
ನವದೆಹಲಿ[ಜ.09]: ಪ್ರತಿಷ್ಠಿತ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲೆ ಕಳೆದ ಭಾನುವಾರ ಮುಸುಕುಧಾರಿಗಳಿಂದ ನಡೆದ ದಾಳಿ ಕುರಿತಂತೆ ಪೊಲೀಸರಿಗೆ ಮಹತ್ವದ ಸುಳಿವು ಲಭ್ಯವಾಗಿದೆ. ಅವರು ಈ ಪ್ರಕರಣವನ್ನು ಭೇದಿಸುವ ಹಂತದಲ್ಲಿದ್ದಾರೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.
ನಟಿ ದೀಪಿಕಾ ಪಡುಕೋಣೆಗೆ ಆಲ್ ದ ಬೆಸ್ಟ್: ಪ್ರತಾಪ್ ಸಿಂಹ
ಈ ನಡುವೆ, ಜೆಎನ್‌ಯು ಕುಲಪತಿ ಎಂ. ಜಗದೀಶ್ ಕುಮಾರ್ ಅವರು ಬುಧವಾರ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯದ ಅಧಿಕಾರಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ಭೇಟಿ ವೇಳೆ, ವಿಶ್ವವಿದ್ಯಾಲಯವನ್ನು ತಾತ್ಕಾಲಿಕವಾಗಿ ಮುಚ್ಚುವ ಬಗ್ಗೆ ಯಾವುದೇ ಸಲಹೆ ಕೊಟ್ಟಿಲ್ಲ ಎಂದು ತಿಳಿಸಿದ್ದಾರೆ. ವಿ.ವಿ.ಯನ್ನು ಸಹಜಸ್ಥಿತಿಗೆ ತರಲು ಪ್ರಯತ್ನ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಏತನ್ಮಧ್ಯೆ, ಜಗದೀಶ್ ಕುಮಾರ್ ಅವರಿಂದ ವಿವಿ ಮುಚ್ಚುವ ಕುರಿತು ಯಾವುದೇ ಸಲಹೆ ಬಂದಿಲ್ಲ ಎಂದು ಅಧಿಕಾರಿಗಳು ಕೂಡ ಹೇಳಿದ್ದಾರೆ.
JNU ಮೇಲೆ ದಾಳಿ: ವಿದ್ಯಾರ್ಥಿಗಳ ಮೇಲೆ ಬಿಜೆಪಿ ಬೆಂಬಲಿತ ಗೂಂಡಾಗಳಿಂದ ಹಲ್ಲೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ