ಬಿಜೆಪಿಗೆ ಬಹಿರಂಗ ಸವಾಲು ಹಾಕಿದ ದೆಹಲಿ ಸಿಎಂ| ಅರವಿಂದ್ ಕೇಜ್ರಿವಾಲ್ ಸವಾಲು ಸ್ವೀಕರಿಸುವುದೇ ಬಿಜೆಪಿ?| ತಾಕತ್ತಿದ್ದರೆ ಮುಖ್ಯಮಂತ್ರಿ ಅಭ್ಯರ್ಥಿ ಘೋಷಿಸಿ ಎಂದ ಕೇಜ್ರಿ| ನಾಳೆ ಮಧ್ಯಾಹ್ನ 1 ಗಂಟೆವರೆಗೆ ಬಿಜೆಪಿಗೆ ಡೆಡ್’ಲೈನ್ ನೀಡಿದ ಕೇಜ್ರಿವಾಲ್| ‘ದೆಹಲಿಯ ಜನರು ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂದು ತಿಳಿದುಕೊಳ್ಳಲು ಉತ್ಸುಕರಾಗಿದ್ದಾರೆ’|
ನವದೆಹಲಿ(ಫೆ.04): ತಾಕತ್ತಿದ್ದರೆ ನಾಳೆ ಮಧ್ಯಾಹ್ನ 1 ಗಂಟೆಯೊಳಗೆ ನಿಮ್ಮ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡಿ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಿಜೆಪಿಗೆ ಬಹಿರಂಗ ಸವಾಲು ಹಾಕಿದ್ದಾರೆ.
भाजपा अपना CM चेहरा घोषित करे। जनता चाहती है कि दोनों पार्टियों के CM कैंडिडट में बहस हो। मैं तैयार हूँ pic.twitter.com/QC8USiqpbN
— Arvind Kejriwal (@ArvindKejriwal)ಬಿಜೆಪಿ ನಾಳೆ ಮಧ್ಯಾಹ್ನ 1 ಗಂಟೆಯೊಳಗೆ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ಘೋಷಣೆ ಮಾಡಲಿ ಎಂದು ಸವಾಲು ಹಾಕಿರುವ ಕೇಜ್ರಿವಾಲ್, ಒಂದು ವೇಳೆ ಬಿಜೆಪಿ ನನ್ನ ಸವಾಲು ಸ್ವೀಕರಿಸದಿದ್ದರೆ ಮತ್ತೊಂದು ಸುದ್ದಿಗೋಷ್ಠಿ ಕರೆದು ವರ ಬಂಡವಾಳ ಬಯಲು ಮಾಡುವುದಾಗಿ ಘೋಷಿಸಿದ್ದಾರೆ.
undefined
ಮೋದಿ ನನ್ನ ಪ್ರಧಾನಿ: ಪಾಕ್ ಸಚಿವನಿಗೆ ಕೇಜ್ರಿ ತಪರಾಕಿ!
ಆಮ್ ಆದ್ಮಿ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಕೇಜ್ರಿವಾಲ್, ದೆಹಲಿಯ ಜನರು ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂದು ತಿಳಿದುಕೊಳ್ಳಲು ಉತ್ಸುಕರಾಗಿದ್ದಾರೆ ಎಂದು ವ್ಯಂಗ್ಯವಾಡಿದರು.
Aam Aadmi Party (AAP) releases party manifesto for pic.twitter.com/S3DSXZPGAw
— ANI (@ANI)ನೀವು ನಮಗೆ ಮತ ಹಾಕಿದರೆ ನಾವು ಮುಖ್ಯಮಂತ್ರಿ ಯಾರೆಂದು ನಿರ್ಧರಿಸುತ್ತೇವೆ ಎಂದು ಅಮಿತ್ ಶಾ ಹೇಳಿದ್ದಾರೆ. ಆದರೆ ಪ್ರಜಾಪ್ರಭುತ್ವದಲ್ಲಿ ಮುಖ್ಯಮಂತ್ರಿ ಯಾರಾಗಬೇಕು ಎಂದು ಜನರೇ ನಿರ್ಧರಿಸಬೇಕು ಎಂದು ಅರವಿಂದ್ ಕೇಜ್ರಿವಾಲ್ ವಾಗ್ದಾಳಿ ನಡೆಸಿದ್ದಾರೆ.