CJP Account Ban: ಕಾಕ್ರೋಚ್ ಜನತಾ ಪಾರ್ಟಿಗೆ ಹಿನ್ನಡೆ: 'ಎಕ್ಸ್' ಖಾತೆ ಬ್ಯಾನ್, ತಕ್ಷಣಕ್ಕೆ ರಿಲೀಫ್ ನೀಡಲು ಹೈಕೋರ್ಟ್ ನಕಾರ

Published : May 29, 2026, 02:03 PM IST
Delhi HC refuses to immediately restore Cockroach Janta Party s X accountSuspension Case in India

ಸಾರಾಂಶ

'ಕಾಕ್ರೋಚ್ ಜನತಾ ಪಾರ್ಟಿ'ಯ 'ಎಕ್ಸ್' ಖಾತೆ ಬ್ಯಾನ್ ಪ್ರಶ್ನಿಸಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಸಲ್ಲಿಸಿದ್ದ ಅರ್ಜಿಗೆ ದೆಹಲಿ ಹೈಕೋರ್ಟ್ ತಕ್ಷಣದ ರಿಲೀಫ್ ನೀಡಿಲ್ಲ. ಪ್ರಕರಣದ ಗಂಭೀರತೆ ಪರಿಗಣಿಸಿ, ಕೇಂದ್ರದ ವಾದ ಕೇಳಿದ ನಂತರವೇ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿ, ವಿಚಾರಣೆ ಜುಲೈ 6ಕ್ಕೆ ಮುಂದೂಡಿದೆ.

ದೆಹಲಿ ಮೇ.(29) ಕಾಕ್ರೋಚ್ ಜನತಾ ಪಾರ್ಟಿ(Cockroach Janta Party)ಯ 'ಎಕ್ಸ್' ಖಾತೆ ಬ್ಯಾ(X Accound Ban)ನ್ ಮಾಡಿದ್ದಕ್ಕೆ ಸಂಬಂಧಿಸಿದಂತೆ, ಅದರ ಸಂಸ್ಥಾಪಕ ಅಭಿಜಿತ್ ದೀಪ್ಕೆ(Abhijit Deepke) ಸಲ್ಲಿಸಿದ್ದ ಅರ್ಜಿಗೆ ತಕ್ಷಣಕ್ಕೆ ಯಾವುದೇ ರಿಲೀಫ್ ಸಿಕ್ಕಿಲ್ಲ. ಈ ಪ್ರಕರಣ ಗಂಭೀರ ಪರಿಣಾಮಗಳನ್ನು ಬೀರುವ ಸಾಧ್ಯತೆ ಇರುವುದರಿಂದ, ಸರ್ಕಾರದ ವಾದ ಕೇಳಿದ ನಂತರವೇ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಸಾಧ್ಯ ಎಂದು ನ್ಯಾಯಮೂರ್ತಿ ಪುರುಷೀಂದ್ರ ಕುಮಾರ್ ಕೌರವ್ ಸ್ಪಷ್ಟಪಡಿಸಿದ್ದಾರೆ. ಖಾತೆ ಬ್ಯಾನ್ ಮಾಡಿರುವ ಕುರಿತ ದೂರನ್ನು ತುರ್ತಾಗಿ ಪರಿಶೀಲಿಸುವಂತೆ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ ಕೋರ್ಟ್ ಸೂಚನೆ ನೀಡಿದೆ. ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿರುವ ಕೋರ್ಟ್, ಹೆಚ್ಚಿನ ವಿಚಾರಣೆಗಾಗಿ ಪ್ರಕರಣವನ್ನು ಜುಲೈ 6ಕ್ಕೆ ಮುಂದೂಡಿದೆ.

ಅರ್ಜಿದಾರ ಅಭಿಜಿತ್‌ಗೆ ಕೋರ್ಟ್ ಸೂಚಿಸಿದ್ದೇನೆ?

ಸಚಿವಾಲಯದ ಪರಿಶೀಲನಾ ಸಮಿತಿ ಮುಂದೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗುವಂತೆ ಅರ್ಜಿದಾರ ಅಭಿಜಿತ್ ದೀಪ್ಕೆ ಅವರಿಗೂ ಕೋರ್ಟ್ ಸೂಚಿಸಿದೆ. ಈ ಪ್ರಕರಣದಲ್ಲಿ ಕೇಂದ್ರ ಸರ್ಕಾರ ಮತ್ತು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ 'ಎಕ್ಸ್'ಗೂ ನ್ಯಾಯಾಲಯ ನೋಟಿಸ್ ಕಳುಹಿಸಿದೆ. ರಾಷ್ಟ್ರೀಯ ಭದ್ರತೆಯ ಕಾರಣಗಳನ್ನು ಮುಂದಿಟ್ಟು, ಐಟಿ ಕಾಯ್ದೆಯ ಸೆಕ್ಷನ್ 69(ಎ) ಅಡಿಯಲ್ಲಿ ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ಅಭಿಜಿತ್ ದೀಪ್ಕೆ ಅವರ ಖಾತೆಯನ್ನು ಬ್ಯಾನ್ ಮಾಡಲಾಗಿತ್ತು. ತಮ್ಮ ವಾದವನ್ನು ಕೇಳದೆ ಏಕಾಏಕಿ ಕ್ರಮ ಕೈಗೊಂಡಿರುವುದು ಸ್ವಾಭಾವಿಕ ನ್ಯಾಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆ ಎಂದು ಅರ್ಜಿದಾರರು ನ್ಯಾಯಾಲಯದಲ್ಲಿ ವಾದ ಮಂಡಿಸಿದರು.

ಕಾಕ್ರೋಚ್ ಜನತಾ ಪಾರ್ಟಿ'ಯ ಅಧಿಕೃತ 'ಎಕ್ಸ್ ಖಾತೆಯಿಂದ ಭದ್ರತೆಗೆ ಅಪಾಯ

ಜನಪ್ರಿಯ ರಾಜಕೀಯ ವಿಡಂಬನಾತ್ಮಕ ಗುಂಪಾದ 'ಕಾಕ್ರೋಚ್ ಜನತಾ ಪಾರ್ಟಿ'ಯ ಅಧಿಕೃತ 'ಎಕ್ಸ್' (ಹಿಂದಿನ ಟ್ವಿಟರ್) ಖಾತೆಯು ರಾಷ್ಟ್ರೀಯ ಭದ್ರತೆಗೆ ಅಪಾಯಕಾರಿ ಎಂದು ಹೇಳಿ ಕೇಂದ್ರ ಸರ್ಕಾರ ಭಾರತದಲ್ಲಿ ಬ್ಯಾನ್ ಮಾಡಿತ್ತು. ಮೇ ತಿಂಗಳ ಮೂರನೇ ವಾರದಲ್ಲಿ ಈ ಖಾತೆಯನ್ನು ಭಾರತದಲ್ಲಿ ನಿರ್ಬಂಧಿಸಲಾಗಿತ್ತು. ಬಿಜೆಪಿಯ 'ಎಕ್ಸ್' ಖಾತೆಗಿಂತಲೂ ಹೆಚ್ಚು ಫಾಲೋವರ್ಸ್‌ಗಳನ್ನು ಪಡೆದು ಈ ಖಾತೆ ಸಖತ್ ಸದ್ದು ಮಾಡುತ್ತಿದ್ದ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇನ್​ಸ್ಟಾ, ಫೇಸ್​ಬುಕ್​, ವಾಟ್ಸ್​ಆ್ಯಪ್​ಗೆ ಮಾಸಿಕ ಶುಲ್ಕ ನಿಗದಿ: ದುಡ್ಡು ಕೊಟ್ರೆ ಮಾತ್ರ ಬಳಕೆ- ಡಿಟೇಲ್ಸ್​ ಇಲ್ಲಿದೆ
100, 101 ಅಂತ ಬೇರೆ ಬೇರೆ ನಂಬರ್ ಒತ್ತಬೇಕಾಗಿಲ್ಲ, ಒಂದೇ ನಂಬರ್ ನಲ್ಲಿ ಸಿಗಲಿದೆ ಎಲ್ಲ ಸೇವೆ