
ನವದೆಹಲಿ(ಮೇ.27): ದೇಶಾದ್ಯಂತ ಕೊರೋನಾ ಸೋಂಕು ವ್ಯಾಪಕವಾಗಿ ಹಬ್ಬಲು ಕಾರಣವಾಗಿದೆ ಎನ್ನಲಾದ ದಿಲ್ಲಿಯ ನಿಜಾಮುದ್ದೀನ್ ಮರ್ಕಜ್ ಮಸೀದಿಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವಿದೇಶಗಳ 83 ತಬ್ಲೀಘಿಗಳ ವಿರುದ್ಧ ಇಲ್ಲಿನ ಪೊಲೀಸರು ಕೋರ್ಟ್‌ಗೆ ದೋಷಾರೋಪ ಪಟ್ಟಿಸಲ್ಲಿಸಿದ್ದಾರೆ.
ತಬ್ಲೀಘಿಗಳ ಕ್ವಾರಂಟೈನ್: ಡೆಲ್ಲಿ ಸರ್ಕಾರ ಮತ್ತು ಕೇಂದ್ರದ ನಡುವೆ ತಿಕ್ಕಾಟ
ಪ್ರವಾಸದ ವೀಸಾದಡಿ ಭಾರತಕ್ಕೆ ಆಗಮಿಸಿದ ಇವರು ಅಕ್ರಮವಾಗಿ ಜಮಾತ್ ಕಾರ್ಯಕ್ರಮದಲ್ಲಿ ಭಾಗಿಯಾಗುವ ಮೂಲಕ ಕೊರೋನಾ ತಡೆಗೆ ದೇಶಾದ್ಯಂತ ಹೇರಲಾಗಿದ್ದ ಲಾಕ್‌ಡೌನ್ ನಿಯಮಾವಳಿ, ಸರ್ಕಾರದ ಮಾರ್ಗಸೂಚಿಗಳು, ವೀಸಾ ಷರತ್ತುಗಳ ಉಲ್ಲಂಘನೆ ಹಾಗೂ ಅಕ್ರಮ ಮಿಷನರಿ ಚಟವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂದು chargesheetನಲ್ಲಿ ಉಲ್ಲೇಖಿಸಲಾಗಿದೆ.
ನೆರೆಯ ಆಪ್ಘಾನಿಸ್ತಾನ ಸೇರಿದಂತೆ ಒಟ್ಟು 20 ರಾಷ್ಟ್ರಗಳ 82 ಪ್ರಜೆಗಳ ವಿರುದ್ಧ 20 chargesheetಗಳನ್ನು ಸಲ್ಲಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ