
ನವದೆಹಲಿ (ಸೆ.25): ಕೊರೋನಾ ಸೋಂಕಿಗೆ ತುತ್ತಾದ ಕಾರಣಕ್ಕೆ ಬುಧವಾರವಷ್ಟೇ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ಅವರಿಗೆ ಡೆಂಘೀ ಜ್ವರವಿರುವುದು ಕಂಡುಬಂದಿದೆ ಎಂದು ಮೂಲಗಳು ತಿಳಿಸಿವೆ.
ಸಿಸೋಡಿಯಾ ಅವರ ಪ್ಲೇಟ್‌ಲೆಟ್‌ಗಳ ಎಣಿಕೆಯಲ್ಲೂ ಭಾರೀ ಪ್ರಮಾಣದ ಕುಸಿತ, ಕೊರೋನಾ ಮತ್ತು ಡೆಂಘೀ ಜ್ವರವಿರುವ ಕಾರಣ ಅವರನ್ನು ಗುರುವಾರ ಸಂಜೆ ಮ್ಯಾಕ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಸದ್ಯ ಮ್ಯಾಕ್ಸ್ ಆಸ್ಪತ್ರೆಯ ಐಸಿಯುನಲ್ಲಿರುವ ಸಿಸೋಡಿಯಾ ಅವರ ವಯೋಮಿತಿ, ಇತರ ಕಾಯಿಲೆಗಳು ಸೇರಿದಂತೆ ಇನ್ನಿತರ ವಿಚಾರಗಳನ್ನು ಪರಿಗಣನೆಗೆ ತೆಗೆದುಕೊಂಡು ಅವರಿಗೆ ಎರಡೂ ಕಾಯಿಲೆಗಳಿಗೆ ಚಿಕಿತ್ಸೆ ಮುಂದುವರಿಸಲಾಗುತ್ತದೆ. ಅವರಿಗೆ ಪ್ಲಾಸ್ಮಾ ಥೆರಪಿ ಚಿಕಿತ್ಸೆ ನೀಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎನ್ನಲಾಗಿದೆ.
ಸೋಂಕಿತರಿಗೆ ಹಾಸಿಗೆ ಮೀಸಲಿಡದ 4 ಆಸ್ಪತ್ರೆ ವಿರುದ್ಧ FIRಗೆ ಆದೇಶ
ಈಗಾಗಲೇ ಕೊರೋನಾ ಸೋಂಕಿಗೆ ಹಲವು ಜನಪ್ರತಿನಿಧಿಗಳು ತುತ್ತಾಗಿದ್ದು, ಸಿಸೋಡಿಯಾ ಆರೋಗ್ಯ ಸ್ಥಿತಿಯೂ ಸಾಕಷ್ಟು ಗಂಭೀರವಾಗಿದೆ.
ಕಳೆದ ಎರಡು ದಿನಗಳ ಹಿಂದಷ್ಟೇ ಕೇಂದ್ರ ಸಚಿವ ಸುರೇಶ್ ಅಂಗಡಿ ಕೊರೋನಾದಿಂದ ಮೃತಪಟ್ಟಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ