ರಾಹುಲ್ ವಿರುದ್ಧ ಎಫ್ಐಆರ್ ಕೋರಿ ಸಲ್ಲಿಸಿದ್ದ ಅರ್ಜಿ ವಜಾ|

By Web DeskFirst Published Nov 23, 2019, 9:16 PM IST
Highlights

ರಾಹುಲ್ ವಿರುದ್ಧ ಎಫ್ಐಆರ್ ಕೋರಿ ಸಲ್ಲಿಸಿದ್ದ ಅರ್ಜಿ ವಜಾ|  ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪ|  ವಕೀಲ ಜೋಗಿಂದರ್ ತುಲಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ದೆಹಲಿ ಕೋರ್ಟ್| ದೆಹಲಿ ಪೊಲೀಸರು ಸಲ್ಲಿಸಿದ ವರದಿ ಆಧರಿಸಿ  ಅರ್ಜಿ ವಜಾ|

ನವದೆಹಲಿ(ನ.23): 2016ರಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಕೋರ್ಟ್ ವಜಾಗೊಳಿಸಿದೆ.

ಪ್ರಧಾನಿ ಅವರನ್ನು ಅವಮಾನಿಸಿದ್ದ ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರಿ ವಕೀಲ ಜೋಗಿಂದರ್ ತುಲಿ ದೆಹಲಿ ಕೋರ್ಟ್’ಗೆ ಅರ್ಜಿ ಸಲ್ಲಿಸಿದ್ದರು.

ರಫೇಲ್ ಹಗರಣದ ಅರ್ಜಿ ವಜಾ: ಮೋದಿಗೆ ಕ್ಲೀನ್ ಚಿಟ್, ರಾಹುಲ್‌ಗೆ ಮುಖಭಂಗ!

A special court in Delhi dismisses a complaint seeking directions to Delhi Police to register FIR against Congress leader Rahul Gandhi on charges of sedition, for allegedly making a derogatory statement against Prime Minister. (file pic) pic.twitter.com/uknxXXiFXP

— ANI (@ANI)

ಪ್ರಧಾನಿ ಮೋದಿ ಸೈನಿಕರ ತ್ಯಾಗ ಮತ್ತು ಬಲಿದಾನದಲ್ಲೂ ರಾಜಕೀಯ ಮಾಡುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ಈ ಸಂಬಂಧ ಜೋಗಿಂದರ್ ತುಲಿ ಪೊಲೀಸರಿಗೆ ದೂರು ಕೂಡ ನೀಡಿದ್ದು, ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕೋರ್ಟ್ ಮೆಟ್ಟಿಲೇರಿದ್ದರು.

ಕಾಮಿಡಿ ಸರ್ಕಸ್ ಬಿಡಿ: ಮೋದಿ ನಕ್ಕರಾ ಅಕ್ಕ-ತಮ್ಮಂದಿರ ವಾಗ್ದಾಳಿ ನೋಡಿ?

ಇದೀಗ ರಾಹುಲ್ ಗಾಂಧಿ ವಿರುದ್ಧದ ದೂರಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಸಲ್ಲಿಸಿದ ವರದಿ ಆಧರಿಸಿ ದೆಹಲಿ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿದೆ.

click me!