯಕ್ರಮಗಳಿಗೆ ಜನ ಸೇರುವುದನ್ನು ಸರ್ಕಾರ ನಿಷೇಧಿಸಿದೆ. ರಾಜ್ಯದಲ್ಲಿ ಕೊರೊನಾವೈರಸ್ ಪ್ರಕರಣ ಏರಿಕೆಯಾಗುತ್ತಿರುವುದು ಆರೋಗ್ಯ ವ್ಯವಸ್ಥೆ ಮೇಲೆ ಒತ್ತಡವನ್ನುಂಟು ಮಾಡಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ