
ನವದೆಹಲಿ: ಭ್ರಷ್ಟಾಚಾರ ಆರೋಪಿ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ದಿಲ್ಲಿ ಹೈಕೋರ್ಟ್‌ನಿಂದ ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾವಣೆ ಮಾಡಿದ್ದನ್ನು ಅಲಹಾಬಾದ್ ಬಾರ್ ಕೌನ್ಸಿಲ್ ಖಂಡಿಸಿದೆ ಹಾಗೂ ಮಂಗಳವಾರದಿಂದ ಅನಿರ್ದಿಷ್ಟ ಮುಷ್ಕರ ಘೋಷಿಸಿದೆ. ಕೂಡಲೇ ವರ್ಮಾ ವಿರುದ್ಧ ಸಿಬಿಐ, ಇ.ಡಿ. ತನಿಖೆ ಆಗಬೇಕು. ಎಫ್‌ಐಆರ್ ದಾಖಲಿಸಬೇಕು ಹಾಗೂ ವಾಗ್ದಂಡನೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದೆ.
ಇದೇ ವೇಳೆ, ಅಲಹಾಬಾದ್ ಮತ್ತು ದೆಹಲಿ ಹೈಕೋರ್ಟ್‌ಗಳಲ್ಲಿ ಸೇವೆ ಸಲ್ಲಿಸಿದ್ದ ಅವಧಿಯಲ್ಲಿ ನೀಡಿದ ಎಲ್ಲಾ ತೀರ್ಪುಗಳನ್ನು ಪರಿಶೀಲಿಸುವಂತೆ ಕೂಡ ಒತ್ತಾಯಿಸಿದೆ. ನ್ಯಾಯಾಧೀಶರು ಸಂಶಯ ಮೀರಿ ಇರಬೇಕು ಎಂದಿರು ಅದು, ನ್ಯಾಯಾಧೀಶರನ್ನು ರೋಮನ್ ಆಡಳಿತಗಾರ ಜೂಲಿಯಸ್ ಸೀಸರ್ ಅವರ ಪತ್ನಿಗೆ ಹೋಲಿಸಿದೆ.
ನ್ಯಾ। ವರ್ಮಾ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಸೂಚಿಸಲು ಅರ್ಜಿ
ನವದೆಹಲಿ: ಮನೆಯಲ್ಲಿ ಕಂತೆ ಕಂತೆ ನೋಟು ಪತ್ತೆಯಾದ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ್ ನ್ಯಾಯಾಧೀಶ ಯಶವಂತ್ ವರ್ಮಾ ವಿರುದ್ಧ ಎಫ್‌ಐಆರ್ ದಾಖಲಿಸಲು ದೆಹಲಿ ಪೊಲೀಸರಿಗೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಸೋಮವಾರ ಅರ್ಜಿ ಸಲ್ಲಿಕೆಯಾಗಿದೆ.1991ರಲ್ಲಿ ಕೆ.ವೀರಸ್ವಾಮಿ ಪ್ರಕರಣದಲ್ಲಿ ಸಿಜೆಐ ಪೂರ್ವಾನುಮತಿಯಿಲ್ಲದೆ ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ ಹಾಲಿ ನ್ಯಾಯಾಧೀಶರ ವಿರುದ್ಧ ಯಾವುದೇ ಎಫ್‌ಐಆರ್ ದಾಖಲಿಸುವಂತಿಲ್ಲ ಎಂದು ನ್ಯಾಯಾಲಯ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಈ ಅರ್ಜಿ ಸಲ್ಲಿಸಲಾಗಿದೆ.
Judge cash row | ದೆಹಲಿ ನ್ಯಾಯಾಧೀಶರ ಮನೆಯಲ್ಲಿ ಕಂತೆ ಕಂತೆ ಸುಟ್ಟ ಹಣ: ತನಿಖಾ ವರದಿ ಬಹಿರಂ! ಇಲ್ಲಿದೆ ವಿವರ
ವಕೀಲ ಮ್ಯಾಥ್ಯೂಸ್ ಜೆ.ನೆದುಂಪುರ ಮತ್ತು ಇತರೆ ಮೂವರು 23ರಂದು ಈ ಅರ್ಜಿ ಸಲ್ಲಿಸಿದ್ದು, ನ್ಯಾಯಾಧೀಶರಿಗೆ ನೀಡಲಾದ ರಕ್ಷಣೆಯು ಕಾನೂನು ಮುಂದೆ ಎಲ್ಲರೂ ಸಮಾನರು ಎಂಬ ಸಂವಿಧಾನದ ಸಮಾನತೆಯ ತತ್ವವನ್ನು ಉಲ್ಲಂಘಿಸುತ್ತದೆ. ಇದು ನ್ಯಾಯಾಂಗಿಕ ಉತ್ತರದಾಯಿತ್ವ ಮತ್ತು ಕಾನೂನು ನಿಯಮದ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ಎಂದು ಹೇಳಲಾಗಿದೆ.
ದೆಹಲಿ ನ್ಯಾಯಾಧೀಶರ ಮನೆಯಲ್ಲಿ ಸುಟ್ಟ ನೋಟಿನ ದೃಶ್ಯ ಬಯಲು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ