ಇಡಿ ಕಸ್ಟಡಿಯಿಂದಲೇ ಮೊದಲ ಸರ್ಕಾರಿ ಆದೇಶ ಹೊರಡಿಸಿದ ಅರವಿಂದ್‌ ಕೇಜ್ರಿವಾಲ್‌!

By Santosh Naik  |  First Published Mar 24, 2024, 9:47 AM IST

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿರುವ ಸಮಯದಲ್ಲಿಯೇ ತಮ್ಮ ಮೊದಲ ಸರ್ಕಾರಿ ಆದೇಶವನ್ನು ಹೊರಡಿಸಿದ್ದಾರೆ ಎಂದು ಆಪ್‌ ಮೂಲಗಳು ತಿಳಿಸಿವೆ.
 


ನವದೆಹಲಿ (ಮಾ.24): ಅಕ್ರಮ ಮದ್ಯ ನೀತಿ ಪ್ರಕರಣದಲ್ಲಿ ಇಡಿ ಬಂಧನದಲ್ಲಿರುವ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಜೈಲಿನಿಂದಲೇ ತಮ್ಮ ಮೊದಲ ಸರ್ಕಾರಿ ಆದೇಶವನ್ನು ಹೊರಡಿಸಿದ್ದಾರೆ ಎಂದು ಆಪ್‌ ಮೂಲಗಳು ತಿಳಿಸಿವೆ. ಜಲ ಸಚಿವಾಲಯಕ್ಕೆ ಸಂಬಂಧಪಟ್ಟ ಆದೇಶವನ್ನು ಅವರು ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ದೆಹಲಿ ಸಚಿವ ಅತಿಶಿ ಇಂದು ಬೆಳಗ್ಗೆ 10 ಗಂಟೆಗೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸುವ ನಿರೀಕ್ಷೆಯಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ರಾಷ್ಟ್ರ ರಾಜಧಾನಿಯ ಸಿವಿಲ್ ಲೈನ್ಸ್ ಪ್ರದೇಶದಲ್ಲಿನ ಅವರ ಅಧಿಕೃತ ನಿವಾಸದಲ್ಲಿ ಶೋಧದ ನಂತರ ಅಕ್ರಮ ಹಣ ವರ್ಗಾವಣೆ ತಡೆ ಕಾನೂನಿನ ಅಡಿಯಲ್ಲಿ ಇಡಿ ಬಂಧನ ಮಾಡಿತ್ತು. ಆಪಾದಿತ ಮದ್ಯ ಹಗರಣದಲ್ಲಿ ಅವರ ಪಾತ್ರದ ಕುರಿತು "ವಿವರವಾದ ಮತ್ತು ನಿರಂತರ ವಿಚಾರಣೆ" ಗಾಗಿ ಶುಕ್ರವಾರ ಅವರನ್ನು ಮಾರ್ಚ್ 28 ರವರೆಗೆ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ನೀಡಲಾಗಿದೆ.

ಕೇಜ್ರಿವಾಲ್‌ ಅವರ ಬಂಧನ ಆದ ಕ್ಷಣದಿಂದ ಪಕ್ಷದ ನಾಯಕರು ಅರವಿಂದ್‌ ಕೇಜ್ರಿವಾಲ್‌ ಅವರೇ ಮುಖ್ಯಮಂತ್ರಿಯಾಗಿ ಉಳಿಯಲಿದ್ದಾರೆ ಎಂದಿದ್ದರು, ಅಗತ್ಯ ಬಿದ್ದಲ್ಲಿ ಸರ್ಕಾರವನ್ನು ಜೈಲಿನಿಂದಲೇ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.

ಬೇಲಿಯೇ ಎದ್ದು ಹೊಲ ಮೇಯ್ದ ಸ್ಥಿತಿ: ಕೇಜ್ರಿವಾಲ್‌ ಬಗ್ಗೆಅಣ್ಣಾ ಹಜಾರೆ ವ್ಯಂಗ್ಯ

ಅಗತ್ಯವಿದ್ದಲ್ಲಿ ಕೇಜ್ರಿವಾಲ್ ಸರ್ಕಾರವನ್ನು ಜೈಲಿನಿಂದ ನಡೆಸುತ್ತಾರೆ ಎಂದು ನಾವು ಮೊದಲೇ ಹೇಳಿದ್ದೇವೆ. ಅವರು ಸರ್ಕಾರವನ್ನು ನಡೆಸಬಹುದು, ಯಾವುದೇ ನಿಯಮವು ಅವರನ್ನು ಹಾಗೆ ಮಾಡುವುದನ್ನು ತಡೆಯಲು ಸಾಧ್ಯವಿಲ್ಲ. ಅವರಿಗೆ ಶಿಕ್ಷೆಯಾಗಿಲ್ಲ, ಆದ್ದರಿಂದ ಅವರು ದೆಹಲಿ ಮುಖ್ಯಮಂತ್ರಿಯಾಗಿ ಉಳಿಯುತ್ತಾರೆ ಎಂದು ಆತಿಶಿ ಹೇಳಿದ್ದರು. ಈ ನಡುವೆ ತಮ್ಮನ್ನು ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಒಪ್ಪಿಸಿದ್ದನ್ನು ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್‌ ದೆಹಲಿ ಹೈಕೋರ್ಟ್‌ನ ಮೆಟ್ಟಿಲೇರಿದ್ದರು. ಆದರೆ, ದೆಹಲಿ ಹೈಕೋರ್ಟ್‌ ಈ ಅರ್ಜಿಯನ್ನು ತುರ್ತು ವಿಚಾರಣೆ ಮಾಡಲು ನಿರಾಕರಿಸಿದೆ.

Tap to resize

Latest Videos

ಕೇಜ್ರಿವಾಲ್‌ ಬಂಧನಕ್ಕೆ ಜರ್ಮನಿ ಸರ್ಕಾರ ಕ್ಯಾತೆ: ರಾಯಭಾರಿ ಕರೆಸಿಕೊಂಡು ತೀವ್ರ ತರಾಟೆ

click me!