
ನವದೆಹಲಿ(ಜೂ.05): ಮಾರಕ ಕೊರೋನಾ ವೈರಸ್ ಉಲ್ಬಣದಿಂದಾಗಿ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಹೇರಲಾಗಿದ್ದ ಲಾಕ್‌ಡೌನ್ ಸೋಮವಾರಕ್ಕೆ ಅಂತ್ಯವಾಗಲಿದೆ. ಸೋಮವಾರದಿಂದ ಅನ್ ಲಾಕ್ ಪ್ರಕ್ರಿಯೆಗೆ ಸಿಎಂ ಕೇಜ್ರಿವಾಲ್ ಸರ್ಕಾರ ಚಾಲನೆ ನೀಡಿದ್ದಾರೆ.
ಸರಿ ಬೆಸ ಆಧಾರದಲ್ಲಿ ಮಾರುಕಟ್ಟೆ, ಮಾಲ್ ಗಳಿಗೆ ಅವಕಾಶ:
ಅನ್‌ಲಾಕ್ ಪ್ರಕ್ರಿಯೆ ಬಗ್ಗೆ ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಜ್ರೀವಾಲ್ ದೆಹಲಿಯಲ್ಲಿ 'ಅನ್ ಲಾಕ್' ಯೋಜನೆಗೆ ಪ್ರೋತ್ಸಾಹ ನೀಡುವ ಭಾಗವಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ನಗರದ ಮಾರುಕಟ್ಟೆಗಳನ್ನು ಸಮ-ಬೆಸ ನಿಯಮದ ಆಧಾರದಲ್ಲಿ ತೆರೆಯಲು ಅನುಮತಿ ನೀಡಲಾಗುವುದು. ರಾಷ್ಟ್ರ ರಾಜಧಾನಿಯಲ್ಲಿ ವಾಯುಮಾಲಿನ್ಯವನ್ನು ನಿವಾರಿಸಲು ಸಮ-ಬೆಸ ನಿಯಮವನ್ನು ಜಾರಿಗೊಳಿಸಲಾಗಿತ್ತು. ಇದೀಗ ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲೂ ಇದೇ ಸಮಬೆಸ ಆಧಾರದ ಮೇಲೆ ಮಾರುಕಟ್ಟೆ ಮತ್ತು ಅಂಗಡಿಗಳನ್ನು ಪ್ರತಿದಿನ ತೆರೆಯಲು ಅನುಮತಿಸಲಾಗುತ್ತದೆ. ಮಾಲ್ ಗಳು ಹಾಗೂ ಶಾಪಿಂಗ್ ಸೆಂಟರ್ ಗಳನ್ನೂ ಕೂಡ ಸಮ-ಬೆಸ ಆಧಾರದಲ್ಲಿ ತೆರೆಯಲ್ಪಡುತ್ತವೆ ಎಂದಿದ್ದಾರೆ.
ಈ ಸಮ-ಬೆಸ ಮಾದರಿಯಲ್ಲಿ ಬೆಳಗ್ಗೆ 10 ರಿಂದ ರಾತ್ರಿ 8 ಗಂಟೆಯವರೆಗೆ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಆದರೆ ಸಾಮಾಜಿಕ ಅಂತರ ಪಾಲನೆ ಕಡ್ಡಾಯವಾಗಿರಲಿದೆ ಎಂದು ಹೇಳಿದ್ದಾರೆ. ಸಂಭಾವ್ಯ ಮೂರನೇ ಅಲೆ ವೇಳೆ ದೆಹಲಿಯಲ್ಲಿ ದೈನಂದಿನ ಸೋಂಕಿತರ ಸಂಖ್ಯೆ 37 ಸಾವಿರಕ್ಕೆ ದಾಖಲಾಗುವ ಕುರಿತು ತಜ್ಞರು ಎಚ್ಚರಿಕೆ ನೀಡಿರುವ ಹಿನ್ನಲೆಯಲ್ಲಿ ಸರ್ಕಾರ ಕೋವಿಡ್ ನಿಯಮಗಳನ್ನು ಮುಂದುವರೆಸಲು ನಿರ್ಧರಿಸಿದೆ.
ಮೆಟ್ರೋದಲ್ಲಿ ಶೇ.50ರಷ್ಟು ಪ್ರಯಾಣಿಕರು
ಇನ್ನು ಸರ್ಕಾರಿ ಸಾರಿಗೆ ಸೇವೆಗಳಿಗೂ ನಿಯಮ ಜಾರಿ ಮಾಡಲಾಗಿದ್ದು, ಪ್ರಮುಖವಾಗಿ ಮೆಟ್ರೋ ರೈಲಿನಲ್ಲಿ ಶೇ.50 ಪ್ರಯಾಣಿಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಕೇವಲ 50 ಪ್ರತಿಶತದಷ್ಟು ಆಸನ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಅಂತೆಯೇ ಖಾಸಗಿ ಕಚೇರಿಗಳನ್ನು ಶೇಕಡಾ 50 ರಷ್ಟು ಉದ್ಯೋಗಗಳ ಮಿತಿಯೊಂದಿಗೆ ತೆರೆಯಬಹುದು ಎಂದಿದ್ದಾರೆ.
ಎಲ್ಎನ್ ಜೆಪಿ ಆಸ್ಪತ್ರೆಯಲ್ಲಿ ಜೆನೋಮ್ ಸೀಕ್ವೆನ್ಸ್ ಲ್ಯಾಬ್\
ಇದೇ ವೇಳೆ ಕೊರೋನಾ ವೈರಸ್ ರೂಪಂತರವನ್ನು ಗಮನದಲ್ಲಿಟ್ಟುಕೊಂಡು ದೆಹಲಿಯ ಎಲ್ಎನ್ ಜೆಪಿ ಆಸ್ಪತ್ರೆಯಲ್ಲಿ ಜೆನೋಮ್ ಸೀಕ್ವೆನ್ಸ್ ಲ್ಯಾಬ್ ತೆರೆಯಲು ನಿರ್ಧರಿಸಲಾಗಿದೆ. ಅಂತೆಯೇ ದೆಹಲಿಯಲ್ಲಿ ಕೋವಿಡ್ ಸೋಂಕು ಹೆಚ್ಚಳಕ್ಕೆ ಕಾರಣವಾದ ಅಂಶಗಳ ಅಧ್ಯಯನಕ್ಕೆ ಈ ಲ್ಯಾಬ್ ನೆರವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ