* ದೇಶಕ್ಕೊಂದು ಗುಡ್ ನ್ಯೂಸ್ ಕೊಟ್ಟ ಕೇಂದ್ರ ಆರೋಗ್ಯ ಸಚಿವ
* ದೈನಂದಿನ ಪ್ರಕರಣಗಳ ಸಂಖ್ಯೆ ತೀರಾ ಇಳಿಕೆ
* ಹತ್ತು ರಾಜ್ಯಗಳಲ್ಲಿ ಶೇ 83ರಷ್ಟು ಸಕ್ರಿಯ ಪ್ರಕರಣ
ನವದೆಹಲಿ(ಜೂ.07): ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಸೋಮವಾರ ಮಾತನಾಡುತ್ತಾ ದೆಹಲಿ, ಹರ್ಯಾಣ ಸೇರಿ ಒಟ್ಟು ಏಳು ರಾಜ್ಯಗಳಲ್ಲಿ ಒಂದು ಸಾವಿರಕ್ಕಿಂತ ಕಡಿಮೆ ಕೊರೋನಾ ಪ್ರಕರಣಗಳು ದಾಖಲಾಗುತ್ತಿವೆ ಎಂದು ತಿಳಿಸಿದ್ದಾರೆ. ಈ ಪಟ್ಟಿಯಲ್ಲಿ ಮಧ್ಯಪ್ರದೇಶ, ರಾಜಸ್ಥಾನ, ಗುಜರಾತ್, ಉತ್ತರಾಖಂಡ್ ಹಾಗೂ ಜಾರ್ಖಂಡ್ ಹೆಸರು ಕೂಡಾ ಇದೆ.
ದೇಶದಲ್ಲಿ ಕೊರೋನಾ ಪರಿಸ್ಥಿತಿ ವಿಚಾರವಾಗಿ ಕೇಂದ್ರ ಸಚಿವ ಡಾ. ಹರ್ಷವರ್ಧನ್ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಈ ವೇಳೆ ದೇಶದಲ್ಲಿಂದು 14.01 ಲಕ್ಷ ಕೊರೋನಾ ಸಕ್ರಿಯ ಪ್ರಕರಣಗಳಿವೆ ಎಂದಿದ್ದಾರೆ.
undefined
ಚೀನಾ ಲ್ಯಾಬ್ನಲ್ಲೇ ಕೊರೋನಾ ಹುಟ್ಟು, ಅಮೆರಿಕಾದ ಫಂಡಿಂಗ್: ಮೋಸ ಮಾಡಿದ್ದ ಡ್ರ್ಯಾಗನ್!
ಹತ್ತು ರಾಜ್ಯಗಳಲ್ಲಿ ಶೇ 83ರಷ್ಟು ಸಕ್ರಿಯ ಪ್ರಕರಣ
ದೇಶದಲ್ಲಿರುವ ಒಟ್ಟು ಸಕ್ರಿಯ ಪ್ರಕರಣಗಳಲ್ಲಿ ಶೇ. 83ರಷ್ಟು ಕೇವಲ ಹತ್ತು ರಾಜ್ಯಗಳಲ್ಲಿವೆ. ಉಳಿದ ಶೇ. 17ರಷ್ಟು ಪ್ರಕರಣಗಳು 26 ರಾಜ್ಯಗಳಲ್ಲಿವೆ ಎಂದಿದ್ದಾರೆ. ಈ ವೇಳೆ ಅಧಿಕಾರಿಗಳು ಮುಂದಿನ ದಿನಗಳಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಎದುರಾದಾಗ ಎಲ್ಲಾ ರೀತಿಯಲ್ಲಿ ಸಜ್ಜಾಗಿರಲು ಬೇಕಾದ ಕ್ರಮ ಕೈಗೊಳ್ಳುವ ಬಗ್ಗೆಯೂ ಚರ್ಚಿಸಿದ್ದಾರೆ.
ಈ ರಾಜ್ಯಗಳಲ್ಲಿ 2 ಸಾವಿರಕ್ಕಿಂತ ಕಡಿಮೆ ಪ್ರಕರಣಗಳು
ಜಮ್ಮು ಕಾಶ್ಮೀರ, ಪಂಜಾಬ್, ಬಿಹಾರ, ಛತ್ತೀಸ್ಗಢ ಹಾಗೂ ಉತ್ತರ ಪ್ರದೇಶದಲ್ಲಿ ದಾಖಲಾಗುತ್ತಿರುವ ದೈನಂದಿನ ಪ್ರಕರಣಗಳು ಎರಡು ಸಾವಿರಕ್ಕಿಂತ ಕಡಿಮೆ ಇದೆ ಎಂದೂ ಆರೋಗ್ಯ ಸಚಿವರು ತಿಳಿಸಿದ್ದಾರೆ.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona