ಕೊಂಕಣಿ ಅಕಾಡೆಮಿಗೆ ದಿಲ್ಲಿ ಸರ್ಕಾರ ಅಸ್ತು: 2022 ಎಲೆಕ್ಷನ್‌ ಮೇಲೆ ಕಣ್ಣು?

By Suvarna NewsFirst Published Jan 9, 2021, 10:22 AM IST
Highlights

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊಂಕಣಿ ಅಕಾಡೆಮಿ ಸ್ಥಾಪಿಸಲು ದೆಹಲಿ ಸಚಿವ ಸಂಪುಟ| ದೆಹಲಿ ಸಚಿವ ಸಂಪುಟ ಶುಕ್ರವಾರ ಅನುಮೋದನೆ| 

ನವದೆಹಲಿ(ಜ.09): ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊಂಕಣಿ ಅಕಾಡೆಮಿ ಸ್ಥಾಪಿಸಲು ದೆಹಲಿ ಸಚಿವ ಸಂಪುಟ ಶುಕ್ರವಾರ ಅನುಮೋದನೆ ನೀಡಿದೆ. ದೆಹಲಿಯಲ್ಲಿ ಕೊಂಕಣಿ ಭಾಷೆ, ಸಂಸ್ಕೃತಿ ಬೆಳವಣಿಗೆ ಉತ್ತೇಜನ ನೀಡಲು ಈ ಕ್ರಮ ಕೈಗೊಂಡಿರುವುದಾಗಿ ಸರ್ಕಾರ ತಿಳಿಸಿದೆ.

ಆದರೆ ಸರ್ಕಾರ ಇಂಥದ್ದೊಂದು ನಿರ್ಧಾರದ ಹಿಂದೆ 2022ರ ಗೋವಾ ವಿಧಾನಸಭಾ ಚುನಾವಣೆಯ ತಯಾರಿಯ ಉದ್ದೇಶ ಇದೆ ಎಂದೂ ಹೇಳಲಾಗುತ್ತಿದೆ. ಸಣ್ಣ ರಾಜ್ಯವಾದ ಗೋವಾದಲ್ಲಿ ಬೇರುಬಿಡಲು ಆಪ್‌ ಯೋಜಿಸಿದ್ದು, ಚುನಾವಣೆಗೆ ಸ್ಪರ್ಧಿಸುವ ಕುರಿತು ಈಗಾಗಲೇ ಘೋಷಣೆ ಮಾಡಿದೆ.

ಗೋವಾ, ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಭಾಗದಲ್ಲಿ ಕೊಂಕಣಿ ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

click me!