
ನವದೆಹಲಿ (ಏ.1): ಕರ್ನಾಟಕ ಸೇರಿದಂತೆ ದೇಶಾದ್ಯಂತ ಕೋರ್ಟ್‌ಗಳಿಗೆ 1100ಕ್ಕೂ ಹೆಚ್ಚು ಹುಸಿ ಬಾಂಬ್ ಸಂದೇಶ ರವಾನಿಸಿದ್ದ ಪ್ರಕರಣದಲ್ಲಿ ಇತ್ತೀಚೆಗೆ ಬಂಧಿತನಾಗ ಮೈಸೂರು ವಾಸಿ ಶ್ರೀನಿವಾಸ್ ಲೂಯಿಸ್, ತಮ್ಮ ಕುಟುಂಬಕ್ಕೆ ನ್ಯಾಯ ಒದಗಿಸದ ದೇಶದ ನ್ಯಾಯಾಂಗ ವ್ಯವಸ್ಥೆ ಬಗ್ಗೆ ಆಕ್ರೋಶ ಹೊಂದಿದ್ದ. ಇದೇ ಕಾರಣಕ್ಕೆ ಕೋರ್ಟ್‌ಗಳಿಗೇ ಬೆದರಿಕೆ ರವಾನಿಸುತ್ತಿದ್ದ ಎಂಬ ಅಚ್ಚರಿಯ ವಿಷಯ ಬೆಳಕಿಗೆ ಬಂಧಿದೆ.
ಇತ್ತೀಚೆಗೆ ಶ್ರೀನಿವಾಸ್‌ನನ್ನು ದೆಹಲಿ ಪೊಲೀಸರು ಬಂಧಿಸಿ ವಿಚಾರಣೆಗೆ ಕರೆದೊಯ್ದಿದ್ದರು. ಈ ವೇಳೆ ಆತ, ‘ತನ್ನ ತಂದೆಗೆ ಅವರ ಕುಟುಂಬದ ಕಡೆಯಿಂದ ಸರಿಯಾಗಿ ಆಸ್ತಿ ಬಂದಿರಲಿಲ್ಲ. ಈ ಬಗ್ಗೆ ನ್ಯಾಯಾಂಗದ ಮೆಟ್ಟಿಲೇರಿದರೂ ಅಲ್ಲೂ ನ್ಯಾಯ ಸಿಕ್ಕಿರಲಿಲ್ಲ. ಹೀಗಾಗಿ ಆಕ್ರೋಶಗೊಂಡು ಹುಸಿ ಬಾಂಬ್ ಸಂದೇಶ ರವಾನಿಸುತ್ತಿದ್ದೆ’ ಎಂದು ಬಹಿರಂಗಪಡಿಸಿದ್ದಾನೆ.
ಸಹಾಯಕ ಪ್ರಾಧ್ಯಾಪಕನಾಗಿ ನಿವೃತ್ತನಾಗಿರುವ ಶ್ರೀನಿವಾಸ್ ತಂತ್ರಜ್ಞಾನ ನೈಪುಣ್ಯತೆ ಹೊಂದಿದ್ದ. ಇದನ್ನೇ ದುರ್ಬಳಕೆ ಮಾಡಿಕೊಂಡು ಮೊಬೈಲ್ ಮೂಲಕವೇ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ದೇಶದ ಹಲವು ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಹಾಕುತ್ತಿದ್ದ. ಕೂಡಲೇ ತನ್ನ ಗುರುತು, ವಿಳಾಸ ಗೊತ್ತಾಗದಂತೆ ಐಪಿ ಅಡ್ರೆಸ್ ಬದಲಿಸಿಕೊಳ್ಳುತ್ತಿದ್ದ. ಈ ಮೂಲಕ ತನಿಖೆಗಿಳಿದ ಪೊಲೀಸರ ದಾರಿ ತಪ್ಪಿಸುತ್ತಿದ್ದ. ಭಾರತದ ಹೊರಗೂ ತನ್ನೀ ದುಷ್ಕೃತ್ಯ ವಿಸ್ತರಿಸಿ, ಪಾಕಿಸ್ತಾನದ ಕೆಲ ನಗರಗಳ ಸಂಸ್ಥೆಗಳಿಗೂ ಇಂತಹ ಸಂದೇಶ ಕಳಿಸಿದ್ದ ಎಂದು ತಿಳಿದುಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ