
ನವದೆಹಲಿ (ಫೆ.21): ಪೌರತ್ವ ಕಾಯ್ದೆ ವಿರೋಧಿ ಹೋರಾಟದ ಕೇಂದ್ರಬಿಂದು ಆಗಿರುವ ದೆಹಲಿಯ ಶಾಹೀನ್ ಬಾಗ್‌ನಲ್ಲಿ ಸುಪ್ರೀಂ ಕೋರ್ಟ್ ಸಂಧಾನಕಾರರಿಗೆ ಭಾಗಶ: ಯಶಸ್ಸು ಸಿಕ್ಕಿದ್ದು, ಒಂದು ಪ್ರಮುಖ ರಸ್ತೆ ಈಗ ಸಂಚಾರಕ್ಕೆ ಮುಕ್ತವಾಗಿದೆ.
ಈ ಮೂಲಕ ಕಳೆದ 69 ದಿನಗಳಿಂದ ಬ್ಲಾಕ್ ಆಗಿದ್ದ ಫರೀದಾಬಾದ್- ದೆಹಲಿ ಸಂಪರ್ಕಿಸುವ ರಸ್ತೆಯು ಸಂಚಾರಕ್ಕೆ ಮುಕ್ತವಾಗಿದೆ. ಆದರೆ ದೆಹಲಿ -ನೋಯ್ಡಾ ಸಂಪರ್ಕಿಸುವ ರಸ್ತೆ ಈಗಲೂ ಬ್ಲಾಕ್ ಆಗಿಯೇ ಇದೆ.
ಇದನ್ನೂ ಓದಿ | ಮೋದಿ, ಅಮಿತ್ ಎಲ್ಲಾ ಎಲೆಕ್ಷನ್ ಗೆಲ್ಲಿಸಲಾಗದು,ನೀವೂ ಸಜ್ಜಾಗಿ: RSS
ಪ್ರತಿಭಟನೆಯಿಂದ ಈ ಪ್ರದೇಶದಲ್ಲಿ ಸಂಚಾರ ವ್ಯವಸ್ಥೆಯು ಹದಗೆಟ್ಟಿದ್ದು ಪರಿಹಾರ ಕಂಡುಹುಡುಕುವ ನಿಟ್ಟಿನಲ್ಲಿ ಈ ಪ್ರಯತ್ನ ನಡೆದಿದೆ. ಪೊಲೀಸರ ಸಹಕಾರದಿಂದ ಕೆಲವು ಪರ್ಯಾಯ ಮಾರ್ಗಗಳನ್ನು ಸಂಚಾರಕ್ಕೆ ಮುಕ್ತಗೊಳಿಸಲಾಗುತ್ತಿದೆ.
ಕೇಂದ್ರ ಸರ್ಕಾರವು ಜಾರಿಗೊಳಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆ-2019 ಮತ್ತು ಉದ್ದೇಶಿತ ಎನ್‌ಪಿಆರ್ & ಎನ್‌ಆರ್‌ಸಿ ಪ್ರಕ್ರಿಯೆಯನ್ನು ಕೈಬಿಡಬೇಕೆಂದು ಆಗ್ರಹಿಸಿ ಕಳೆದ 69 ದಿನಗಳಿಂದ ಮಹಿಳೆಯರು ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ | ಮಂಗಳೂರು: CAA ವಿರೋಧಿ ಪ್ರತಿಭಟನೆಯಿಂದ ಅಮೂಲ್ಯ ಔಟ್..!
ಈ ಪ್ರಕರಣ ಸುಪ್ರೀಂ ಮೆಟ್ಟಿಲೇರಿದ್ದು, ಪ್ರತಿಭಟನಾಕಾರರ ಮನವೊಲಿಸಲು ನಡೆಸಲು ಇಬ್ಬರು ಹಿರಿಯ ವಕೀಲರನ್ನು ಸಂಧಾನಕಾರರಾಗಿ ನೇಮಿಸಿತ್ತು. ಸಂಜಯ್ ಹೆಗ್ಡೆ ಮತ್ತು ಸಾಧನ ರಾಮಚಂದ್ರನ್ ಕಳೆದ ಮೂರುದಿನಗಳಿಂದ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ.
ಸಿಎಎ ಹಿಂಪಡೆಯುವವರೆಗೂ ಚಳುವಳಿ ಮುಂದುವರೆಸುತ್ತೇವೆ ಎಂದು ಪ್ರತಿಭಟನಾಕಾರರು ಪಟ್ಟುಹಿಡಿದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ