ಅರವಿಂದ್‌ ಕೇಜ್ರಿವಾಲ್‌ಗೆ ರಿಲೀಫ್‌ ನೀಡದ ದೆಹಲಿ ಹೈಕೋರ್ಟ್‌

By Santosh NaikFirst Published Mar 27, 2024, 7:00 PM IST
Highlights

ಜಾರಿ ನಿರ್ದೇಶನಾಲಯದ ಅಧಿಕಾರಿಗಳನ್ನು ತಮ್ಮನ್ನು ಬಂಧಿಸಿದ ವಿರುದ್ಧ ಸಲ್ಲಿಸಿದ್ದ ಅರ್ಜಿಯಲ್ಲಿ ದೆಹಲಿ ಹೈಕೋರ್ಟ್‌ ಅರವಿಂದ್‌ ಕೇಜ್ರಿವಾಲ್‌ಗೆ ರಿಲೀಫ್‌ ನೀಡಲು ನಿರಾಕರಿಸಿದ್ದು, ಏಪ್ರಿಲ್‌ 2ರ ಒಳಗಾಗಿ ಉತ್ತರ ನೀಡಲು ಇಡಿಗೆ ಅವಕಾಶ ನೀಡಿದೆ.
 

ನವದೆಹಲಿ (ಮಾ.27): ಅಕ್ರಮ ಮದ್ಯ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಮ್ಮನ್ನು ಬಂಧಿಸಿದ್ದರ ವಿರುದ್ಧ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಈ ಕೇಸ್‌ನಲ್ಲಿ ಅರವಿಂದ್‌ ಕೇಜ್ರಿವಾಲ್‌ಗೆ ಹಿನ್ನಡೆಯಾಗಿದೆ. ಅಕ್ರಮ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಕಳೆದವಾರ ಇಡಿ ಅಧಿಕಾರಿಗಳು ಬಂಧಿಸಿದ್ದರು. ಮದ್ಯದ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯವು ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿತು. ಪ್ರಕರಣದ ಮುಂದಿನ ವಿಚಾರಣೆ ಏಪ್ರಿಲ್ 3 ರಂದು ನಡೆಯಲಿದೆ.
 

click me!