ದೆಹಲಿ ಅಬಕಾರಿ ಹಗರಣ: ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು

By Anusha KbFirst Published May 10, 2024, 2:14 PM IST
Highlights

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿ ಜೈಲಿನಲ್ಲಿರುವ ದೆಹಲಿ ಸಿಎಂ ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. 

ನವದೆಹಲಿ: : ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿ ಜೈಲಿನಲ್ಲಿರುವ ದೆಹಲಿ ಸಿಎಂ ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. 

ದೆಹಲಿ ಮದ್ಯ ನೀತಿ ಹಗರಣಲ್ಲಿ ಜೈಲು ಸೇರಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ನ್ಯಾಯಾಲಯದಿಂದ 21 ದಿನಗಳ ಕಾಲ ಜಾಮೀನು ಮಂಜೂರು ಮಾಡಲಾಗಿದೆ. ಲೋಕಸಭಾ ಚುನಾವಣೆ ಪ್ರಚಾರಕ್ಕಾಗಿ ಜಾಮೀನು ಕೇಳಿದ್ದ ಅರವಿಂದ ಕೇಜ್ರಿವಾಲ್ ಅವರಿಗೆ ಇದೊಂದು ಅಪರೂಪದ ಪ್ರಕರಣವೆಂದು ಪರುಗಣಿಸಿ ಜೂ.1ರವರೆಗೆ ಜಾಮೀನು ಮಂಜೂರು ಮಾಡಲಾಗಿದೆ. ಮಾ.21ಕ್ಕೆ ಅರವಿಂದ್ ಕೇಜ್ರಿವಾಲ್ ಅರೆಸ್ಟ್ ಆಗಿದ್ದು, ಏ.1ರಂದು ಜೈಲು ಸೇರಿದ್ದರು. ಈಗ ಚುನಾವಣೆ ಪ್ರಚಾರ ಕಾರ್ಯದ ಹಿನ್ನೆಲೆಯಲ್ಲಿ ಜೂ.1ರವರೆಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಕೇಜ್ರಿವಾಲ್‌ಗೆ ಮತ್ತೊಂದು ಸಂಕಷ್ಟ, ಖಲಿಸ್ತಾನ ಲಿಂಕ್‌ ಕುರಿತಾಗಿ ಎನ್‌ಐಎ ತನಿಖೆಗೆ ಶಿಫಾರಸು

ಯಾವುದೇ ಕಡತಕ್ಕೆ ಸಹಿ ಹಾಕುವಂತಿಲ್ಲ:

ಅರವಿಂದ್ ಕೇಜ್ರಿವಾಲ್ ಅವರು ಮಧ್ಯಂತರ ಜಾಮೀನಿನ ಮೇಲೆ ಹೊರಗೆ ಬಂದಿದ್ದರೂ ಮುಖ್ಯಮಂತ್ರಿಯಾಗಿ ಸ್ವತಂತ್ರವಾಗಿ ಅಧಿಕಾರ ನಡೆಸಲು ಅವಕಾಶ ನೀಡಿಲ್ಲ. ಮುಖ್ಯವಾಗಿ ನೀವು ಯಾವುದೇ ಸರ್ಕಾರದ ಕಡತಕ್ಕೆ ಸಹಿ ಹಾಕುವಂತಿಲ್ಲ ಎಂದು ಸುಪ್ರೀಂಕೋರ್ಟ್ ಷರತ್ತನ್ನು ವಿಧಿಸಿದೆ. ಈಗ ಮಧ್ಯಂತರ ಜಾಮೀನಿನ ಮೇಲೆ ಹೊರ ಬಂದಿದ್ದರೂ ಅವರು ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಾತ್ರ ಪಾಲ್ಗೊಳ್ಳಬಹುದು ಎಂದು ನ್ಯಾಯಾಲಯ ಅರವಿಂದ್ ಕೇಜ್ರಿವಾಲ್‌ಗೆ ಸೂಚಿಸಿದೆ.

ಚುನಾವಣೆ ಟೈಮ್‌ನಲ್ಲೇ ಅರವಿಂದ್‌ ಕೇಜ್ರಿವಾಲ್‌ ಅರೆಸ್ಟ್‌ ಮಾಡಿದ್ದೇಕೆ? ಇಡಿಗೆ ಪ್ರಶ್ನೆ ಮಾಡಿದ ಸುಪ್ರೀಂ ಕೋರ್ಟ್‌ 
 

ಈಗಾಗಲೇ ಅರವಿಂದ್ ಕೇಜ್ರಿವಾಲ್ 50 ದಿನ ಜೈಲಿನಲ್ಲಿ ಪೂರೈಸಿದ್ದು, ಈಗ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಲಾಗಿದೆ. ಜೂನ್ 2 ರಂದು ಅಂದರೆ ಎಲ್ಲಾ ಹಂತದ ಲೋಕಸಭಾ ಚುನಾವಣೆ ಮುಗಿದ ಕೂಡಲೇ  ಅರವಿಂದ್ ಕೇಜ್ರಿವಾಲ್ ಮತ್ತೆ ನ್ಯಾಯಾಲಯಕ್ಕೆ ಹಾಜರಾಗಬೇಕಿದೆ. 

ಕೇಜ್ರಿವಾಲ್ ಬಂಧನ ವಿಳಂಬವಾಗಿದ್ದೇಕೆ ಪ್ರಶ್ನಿಸಿದ ಸುಪ್ರೀಂಕೋರ್ಟ್

ಇದೇ ವೇಳೆ ಸುಪ್ರೀಂಕೋರ್ಟ್ ಜಡ್ಜ್‌ಗಳಾದ ಸಂಜೀವ್ ಖನ್ನಾ ಹಾಗೂ ದೀಪಾಂಕರ್ ದತ್ತಾ ಅವರಿದ್ದ ಪೀಠ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲು ವಿಳಂಬ ಮಾಡಿದ್ದೇಕೆ ಎಂದು ಇಡಿ ಅಧಿಕಾರಿಗಳನ್ನು ಪ್ರಶ್ನೆ ಮಾಡಿತ್ತು. ಕೇಂದ್ರ ತನಿಖಾ ತಂಡ ಇಸಿಐಆರ್( ಜಾರಿ ನಿರ್ದೇಶನಾಯ ಪ್ರಕರಣದ ಮಾಹಿತಿ ವರದಿ)ನ್ನು ಆಗಸ್ಟ್ 2022ರಂದೇ ದಾಖಲಿಸಿತ್ತು. ಆದರೆ  ಕೇಜ್ರಿವಾಲ್ ಅವರನ್ನು ಬಂಧಿಸಿದ್ದು ಮಾತ್ರ ಈ ವರ್ಷ ಮಾರ್ಚ್‌ನಲ್ಲಿ ಇಷ್ಟೊಂದು ವಿಳಂಬ ಮಾಡಿದ್ದು ಏಕೆ ಸುಮಾರು ಒಂದು ಒಂದೂವರೆ ವರ್ಷಕ್ಕೂ ಹೆಚ್ಚು ಕಾಲ ಅವರನ್ನು ಬಂಧಿಸಲೇ ಇಲ್ಲ, ಎಂದು ನ್ಯಾಯಾಧೀಶರು ಪ್ರಶ್ನೆ ಮಾಡಿದರು.

ಅಲ್ಲದೇ ಜಾಮೀನು ನೀಡುವ ವೇಳೆ ಜೂನ್ 2 ರಂದು ನ್ಯಾಯಾಲಯಕ್ಕೆ ಶರಣಾಗುವಂತೆ ಸುಪ್ರೀಂಕೋರ್ಟ್ ಅರವಿಂದ್ ಕೇಜ್ರಿವಾಲ್‌ಗೆ ಸೂಚಿಸಿದೆ. ಅಬಕಾರಿ ಮದ್ಯ ಕಾಯ್ದೆಯಲ್ಲಿ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಬಂಧಿತರಾಗಿರುವ ಅರವಿಂದ್ ಕೇಜ್ರಿವಾಲ್ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಪರ ಪ್ರಚಾರ ಮಾಡಲು ಜಾಮೀನು ನೀಡುವಂತೆ ಕೇಳಿದ್ದರು.

click me!