
ನವದೆಹಲಿ: ಯಾವುದೇ ಚುನಾವಣೆಗೂ ಮುನ್ನ ರಾಜಕೀಯ ಪಕ್ಷಗಳು ತಾವು ಅಧಿಕಾರಕ್ಕೆ ಬಂದ ಕೂಡಲೇ ನೀಡುವ ಭರವಸೆಗಳನ್ನು ಪ್ರಣಾಳಿಕೆ ರೂಪದಲ್ಲಿ ಬಿಡುಗಡೆಗೊಳಿಸುತ್ತವೆ. ಇದೀಗ ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, 27 ವರ್ಷಗಳ ಬಳಿಕ ರಾಷ್ಟ್ರ ರಾಜಧಾನಿಯಲ್ಲಿ ಕಮಲ ಸರ್ಕಾರ ರಚನೆಯಾಗುತ್ತಿದೆ. ಚುನಾವಣೆ ಪ್ರಚಾರದಲ್ಲಿ ಬಿಜೆಪಿಯು ತನ್ನ ಪ್ರಣಾಳಿಕೆಯಲ್ಲಿ ಹಲವು ಗ್ಯಾರಂಟಿಗಳನ್ನು ನೀಡಿತ್ತು. ದೆಹಲಿ ಮತದಾರರು ಬಿಜೆಪಿಗೆ ಬಹುಮತ ನೀಡಿದ್ದು, ಕೆಲವೇ ದಿನಗಳಲ್ಲಿ ತಮಗೆ ಗ್ಯಾರಂಟಿಗಳು ಸಿಗುತ್ತವೆ ಎಂದ ನಿರೀಕ್ಷೆಯಲ್ಲಿದ್ದಾರೆ. ಎಎಪಿ ಮತ್ತು ಕಾಂಗ್ರೆಸ್ ಸಹ ತಮ್ಮ ಪ್ರಣಾಳಿಕೆಯಲ್ಲಿ ಉಚಿತ ಗ್ಯಾರಂಟಿ ಜೊತೆ ದೆಹಲಿಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವು ಯೋಜನೆಗಳನ್ನು ತರೋದಾಗಿ ಭರವಸೆಯನ್ನು ನೀಡಿತ್ತು. ಹಾಗಾದ್ರೆ ಇದೀಗ ಬಿಜೆಪಿ ಪ್ರಣಾಳಿಕೆಯಲ್ಲಿನ ಪ್ರಮುಖ ಅಂಶಗಳು ಏನು ಎಂಬುದರ ಮಾಹಿತಿ ಇಲ್ಲಿದೆ.
ಬಿಜೆಪಿ ಪ್ರಣಾಳಿಕೆಯ ಪ್ರಮುಖ 10 ಅಂಶಗಳು
1.ಗರ್ಭಿಣಿಯರಿಗೆ ₹21,000 ಒಂದು ಬಾರಿಯ ನಗದು ನೆರವು ಮತ್ತು ಆರು ಪೌಷ್ಟಿಕ ಕಿಟ್‌ಗಳು, ಜೊತೆಗೆ ಮೊದಲ ಮಗುವಿಗೆ ₹5,000 ಮತ್ತು ಎರಡನೇ ಮಗುವಿಗೆ ₹6,000 ನೀಡುವ ಭರವಸೆ .
2.ದೆಹಲಿಯ ಮಹಿಳೆಯರಿಗೆ ಪ್ರತಿ ತಿಂಗಳು 2,500 ರೂ. ಬಡ ಕುಟುಂಬಗಳಿಗೆ ಎಲ್‌ಪಿಜಿ ಸಿಲಿಂಡರ್‌ಗೆ 500 ರೂ ಸಬ್ಸಿಡಿ ಸಿಗಲಿದೆ. ಹೋಳಿ-ದೀಪಾವಳಿಯಂದು ತಲಾ ಒಂದು ಸಿಲಿಂಡರ್ ಉಚಿತವಾಗಿ ನೀಡಲಾಗುತ್ತದೆ. ತಿಂಗಳಿಗೆ 200 ಯೂನಿಟ್ ಉಚಿತ ವಿದ್ಯುತ್, 20,000 ಲೀಟರ್ ನೀರು ಮತ್ತು DTS ಮತ್ತು ಕ್ಲಸ್ಟರ್ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಪಾಸ್
3.60 ರಿಂದ 70 ವರ್ಷ ವಯಸ್ಸಿನ ವೃದ್ಧರ ಪಿಂಚಣಿ ಮೊತ್ತ 2,000 ರೂ.ನಿಂದ 2,500 ರೂ.ಗೆ ಹೆಚ್ಚಿಸಲಾಗುವುದು. 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ವಿಧವೆಯರು ಮತ್ತು ಅಂಗವಿಕಲರಿಗೆ ಪಿಂಚಣಿ 2,500 ರೂ.ನಿಂದ 3,000 ರೂ. ಏರಿಕೆ ಮಾಡಲಾಗುವುದು.
4.ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗಲು ದೆಹಲಿಯ ಯುವಕರಿಗೆ 15,000 ರೂಪಾಯಿ ಆರ್ಥಿಕ ನೆರವು.
5.ನಿರ್ಗತಿಕ ವಿದ್ಯಾರ್ಥಿಗಳಿಗೆ ದೆಹಲಿಯ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಕೆಜಿಯಿಂದ ಪಿಜಿವರೆಗೆ ಉಚಿತ ಶಿಕ್ಷಣ
6.ದೆಹಲಿಯಲ್ಲಿ ಗಿಗ್ ಕಾರ್ಯಕರ್ತರಿಗೆ 10 ಲಕ್ಷ ರೂಪಾಯಿಗಳ ಜೀವ ವಿಮೆ ಮತ್ತು 5 ಲಕ್ಷ ರೂಪಾಯಿಗಳ ಅಪಘಾತ ವಿಮೆ
ಇದನ್ನೂ ಓದಿ: ಕೊನೆ 15 ದಿನದಲ್ಲಿ ದೆಹಲಿ ಚುನಾವಣೆ ದಿಕ್ಕನ್ನೇ ಬದಲಿಸಿ ಬಿಜೆಪಿಯನ್ನು ಗೆಲ್ಲಿಸಿದ್ದೇಗೆ ರಾಹುಲ್-ಪ್ರಿಯಾಂಕಾ?
7.ಆಟೋ ಚಾಲಕರಿಗೆ ರೂ 10 ಲಕ್ಷ ಜೀವ ವಿಮೆ + ರೂ 5 ಲಕ್ಷ ಅಪಘಾತ ವಿಮೆ ನೀಡಲಾಗುವುದು. 50 ಸಾವಿರ ಉದ್ಯೋಗ ಸೃಷ್ಟಿಯ ಭರವಸೆ. ಯಮುನಾ ರಿವರ್ ಫ್ರಂಟ್ ನಿರ್ಮಿಸುವುದಾಗಿ ಬಿಜೆಪಿ ಹೇಳಿತ್ತು.
8. ರಾಷ್ಟ್ರೀಯ ಸಾಮಾನ್ಯ ಮೊಬಿಲಿಟಿ ಕಾರ್ಡ್ ಯೋಜನೆಯಡಿ, ದೆಹಲಿ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ವಾರ್ಷಿಕವಾಗಿ ರೂ 4,000 ವರೆಗಿನ ಉಚಿತ ಪ್ರಯಾಣ.
9.ದೆಹಲಿಯಲ್ಲಿ ಆಯುಷ್ಮಾನ್ ಯೋಜನೆಯಡಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡುವ ಭರವಸೆ.
10. 20 ಲಕ್ಷ ಸ್ವಯಂ ಉದ್ಯೋಗಾವಕಾಶ ಕಲ್ಪಿಸುವುದಾಗಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಹೇಳಿತ್ತು.
ಇದನ್ನೂ ಓದಿ: ಓವೈಸಿ ಚದುರಂಗದಾಟಕ್ಕೆ ಬಿಜೆಪಿ ಚೆಕ್‌ಮೆಟ್; ಮುಸ್ಲಿಂ ಪ್ರಾಬಲ್ಯ ಕ್ಷೇತ್ರದಲ್ಲಿ ಕಮಲ ಬಾವುಟ ಹಾರಿದ್ದೇಗೆ?
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ