
ದೆಹಲಿ(ಏ.06): ಮಹಾಮಾರಿ ಕೊರೋನಾ ಆರ್ಭಟಕ್ಕೆ ಬ್ರೇಕ್ ಹಾಕಲು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇಂದಿನಿಂದ ಏಪ್ರಿಲ್ 30ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಿಲಾಗಿದೆ. ಸರ್ಕಾರದ ಆದೇಶದ ಪ್ರಕಾರ, ಇಂದಿನಿಂದ ರಾತ್ರಿ 10 ಗಂಟೆಯಿಂದ ಮುಂಜಾನೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ಕೊರೋನಾ ನಿಯಂತ್ರಣಕ್ಕಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಈ ಕ್ರಮ ಕೈಗೊಂಡಿದ್ದಾರೆ.
ಕಳೆದ ಎರಡು ವಾರಗಳಲ್ಲಿ ದೆಹಲಿಯಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿತ್ತು. ಸೋಮವಾರ ದೆಹಲಿಯಲ್ಲಿ 3,548 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 15 ಮಂದಿ ಕೊರೋನಾಗೆ ಬಲಿಯಾಗಿದ್ದರು.
ಕರ್ನಾಟಕದ ಕೊರೋನಾ ಪರಿಸ್ಥಿತಿ ಎಲ್ಲಿಗೆ ಬಂದಿದೆ?
ಸರ್ಕಾರದ ಹೊಸ ನಿಯಮಗಳ ಪ್ರಕಾರ, ಖಾಸಗಿ ವೈದ್ಯರು, ನರ್ಸ್ಗಗಳಿಗೆ ರಾತ್ರಿ ಕರ್ಫ್ಯೂನಿಂದ ವಿನಾಯಿತಿ ನೀಡಲಾಗಿದೆ. ಗುರುತಿನ ಚೀಟಿ ತೋರಿಸಬೇಕು ಎಂದು ತಿಳಿಸಲಾಗಿದೆ.
ವಿಮಾನ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳು ಮತ್ತು ಬಸ್ ನಿಲ್ದಾಣಗಳಿಗೆ ಹೋಗುವ ಪ್ರಯಾಣಿಕರಿಗೂ ಈ ನೈಟ್ ಕರ್ಫ್ಯೂ ಅನ್ವಯವಾಗುವುದಿಲ್ಲ. ಆದರೆ ಸಂಬಂಧಿತ ಮಾನ್ಯತೆ ಹೊಂದಿರುವ ಟಿಕೆಟ್ ತೋರಿಸಬೇಕಾಗುತ್ತದೆ. ಗರ್ಭಿಣಿಯರು ಹಾಗೂ ರೋಗಿಗಳಿಗೂ ಸಹ ವಿನಾಯಿತಿ ನೀಡಲಾಗಿದೆ.ಸಾರಿಗೆ ಸಂಚಾರಕ್ಕೆ ಯಾವುದೇ ನಿರ್ಬಂಧ ಹೇರಿಲ್ಲ. ಬಸ್ಗಳು, ಮೆಟ್ರೋ, ಆಟೋ ಹಾಗೂ ಟ್ಯಾಕ್ಸಿಗಳನ್ನು ಓಡಾಡಿಸಬಹುದು ಎನ್ನಲಾಗಿದೆ.
ಈ ಎಲ್ಲ ನೀತಿಗಳನ್ನು ಕಂಡ ಸೋಶಿಯಲ್ ಮೀಡಿಯಾ ಮಾತ್ರ ದೆಹಲಿ ನೈಟ್ ನಿಷೇಧಾಜ್ಞೆಯನ್ನು ತನ್ನದೇ ದಾಟಿಯಲ್ಲಿ ಟೀಕಿಸಿದೆ. ಮೆಮೆಗಳು, ಟ್ರೋಲ್ ಗಳನ್ನು ಕೇಳುವುದೇ ಬೇಡ. ಬಾಲಿವುಡ್ ಸಿನಿಮಾ ದೃಶ್ಯಗಳನ್ನು ಬಳಸಿಕೊಂಡು ಮಾಡಿರುವ ಒಂದಿಷ್ಟು ಟ್ರೋಲ್ ಗಳನ್ನು, ರಿಯಾಕ್ಷನ್ ಗಳನ್ನು ನೋಡಿಕೊಂಡು ಬನ್ನಿ...
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ