
ದೆಹಲಿ(ಎ.11): ಕೊರೋನಾ ಲಸಿಕೆ ಹಾಕಿಕೊಂಡರೆ ತೆರಿಗೆಯಲ್ಲಿ ರಿಯಾಯಿತಿ ಸಿಗಲಿದೆ. ಜನರು ವ್ಯಾಕ್ಸೀನ್ ಹಾಕಿಸಿಕೊಳ್ಳಲು ಪ್ರೋತ್ಸಾಹಿಸಲು ಈ ರೀತಿಯ ಒಂದು ಆಫರ್ ನೀಡಲಾಗಿದೆ.
ಅರ್ಹ ಕುಟುಂಬ ಸದಸ್ಯರಿಗೆ COVID-19 ವಿರುದ್ಧ ಲಸಿಕೆ ನೀಡಲಾಗಿದೆ ಎಂದು ಸಾಬೀತುಪಡಿಸುವ ಪ್ರಮಾಣಪತ್ರಗಳನ್ನು ವಸತಿ ಆಸ್ತಿ ಮಾಲೀಕರು ನೀಡಿದರೆ ಅವರಿಗೆ ಶೇ.5ರರಷ್ಟು ತೆರಿಗೆ ರಿಯಾಯಿತಿ ಸಿಗಲಿದೆ.
ಆದಾಯ ತೆರಿಗೆ ಇಲಾಖೆಯಲ್ಲಿ ನೇಮಕಾತಿ: SSLC, PUC ಆದವರಿಗೂ ಅವಕಾಶ
ಉತ್ತರ ದೆಹಲಿ ಮಹಾನಗರ ಪಾಲಿಕೆ ಈ ಹಣಕಾಸು ವರ್ಷದಲ್ಲಿ ಆಸ್ತಿ ತೆರಿಗೆ ಸಲ್ಲಿಸುವಾಗ ಹೆಚ್ಚುವರಿ 5% ರಿಯಾಯಿತಿ ನೀಡಿದೆ. 2021 ರ ಜೂನ್ 30 ರೊಳಗೆ ದೊಡ್ಡ ಮೊತ್ತವನ್ನು ಪಾವತಿಸಿದರೆ ವಸತಿ ಮಾಲೀಕರಿಗೆ ಈಗಾಗಲೇ ಆಸ್ತಿ ತೆರಿಗೆಯಲ್ಲಿ 15% ರಿಯಾಯಿತಿ ನೀಡಲಾಗಿದೆ.
ದೆಹಲಿಯಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ಅಲ್ಲಿನ ಆಸ್ಪತ್ರೆಗಳ ಶೇ.50 ರಷ್ಟು ಬೆಡ್‌ಗಳನ್ನು ಕೊರೋನಾ ಸೋಂಕಿತರಿಗಾಗಿ ಮೀಸಲಿಡಲಾಗಿದೆ. ನಗರದಲ್ಲಿ ಶನಿವಾರ 77,374 ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ