ಸಿಬಿಐ ವಿಚಾರಣೆ ಬೆನ್ನಲ್ಲೇ ಅರವಿಂದ್ ಕೇಜ್ರಿವಾಲ್‌ಗೆ ಬಂಧನ ಭೀತಿ, ತುರ್ತು ಸಭೆ ನಡೆಸಿದ ಆಪ್!

Published : Apr 16, 2023, 06:21 PM ISTUpdated : Apr 16, 2023, 06:23 PM IST
ಸಿಬಿಐ ವಿಚಾರಣೆ ಬೆನ್ನಲ್ಲೇ ಅರವಿಂದ್ ಕೇಜ್ರಿವಾಲ್‌ಗೆ ಬಂಧನ ಭೀತಿ, ತುರ್ತು ಸಭೆ ನಡೆಸಿದ ಆಪ್!

ಸಾರಾಂಶ

ಅಬಕಾರಿ ಹಗರಣ ತನಿಖೆ ನಡೆಸುತ್ತಿರುವ ಸಿಬಿಐ, ಇದೀಗ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿಚಾರಣೆ ನಡೆಸಿದೆ. ಇದೀಗ ಸಿಸೋಡಿಯಾ ರೀತಿ ಕೇಜ್ರಿವಾಲ್ ಕೂಡ ಬಂಧನವಾಗಲಿದ್ದಾರೆ  ಅನ್ನೋ ಮಾತುಗಳು ಕೇಳಿಬರುತ್ತಿದೆ. ಇತ್ತ ತೀವ್ರ ಪ್ರತಿಭಟನೆ ನಡೆಸುತ್ತಿದ್ದ ಆಮ್ ಆದ್ಮಿ ಪಾರ್ಟಿ ದಿಢೀರ್ ತುರ್ತು ಸಭೆ ನಡೆಸಿದೆ.   

ನವದೆಹಲಿ(ಏ.16): ದೆಹಲಿ ಸರ್ಕಾರದ ಅಬಕಾರಿ ನೀತಿ ಆಮ್ ಆದ್ಮಿ ಸರ್ಕಾರಕ್ಕೆ ಸಂಕಷ್ಟದ ಸರಮಾಲೆಯನ್ನೇ ತಂದಿಟ್ಟಿದೆ. ಮನೀಶ್ ಸಿಸೋಡಿಯಾ ಈಗಾಲೇ ಜೈಲು ಸೇರಿದ್ದಾರೆ. ಇತ್ತ ಅಬಕಾರಿ ಹಗರಣದ ವಿರುದ್ಧ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿಚಾರಣೆ ನಡೆಸಿದ್ದಾರೆ. ಸಿಬಿಐ ನಡೆ ಹಿಂದೆ ಕೇಂದ್ರ ಬಿಜೆಪಿ ಸರ್ಕಾರದ ಕೈವಾಡವಿದೆ ಎಂದು ಆರೋಪಿಸಿ ಆಮ್ ಆದ್ಮಿ ಪಾರ್ಟಿ ಪ್ರತಿಭಟನೆ ನಡೆಸಿದೆ. ಆದರೆ ಕೇಜ್ರಿವಾಲ್ ವಿಚಾರಣೆ ತೀವ್ರಗೊಳ್ಳುತ್ತಿದ್ದಂತೆ ಆಮ್ ಆದ್ಮಿ ಪಾರ್ಟಿ ಭೀತಿ ಹೆಚ್ಚಾಗಿದೆ. ಮನೀಶ್ ಸಿಸೋಡಿಯಾ ರೀತಿ, ಕೇಜ್ರಿವಾಲ್ ಕೂಡ ಬಂಧನ ಸಾಧ್ಯತೆ ಇದೆ ಅನ್ನೋ ಮಾತುಗಳು ಹರಿದಾಡತೊಡಗಿದೆ.ಇದರ ಬೆನ್ನಲ್ಲೇ ಆಮ್ ಆದ್ಮಿ ಪಾರ್ಟಿ ನಾಯಕರು ದಿಢೀರ್ ತುರ್ತು ಸಭೆ ನಡೆಸಿದ್ದಾರೆ. 

ದೆಹಲಿಯ ಆಪ್ ಕಚೇರಿಯಲ್ಲಿ ಸಂಜೆ 5 ಗಂಟೆಗೆ ತುರ್ತು ಸಭೆ ನಡೆಸಲಾಗಿದೆ. ಸಿಬಿಐ ವಿಚಾರಣೆಯಿಂದ ಆಪ್ ಕೆರಳಿದೆ. ಇತ್ತ ಕೇಜ್ರಿವಾಲ್ ಬಂಧನ ಸಾಧ್ಯತೆ ಮಾತುಗಳು ಕೇಳಿಬರುತ್ತಿರುವ ಹಿನ್ನಲೆಯಲ್ಲಿ ಈ ಸಭೆ ನಡೆಸಲಾಗಿದೆ.ಮುಂದಿನ ಕಾರ್ಯತಂತ್ರಗಳು, ಪ್ರತಿಭಟನೆ ಸ್ವರೂಪ ಸೇರಿದಂತೆ ಹಲವು ವಿಚಾರಗಳು ಚರ್ಚೆ ನಡೆಸಿದ್ದಾರೆ 

 

ಪ್ರಧಾನಿ ಸಾರ್, ನಿಮಗೆ ಬೇಕಾದುದನ್ನು ಮಾಡಿ, ಆಪ್‌ ಹೋರಾಟ ನಿಲ್ಸಲ್ಲ; ಸಿಬಿಐ ತನ್ನನ್ನು ಅರೆಸ್ಟ್‌ ಮಾಡಬಹುದು: ಕೇಜ್ರಿವಾಲ್‌

ಸಿಸೋಡಿಯಾ ಬಂಧನ ಬಳಿಕ ಸಿಬಿಐ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಇದರ ಮುಂದುವರಿದ ಭಾಗವಾಗಿ ಕೇಜ್ರಿವಾಲ್ ವಿಚಾರಣೆ ನಡೆಸಲಾಗಿದೆ. ದೆಹಲಿ ಮದ್ಯ ನೀತಿ ಅಂಗೀಕಾರಕ್ಕೂ ಮುನ್ನ ನೀತಿಗೆ ಸಂಬಂಧಿಸಿದಂತೆ ತಜ್ಞರ ಸಮಿತಿ ವರದಿ, ಸಾರ್ವಜನಿಕರು ಮತ್ತು ಕಾನೂನು ತಜ್ಞರ ಅಭಿಪ್ರಾಯಗಳನ್ನು ಒಳಗೊಂಡ ದಾಖಲೆಗಳನ್ನು ದೆಹಲಿ ಸಚಿವ ಸಂಪುಟದ ಮುಂದೆ ಮಂಡಿಸಲಾಗಿತ್ತು. ಆದರೆ ಇದೀಗ ಆ ಫೈಲ್‌ ಕಾಣೆಯಾಗಿದೆ. ಈ ಕುರಿತು ಕೇಜ್ರಿವಾಲ್ ವಿಚಾರಣೆ ನಡೆಸಲಾಗಿದೆ.

ಇದರ ಜೊತೆಗೆ ಕೆಲ ಉದ್ಯಮಿಗಳಿಗೆ ಲಾಭ ಮಾಡಿಕೊಡುವಂತೆ ಮತ್ತು ದಕ್ಷಿಣದ ಲಾಬಿಗೆ ಮಣಿದು ನೀತಿ ರೂಪಿಸಲಾಗಿತ್ತು ಎಂಬ ಕೆಲ ಆರೋಪಿಗಳು ನೀಡಿರುವ ಹೇಳಿಕೆ ಬಗ್ಗೆ, ಮದ್ಯ ನೀತಿ ರಚನೆಯಲ್ಲಿ ನಿಮ್ಮ ಪಾತ್ರವೇನು? ಕೆಲ ಉದ್ಯಮಿಗಳು ಮತ್ತು ದಕ್ಷಿಣದ ಲಾಬಿ ಬೀರಿರುವ ಪ್ರಭಾವದ ಬಗ್ಗೆ ನಿಮಗೆ ಏನು ಮಾಹಿತಿ ಇತ್ತು? ನೀತಿಗೆ ಅಂತಿಮ ಅನುಮೋದನೆ ನೀಡುವ ಮುನ್ನ ಆ ಪ್ರಕ್ರಿಯೆಯಲ್ಲಿ ನೀವು ಭಾಗಿಯಾಗಿದ್ದೀರಾ? ಎಂಬಿತ್ಯಾದಿ ಪ್ರಶ್ನೆಗಳಿಗೆ ಕೇಜ್ರಿವಾಲ್‌ರಿಂದ ಉತ್ತರ ಪಡೆಯುವ ಯತ್ನವನ್ನು ಅಧಿಕಾರಿಗಳು ಮಾಡಿದ್ದಾರೆ.

ಅರವಿಂದ್ ಕೇಜ್ರಿವಾಲ್‌ಗೆ ಮತ್ತೊಂದು ಹಿನ್ನಡೆ, ಆಪ್‌ನ 6 ಕಾರ್ಪೋರೇಟರ್ ಬಿಜೆಪಿ ಸೇರ್ಪಡೆ!

ಅಬಕಾರಿ ಪ್ರಕರಣ ಸಂಬಂಧ ನನ್ನ ಮತ್ತು ಸಿಸೋಡಿಯಾ ಹೆಸರು ಪ್ರಸ್ತಾಪಿಸುವಂತೆ ಜನರ ಮೇಲೆ ಒತ್ತಡ ಹೇರಲಾಗುತ್ತಿದೆ. ನಮಗೆ ನಂಟೇ ಇಲ್ಲದೇ, ಪ್ರಕರಣದ ಓರ್ವ ಆರೋಪಿ ಚಂದನ್‌ ರೆಡ್ಡಿ ಅವರ ವೈದ್ಯಕೀಯ ವರದಿಯಲ್ಲಿ ತನಿಖೆ ವೇಳೆ ಅವರ ಮೇಲೆ ಹಲ್ಲೆ ನಡೆಸಿರುವುದನ್ನು ಪ್ರಸ್ತಾಪಿಸಲಾಗಿದೆ. ಆರೋಪಿತರಿಗೆ ತನಿಖಾಧಿಕಾರಿಗಳು ದೈಹಿಕ, ಮಾನಸಿಕ ಹಿಂಸೆ ನೀಡುವ ಮೂಲಕ ಸುಳ್ಳು ಹೇಳಿಕೆ ನೀಡುವಂತೆ ಮಾಡಲಾಗುತ್ತಿದೆ. ಇನ್ನೊಬ್ಬ ವ್ಯಕ್ತಿಗೆ ನಾಳೆ ನಿಮ್ಮ ಮಗಳು ಹೇಗೆ ಕಾಲೇಜಿಗೆ ಹೋಗುತ್ತಾಳೆ ಎಂದು ಬೆದರಿಕೆ ಹಾಕಿದ್ದಾರೆ. ಮತ್ತೊಬ್ಬರ ವ್ಯಕ್ತಿಯ ಪತ್ನಿ ಮತ್ತು ತಂದೆಯನ್ನು ಪಕ್ಕದ ಕೊಠಡಿಯಲ್ಲಿ ಕೂರಿಸಿ ಜೈಲಿಗೆ ಹಾಕುವ ಬೆದರಿಕೆ ಹಾಕಲಾಗಿದೆ’ಎಂದು ಕೇಜ್ರಿವಾಲ್‌ ಸಮನ್ಸ್ ನೀಡಿದ ಬೆನ್ನಲ್ಲೇ ಆರೋಪ ಮಾಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Morphing Wing: ಹಾರಾಡುವಾಗಲೇ ಕ್ಷಣ ಮಾತ್ರದಲ್ಲಿ ಬದಲಾಗುತ್ತೆ ಫೈಟರ್‌ ಜೆಟ್‌ ಶೇಪ್‌, ಹೊಸ ಟೆಕ್ನಾಲಜಿ ಪರೀಕ್ಷಿಸಿದ ಡಿಆರ್‌ಡಿಓ
ವೈರಲ್ ಮೀಮ್ಸ್ ಆಗಿದ್ದ ಯುವಕನ ಫೋಟೋದ ಹಿಂದಿದೆ ನೋವಿನ ಕತೆ: 38 ವರ್ಷ ಬರೀ ದ್ರವಾಹಾರದಲ್ಲೇ ಬದುಕಿದ್ದ ಪಂಚಾಲ್