Breaking ದೆಹಲಿ ಕೆಂಪು ಕೋಟೆ ಬಳಿ ಕಾರು ಸ್ಫೋಟ, ಸಾವಿನ ಸಂಖ್ಯೆ 2ಕ್ಕೆ ಏರಿಕೆ

Published : Nov 10, 2025, 07:31 PM ISTUpdated : Nov 10, 2025, 07:47 PM IST
Delhi Blast

ಸಾರಾಂಶ

Breaking ದೆಹಲಿ ಕೆಂಪು ಕೋಟೆ ಬಳಿ ಕಾರು ಸ್ಫೋಟ, ಸಾವಿನ ಸಂಖ್ಯೆ 2ಕ್ಕೆ ಏರಿಕೆ, ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿದೆ. ಘಟನೆಯಲ್ಲಿ ಓರ್ವ ಮೃತಪಟ್ಟರೆ, ಹಲವರು ಗಾಯಗೊಂಡಿದ್ದಾರೆ.

ನವದೆಹಲಿ (ನ.10) ರಾಷ್ಟ್ರ ರಾಜಧಾನಿಯಲ್ಲಿ ಸ್ಫೋಟ ಸಂಭವಿಸಿದೆ. ಕೆಂಪು ಕೋಟೆ ಚಾಂದಿನಿ ಚೌಕ್ ಬಳಿಯ ಮೆಟ್ರೋ ನಿಲ್ದಾಣದ ಬಳಿ ಕಾರು ಸ್ಫೋಟಗೊಂಡಿದೆ. ಸ್ಫೋಟದ ರಭಸಕ್ಕೆ ಎರಡು ಕಾರುಗಳು ಭಸ್ಮವಾಗಿದೆ. ಇತರ ಮೂರು ಕಾರುಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳ ದೌಡಾಯಿಸಿದೆ. ಪಾರ್ಕ್ ಮಾಡಿದ್ದ ಕಾರಿನಲ್ಲಿ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ. ಭಯೋತ್ಪಾದಕರ ಅತೀ ದೊಡ್ಡ ಸಂಚನ್ನು ಪೊಲೀಸರು ವಿಫಲಗೊಳಿಸಿದ ಬೆನ್ನಲ್ಲೇ ಈ ಸ್ಫೋಟ ನಡೆದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಸ್ಫೋಟದ ಕಾರಣ ಸ್ಪಷ್ಟವಾಗಿಲ್ಲ. ಆದರೆ ದೆಹಲಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಸಾವಿನ ಸಂಖ್ಯೆ 2ಕ್ಕೆ ಏರಿಕೆ

ಕಾರಿನಲ್ಲಿ ಸ್ಫೋಟಕವಿಟ್ಟು ಬ್ಲಾಸ್ಟ್ ಮಾಡಿರುವ ಅನುಮಾನಗಳು ವ್ಯಕ್ತವಾಗುತ್ತಿದೆ. ಮೇಲ್ನೋಟಕ್ಕೆ ಭಯೋತ್ಪಾದಕರ ಕೃತ್ಯ ಎಂದು ವರದಿಗಳು ಹೇಳುತ್ತಿದೆ. ದೆಹಲಿ ಕಾರು ಸ್ಫೋಟದಲ್ಲಿ ಆರಂಭದಲ್ಲಿ ಓರ್ವ ಮೃತಪಟ್ಟಿರುವುದು ವರದಿಯಾಗಿತ್ತು. ಇದೀಗ ಸಾವಿನ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆ ದಾಖಲಿಸಲಾಗಿದೆ. ಪೊಲೀಸರು ಸಂಪೂರ್ಣ ಪ್ರದೇಶ ಸುತ್ತುವರಿದು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅಗ್ನಿಶಾಮಕ ದಳದ ಹಲವು ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ.

ಕಾರಿನ ಸಿಎನ್‌ಜಿ ಕಿಟ್ ಸ್ಪೋಟಗೊಂಡಿರುವ ಅನುಮಾನಗಳು ವ್ಯಕ್ತವಾಗಿದೆ. ಆದರೆ ಘಟನೆಗೆ ಸ್ಪಷ್ಟ ಕಾರಣ ಲಭ್ಯವಾಗಿಲ್ಲ. ಕೇಂದ್ರ ತನಿಖಾ ಎಜೆನ್ಸಿಗಳು ಸ್ಥಳಕ್ಕೆ ಧಾವಿಸಿದೆ. ಸದ್ಯ ಭಯೋತ್ಪಾದಕ ದಾಳಿಯೇ ಅನ್ನೋ ಪ್ರಶ್ನೆಗೂ ಉತ್ತರ ಸಿಕಿಲ್ಲ.

ಸ್ಫೋಟದ ತೀವ್ರತೆಗೆ ಹತ್ತಿರದ ಮೂರು ಕಾರುಗಳಿಗೂ ಬೆಂಕಿ

ಕಾರು ಸ್ಫೋಟಗೊಳ್ಳುತ್ತಿದ್ದಂತೆ ಕೆಂಪು ಕೋಟೆ ಮೆಟ್ರೋ ನಿಲ್ದಾಣ ಬಳಿ ಬೆಂಕಿಯ ಜ್ವಾಲೆ ಕಾಣಿಸಿಕೊಂಡಿದೆ. ಎರಡು ಕಾರು ಸುಟ್ಟು ಭಸ್ಮವಾಗಿದ್ದರೆ, ಹತ್ತಿರದ ಕಾರುಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಹೀಗಾಗಿ ಅಗ್ನಿಶಾಮಕ ದಳ ಬೆಂಕಿ ನಂದಿಸಲು ಹರಸಾಹಸ ಮಾಡುತ್ತಿದೆ.

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪುರುಷರ ಈ ವರ್ತನೆ ಬಗ್ಗೆ ಹೆಣ್ಣಿಗೆ ಮಾತ್ರವಲ್ಲ ಮನೆಯ ಸಾಕು ಬೆಕ್ಕಿಗೂ ಗೊತ್ತು....!
ಅಕ್ರಮ ಸಂಬಂಧದ ಹಾದಿ ಹಿಡಿದ ಅಮ್ಮ: ಆಕೆಯ ಇಬ್ಬರು ಪುಟ್ಟ ಮಕ್ಕಳ ಮೋರಿಗೆಸೆದ ಪ್ರಿಯಕರ