
ನವದೆಹಲಿ (ಡಿ.17) ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ವ್ಯಾಪ್ತಿಯ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ನಾಳೆ (ಡಿ.18) ರಜೆ ಘೋಷಿಸಲಾಗಿದೆ. ದೆಹಲಿಯಲ್ಲಿ ವಾಯು ಮಾಲಿನ್ಯ ತೀವ್ರಗೊಂಡಿರುವ ಪರಿಣಾಮ ರಜೆ ನೀಡಲಾಗಿದೆ. ನರ್ಸರಿಯಿಂದ 5ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ರಜೆ ನೀಡಲಾಗಿದೆ. ಇನ್ನು ಇತರ ವಿದ್ಯಾರ್ಥಿಗಳಿಗೂ ಮಾರ್ಗಸೂಚಿ ಹೊರಡಿಸಲಾಗಿದೆ. ದೆಹಲಿಯಲ್ಲಿ ವಾಯುಮಾಲಿನ್ಯದ ಪರಿಣಾಮ GRAP 4 ಹಂತದ ನಿರ್ಬಂಧಗಳು ಜಾರಿಯಾಗಿದೆ. ಹೀಗಾಗಿ ಕಟ್ಟು ನಿಟ್ಟಿನ ಕ್ರಮಗಳು ಜಾರಿಯಾಗಿದೆ.
ನರ್ಸರಿಯಿಂದ 5ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ನಾಳೆ ರಜೆ ನೀಡಲಾಗಿದೆ. ಇದೇ ವೇಳೆ ಸರ್ಕಾರ ಮುಂದಿನ ನೋಟಿಸ್ ವರೆಗೆ ರಜೆ ಎಂದಿದೆ. ಮಾಲಿನ್ಯದ ಪ್ರಮಾಣ ಇಳಿಕೆಯತ್ತ ಸಾಗಿದರೆ ಶೀಘ್ರದಲ್ಲೇ ಶಾಲೆ ಓಪನ್ ಆಗಲಿದೆ. ಇನ್ನು 6ನೇ ತರಗತಿಯಿಂದ 11ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಹೈಬ್ರಿಡ್ ಮಾಡೆಲ್ ತರಗತಿ ನಡೆಸಲು ಸೂಚಿಸಲಾಗಿದೆ. ವಾರದಲ್ಲಿ ಇಂತಿಷ್ಟು ದಿನ ಆನ್‌ಲೈನ್ ಮೂಲಕ ಹಾಗೂ ಇಂತಿಷ್ಟು ದಿನ ಶಾಲಾ ತರಗತಿ ಮೂಲಕ ಬೋಧನೆಗೆ ಸೂಚಿಸಲಾಗಿದೆ. ಇನ್ನು 10ನೇ ತರಗತಿ ಹಾಗೂ 12ನೇ ತರಗತಿ ವಿದ್ಯಾರ್ಥಿಗಳು ತರಗತಿಗೆ ಹಾಜರಾಗಬೇಕು. ಬೋರ್ಡ್ ಪರೀಕ್ಷೆ ಕಾರಣ ಈ ವಿದ್ಯಾರ್ಥಿಗಳಿಗೆ ತರಗತಿಗೆ ಹಾಜರಾಗಲು ಸೂಚಿಸಲಾಗಿದೆ.
ವಿದ್ಯಾರ್ಥಿಗಳ ಆರೋಗ್ಯಕ್ಕೆ ಹೆಚ್ಚಿನ ಆಧ್ಯತೆ ನೀಡಲು ಸೂಚಿಸಲಾಗಿದೆ. ಯಾವುದೇ ವಿದ್ಯಾರ್ಥಿಯಲ್ಲಿ ಅಸ್ವಸ್ಥತೆ, ಉಸಿರಾಟದ ಸಮಸ್ಯೆ ಕಂಡು ಬಂದರೆ ಗಂಭೀರವಾಗಿ ಪರಿಗಣಿಸಬೇಕು ಎಂದು ಸರ್ಕಾರ ಸೂಚಿಸಿದೆ. ಇದೇ ವೇಳೆ ಪೋಷಕರಿಗೂ ಸೂಚನೆ ನೀಡಲಾಗಿದೆ. ಮಕ್ಕಳ ಆರೋಗ್ಯದ ಕುರಿತು ಗಮನಹರಿಸುವಂತೆ ಸೂಚಿಸಲಾಗಿದೆ.
ಖಾಸಗಿ ಹಾಗೂ ಸರ್ಕಾರಿ ಉದ್ಯೋಗಿಗಳ ಪೈಕಿ ಶೇಕಡಾ 50ರಷ್ಟು ಮಂದಿಗೆ ಕಡ್ಡಾಯವಾಗಿ ವರ್ಕ್ ಫ್ರಮ್ ಹೋಮ್‌ಗೆ ಸೂಚನೆ ನೀಡಲಾಗಿದೆ. ಖಾಸಗಿ ಹಾಗೂ ಸರ್ಕಾರಿ ಕಂಪನಿಗಳು ಆದೇಶ ಕಡ್ಡಾಯವಾಗಿ ಪಾಲಿಸಲು ದೆಹಲಿ ಸರ್ಕಾರ ಸೂಚಿಸಿದೆ. ನಾಳೆಯಿಂದ (ಡಿ.18) ಈ ನಿಯಮ ಜಾರಿಗೆ ಬರುತ್ತಿದೆ. ನಿಯಮ ಉಲ್ಲಂಘಿಸಿದೆ ದಂಡ ವಿಧಿಸುವ ಎಚ್ಚರಿಕೆ ನೀಡಲಾಗಿದೆ.
ದೆಹಲಿಯಲ್ಲಿ ನಾಳೆಯಿಂದ (ಡಿ.18) ವಾಹನಗಳಿಗೆ ಪೆಟ್ರೋಲ್, ಡೀಸೆಲ್ ತುಂಬಲು ಪೆಟ್ರೋಲ್ ಬಂಕ್‌ಗಳಲ್ಲಿ ವಾಹನದ ಪಿಯುಸಿ (ಪೊಲ್ಯೂಶನ್ ಅಂಡರ್ ಕಂಟ್ರೋಲ್ ಸರ್ಟಿಫಿಕೇಟ್) ಪ್ರಮಾಣಪತ್ರ ತೋರಿಸಬೇಕು. ಅಧಿಕೃತ ಹಾಗೂ ನಿಗದಿತ ಪ್ರಮಾಣದಲ್ಲಿ ಪಿಯುಸಿ ಅಂಶಗಳು ಇರದಿದ್ದರೆ ಇಂಧನ ಸಿಗುವುದಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ