ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಬಿಗ್ ರಿಲೀಫ್: ಜಾಮೀನು ಸಿಕ್ಕರೂ ಜೈಲೇ ಗತಿ

By Anusha Kb  |  First Published Jul 12, 2024, 11:25 AM IST

ದೆಹಲಿ ಅಬಕಾರಿ ಲೈಸೆನ್ಸ್‌ ಹಗರಣದಲ್ಲಿ ಬಂಧನಕ್ಕೊಳಗಾಗಿ ಜೈಲಿನಲ್ಲಿರುವ ಎಎಪಿ ಮುಖ್ಯಸ್ಥ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ.


ನವದೆಹಲಿ: ದೆಹಲಿ ಅಬಕಾರಿ ಲೈಸೆನ್ಸ್‌ ಹಗರಣದಲ್ಲಿ ಬಂಧನಕ್ಕೊಳಗಾಗಿ ಜೈಲಿನಲ್ಲಿರುವ ಎಎಪಿ ಮುಖ್ಯಸ್ಥ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಜಾರಿ ನಿರ್ದೇಶನಾಲಯದಿಂದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತನಾಗಿರುವ ಅರವಿಂದ್ ಕೇಜ್ರಿವಾಲ್‌ಗೆ ಈಗ ಸುಪ್ರೀಂಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಆದರೆ ಪ್ರತ್ಯೇಕ ಪ್ರಕರಣದಲ್ಲಿ ಸಿಬಿಐನಿಂದಲೂ ಅರವಿಂದ್ ಕೇಜ್ರಿವಾಲ್ ಅವರು ಬಂಧಿತರಾಗಿರುವ ಕಾರಣ ಈಗ ಸುಪ್ರೀಂಕೋರ್ಟ್ ಜಾಮೀನು ನೀಡಿದರೂ ಕೂಡ ಕೇಜ್ರಿವಾಲ್‌ಗೆ ಬಿಡುಗಡೆ ಭಾಗ್ಯ ಇಲ್ಲವಾಗಿದೆ. 

ನ್ಯಾ. ಸಂಜೀವ್ ಖನ್ನಾ ಹಾಗೂ ನ್ಯಾ. ದೀಪಾಂಕರ್ ದತ್ತಾ ಅವರಿದ್ದ ಸುಪ್ರೀಂಕೋರ್ಟ್‌ ಪೀಠವೂ ಈ ತೀರ್ಪು ನೀಡಿದೆ. ಅರವಿಂದ್ ಕೇಜ್ರಿವಾಲ್ ಅವರು ಈಗಾಗಲೇ 90 ದಿನಗಳ ಜೈಲು ವಾಸವನ್ನು ಅನುಭವಿಸಿದ್ದಾರೆ ಎಂದು ಹೇಳಿದ ಸುಪ್ರೀಂಕೋರ್ಟ್ ಪೀಠವೂ ಇಡಿ ದಾಖಲಿಸಿದ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

Tap to resize

Latest Videos

ಕೇಜ್ರಿವಾಲ್ ಮದ್ಯ ಹಗರಣದ ನೇರ ಫಲಾನುಭವಿ, ಉಳಿದ ಸಚಿವರು ನೆಪ ಮಾತ್ರ: ಇ.ಡಿ.

ದೆಹಲಿ ಅಬಕಾರಿ ಲೈಸೆನ್ಸ್ ಹಗರಣದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ  ಅರವಿಂದ್ ಕೇಜ್ರಿವಾಲ್ ಅವರನ್ನು ಕಳೆದ ಮಾರ್ಚ್‌ನಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದರು. ಇತ್ತೀಚೆಗೆ ಈ ಪ್ರಕರಣದಲ್ಲಿ  ಕೆಳ ನ್ಯಾಯಾಲಯವೂ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಆದರೆ ಇದಕ್ಕೆ  ಏಪ್ರಿಲ್ 9 ರಂದು ದೆಹಲಿ ಹೈಕೋರ್ಟ್ ತಡೆ ನೀಡಿತ್ತು. ಇದನ್ನು ಪ್ರಶ್ನಿಸಿ  55 ವರ್ಷದ ಅರವಿಂದ್ ಕೇಜ್ರಿವಾಲ್ ಅವರು ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದರು. 

ಕೇಜ್ರಿವಾಲ್‌ಗೆ ಮೂರು ದಿನ ಸಿಬಿಐ ರಿಮಾಂಡ್‌, ರೋಸ್‌ ಅವೆನ್ಯೂ ಕೋರ್ಟ್‌ ಆದೇಶ! 

2021ರ ನವಂಬರ್‌ನಲ್ಲಿ ಜಾರಿಗೆ ತಂದೆ ದೆಹಲಿ ಸರ್ಕಾರದ ಹೊಸ ಅಬಕಾರಿ ಲೈಸೆನ್ಸ್ ನಿಯಮಗಳಂತೆ ದೆಹಲಿ ಸರ್ಕಾರವೂ ಅಬಕಾರಿ ಮದ್ಯದ ಚಿಲ್ಲರೆ ಮಾರಾಟವನ್ನು ಹಿಂದಕ್ಕೆ ಪಡೆದಿತ್ತು. ಜೊತೆಗೆ ಖಾಸಗಿ ಸಂಸ್ಥೆಗಳಿಗೆ ಮದ್ಯದಂಗಡಿಗಳನ್ನು ನಡೆಸುವುದಕ್ಕೆ ಲೈಸೆನ್ಸ್ ನೀಡಿತ್ತು. 2022ರ ಜುಲೈನಲ್ಲಿ ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ನರೇಶ್‌ ಕುಮಾರ್ ಅವರು ಈ ಅಬಕಾರಿ ಕಾಯ್ದೆಯಲ್ಲಿ ನಿಯಮ ಉಲ್ಲಂಘನೆಯಾಗಿರುವುದನ್ನು ಗಮನಿಸಿದ್ದರು.  ಅಲ್ಲದೇ ಮದ್ಯ ಪರವಾನಗಿ ಪಡೆದವರು ಇದಕ್ಕೆ ಪ್ರತಿಯಾಗಿ ಸರ್ಕಾರಕ್ಕೆ ಬೇರೆ ರೀತಿಯಲ್ಲಿ ಸಹಕರಿಸಿದ್ದಾರೆ ಎಂದು ಆರೋಪಿಸಿದ್ದರು. ನಂತರ ಅದೇ ವರ್ಷ ಸೆಪ್ಟೆಂಬರ್‌ನಲ್ಲಿ ಈ ಹೊಸ ಅಬಕಾರಿ ನೀತಿಯನ್ನು ರದ್ದುಗೊಳಿಸಲಾಗಿತ್ತು.

click me!