
ಚೆನ್ನೈ (ಫೆ.26): ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಮೂಲಕ ಕೇಂದ್ರ ಸರ್ಕಾರ ಹಿಂದಿ ಹೇರುತ್ತಿದೆ ಎಂದು ಆರೋಪ ಮಾಡಿದ ಬೆನ್ನಲ್ಲೇ ಲೋಕಸಭಾ ಕ್ಷೇತ್ರ ಮರುವಿಂಗಡಣೆ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಮಾ.5 ರಂದು ಸರ್ವಪಕ್ಷ ಸಭೆ ಕರೆದಿದ್ದಾರೆ. ಕ್ಷೇತ್ರ ಪುನರ್ವಿಂಗಡಣೆಯ ಪರಿಣಾಮಗಳ ಕುರಿತು ಚರ್ಚಿಸಲು ಚುನಾವಣಾ ಆಯೋಗದಲ್ಲಿ ನೋಂದಾಯಿಸಲಾದ 40 ರಾಜಕೀಯ ಪಕ್ಷಗಳನ್ನು ಸಭೆಗೆ ಆಹ್ವಾನಿಸಲಾಗಿದೆ. ಕ್ಷೇತ್ರ ಮರುವಿಂಗಡಣೆಯು 'ತಮಿಳುನಾಡಿನ ಮೇಲೆ ನೇತಾಡುವ ಕತ್ತಿಯಾಗಿದೆ. ಏಕೆಂದರೆ ತಮಿಳುನಾಡು ಜನಸಂಖ್ಯೆ ನಿಯಂತ್ರಣದಲ್ಲಿ ಯಶಸ್ವಿ ಆಗಿರುವ ಕಾರಣ, ಜನಸಂಖ್ಯೆ ಆಧರಿಸಿ ನಡೆಯಲಿರುವ ಕ್ಷೇತ್ರ ಮರುವಿಂಗಡಣೆಯಲ್ಲಿ 8 ಲೋಕಸಭಾ ಸೀಟು ಕಳೆದುಕೊಳ್ಳುವ ಆತಂಕವಿದೆ’ ಎಂದಿದ್ದಾರೆ.
ಅಲ್ಲದೆ, ‘ಜನಸಂಖ್ಯೆ ನಿಯಂತ್ರಿಸುವಲ್ಲಿ ಯಶ ಕಂಡಿದ್ದಕ್ಕೆ ಪ್ರಶಂಸೆ ವ್ಯಕ್ತಪಡಿಸುವ ಬದಲು ಈ ರೀತಿ ಸೀಟು ಖೋತಾ ಸರಿಯೇ? ಇದರಿಂದ ಸದನಸಲ್ಲಿ ತಮಿಳುನಾಡಿನ ದನಿ ತಗ್ಗುತ್ತದೆ ಅಲ್ಲವೆ?’ ಎಂದು ಪ್ರಶ್ನಿಸಿದ್ದಾರೆ. ತಮಿಳುನಾಡು ಪ್ರಸಕ್ತ 39 ಲೋಕಸಭಾ ಸ್ಥಾನ ಹೊಂದಿದೆ. ಇತ್ತೀಚೆಗೆ ಸ್ಟಾಲಿನ್ ಅವರು ತಮಿಳುನಾಡಲ್ಲಿ ಜನಸಂಖ್ಯೆ ಕುಸಿತದ ವಿರುದ್ಧ ಎಚ್ಚರಿಕೆ ನೀಡಿ, 16 ಸಂಪತ್ತುಗಳ ಸಂಕೇತವಾಗಿ ಎಲ್ಲರೂ 16 ಮಕ್ಕಳನ್ನು ಹೆರಬೇಕು ಎಂದು ಕರೆ ನೀಡಿದ್ದರು.
ಕೇಂದ್ರದಿಂದ ಭಾಷಾ ಯುದ್ಧದ ಬೀಜ ಬಿತ್ತನೆ: ಸ್ಟಾಲಿನ್ ಕಿಡಿ
ಚೆನ್ನೈ: ಕೇಂದ್ರ ಸರ್ಕಾರವು ರಾಜ್ಯದ ಮೇಲೆ ಹಿಂದಿಯನ್ನು ಹೇರುವ ಮೂಲಕ ಭಾಷಾ ಯುದ್ಧದ ಬೀಜಗಳನ್ನು ಬಿತ್ತುತ್ತಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಆರೋಪಿಸಿದ್ದಾರೆ.‘ತಮಿಳುನಾಡು ಯಾವುದೇ ಭಾಷೆಯನ್ನು ವಿರೋಧಿಸುವುದಿಲ್ಲ. ಪರಭಾಷೆಯನ್ನು ಕಲಿಯಲು ಬಯಸುವವರಿಗೆ ಅಡ್ಡಿ ಮಾಡುವುದೂ ಇಲ್ಲ. ಆದರೆ ಮಾತೃಭಾಷೆ ತಮಿಳಿನ ಮೇಲೆ ಪ್ರಾಬಲ್ಯ ಸಾಧಿಸಲು ಮತ್ತು ನಾಶಮಾಡಲು ಬೇರೆ ಯಾವುದೇ ಭಾಷೆಗೆ ಅವಕಾಶ ನೀಡದಿರಲು ದೃಢನಿಶ್ಚಯ ಮಾಡಲಾಗಿದೆ. ಇದಕ್ಕಾಗಿಯೇ ನಾವು ದ್ವಿಭಾಷಾ ನೀತಿಯನ್ನು (ತಮಿಳು ಮತ್ತು ಇಂಗ್ಲಿಷ್) ಪಾಲಿಸುತ್ತಿದ್ದೇವೆ’ ಎಂದು ಸ್ಟಾಲಿನ್ ತಮ್ಮ ಪಕ್ಷದ ಕಾರ್ಯಕರ್ತರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಹಿಂದಿ ಹೇರಿಕೆ ವಿರುದ್ಧ ಬಿಜೆಪಿಗೆ ನಟಿ ರಂಜನಾ ರಾಜೀನಾಮೆ
ಚೆನ್ನೈ: ತಮಿಳುನಾಡಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಮೂಲಕ ಹಿಂದಿ ಹೇರಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಆರೋಪಿಸುತ್ತಿರುವ ನಡುವೆಯೇ. ತ್ರಿಭಾಷಾ ನೀತಿಯನ್ನು ಹೇರುವ ಪ್ರಯತ್ನಗಳನ್ನು ವಿರೋಧಿಸಿ ನಟಿ-ರಾಜಕಾರಣಿ ರಂಜನಾ ನಾಚಿಯಾರ್ ಮಂಗಳವಾರ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಬಿಜೆಪಿ ತ್ರಿಭಾಷಾ ಸೂತ್ರದ ಪರ ಇರುವುದು ಭ್ರಮನಿರಸನಕ್ಕೆ ಕಾರಣವಾಗಿದೆ. ದ್ರಾವಿಡ ಸಿದ್ಧಾಂತ ಹಾಗೂ ತಮಿಳುನಾಡಿನ ಬಗ್ಗೆ ಬಿಜೆಪಿ ದ್ವೇಷ ಭಾವನೆ ಹೊಂದಿದೆ’ ಎಂದು ಆರೋಪಿಸಿದ್ದಾರೆ.
ತಮಿಳುನಾಡಲ್ಲಿ ಗೆಟೌಟ್ ಸ್ಟಾಲಿನ್ Vs ಗೆಟೌಟ್ ಮೋದಿ ಅಭಿಯಾನ ನಡೆಯುತ್ತಿರೋದ್ಯಾಕೆ?
‘ರಾಷ್ಟ್ರವು ಸುರಕ್ಷಿತವಾಗಿರಬೇಕಾದರೆ, ತಮಿಳುನಾಡು ಸಮೃದ್ಧವಾಗಿರಬೇಕು ಎಂದಿರುವ ಅವರು, ‘ಪಕ್ಷದೊಳಗೆ ನನ್ನ ಬೆಳವಣಿಗೆಗೆ ಬಿಜೆಪಿ ಅನುಕೂಲಕರ ವಾತಾವರಣವನ್ನು ಒದಗಿಸಲಿಲ್ಲ’ ಎಂದು ಆರೋಪಿಸಿದ್ದಾರೆ.
ಮುಖ್ಯಮಂತ್ರಿ ಮಕ್ಕಳು ಹಿಂದಿ ಓದ್ಬಹುದು, ನಮ್ಮ ಮಕ್ಕಳಿಗೆ ಯಾಕೆ ಓದಬಾರದು? ಅಣ್ಣಾಮಲೈ ಪ್ರಶ್ನೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ