
ನವದೆಹಲಿ: ಕೇಂದ್ರೀಯ ತನಿಖಾ ದಳ ಸೋಮವಾರ ತಿಹಾರ್ ಜೈಲಿನಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ವಶಕ್ಕೆ ಪಡೆದುಕೊಂಡಿದೆ. ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರ ಹೇಳಿಕೆಯನ್ನು ಸಿಬಿಐ ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ. ಬುಧವಾರ ಸಂಬಂಧಪಟ್ಟ ವಿಚಾರಣಾ ನ್ಯಾಯಾಲಯದ ಮುಂದೆ ಅರವಿಂದ್ ಕೇಜ್ರಿವಾಲ್ ಅವರನ್ನು ಹಾಜರುಪಡಿಸಲು ಸಿಬಿಐ ಅನುಮತಿಯನ್ನು ಪಡೆದುಕೊಂಡಿದೆ. ಬುಧವಾರ ಅರವಿಂದ್ ಕೇಜ್ರಿವಾಲ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಹಲಿಯ ರೋಸ್ ಅವೆನ್ಯೂ ಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ಮಂಗಳವಾರ ದೆಹಲಿ ಹೈಕೋರ್ಟ್ ರದ್ದು ಮಾಡಿತ್ತು.
"ಟ್ರಯಲ್ ಕೋರ್ಟ್ ಯಾವುದೇ ತೀರ್ಮಾನವನ್ನು ನೀಡಬಾರದು, ಇದು ಹೈಕೋರ್ಟ್ ತೀರ್ಮಾನಕ್ಕೆ ವಿರುದ್ಧವಾಗಿದೆ. ದಾಖಲೆಗಳು ಮತ್ತು ವಾದಗಳನ್ನು ಸರಿಯಾಗಿ ಪರಿಶೀಲನೆ ಮಾಡಲಾಗಿಲ್ಲ," ಎಂದು ಪೀಠ ಹೇಳಿದೆ. "ಒಮ್ಮೆ ಅವರ ಬಂಧನವನ್ನು ಪ್ರಶ್ನಿಸುವ ಅವರ ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದರೆ, ಕಾನೂನು ಉಲ್ಲಂಘಿಸಿ ಅವರ ವೈಯಕ್ತಿಕ ಸ್ವಾತಂತ್ರ್ಯವನ್ನು ಮೊಟಕುಗೊಳಿಸಲಾಗಿದೆ ಎಂದು ಹೇಳಲಾಗುವುದಿಲ್ಲ" ಎಂದು ಅದು ಹೇಳಿದೆ, ನ್ಯಾಯಾಲಯವು ಕೇಜ್ರಿವಾಲ್ ಮತ್ತು ಇಡಿ ಪರ ವಕೀಲರ ವಾದಗಳನ್ನು ಪರಿಗಣಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ