2 ತಿಂಗಳಲ್ಲಿ 101 ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗಿ!

Published : Dec 09, 2020, 09:05 AM IST
2 ತಿಂಗಳಲ್ಲಿ 101 ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗಿ!

ಸಾರಾಂಶ

ದೇಶಾದ್ಯಂತ ಕೊರೋನಾ ಹಬ್ಬುವಿಕೆ ಉತ್ತಂಗ ಸ್ಥಿತಿಯಲ್ಲಿದ್ದ ಸೆಪ್ಟೆಂಬರ್‌ನಿಂದ ನವೆಂಬರ್‌ವರೆಗೆ 3 ತಿಂಗಳ ಅವಧಿಯಲ್ಲಿ 101 ಕಾರ್ಯಕ್ರಮದಲ್ಲಿ ಪಿಎಂ ಮೋದಿ ಭಾಗಿ

ನವದೆಹಲಿ(ಡಿ.09): ದೇಶಾದ್ಯಂತ ಕೊರೋನಾ ಹಬ್ಬುವಿಕೆ ಉತ್ತಂಗ ಸ್ಥಿತಿಯಲ್ಲಿದ್ದ ಸೆಪ್ಟೆಂಬರ್‌ನಿಂದ ನವೆಂಬರ್‌ವರೆಗೆ 3 ತಿಂಗಳ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬರೋಬ್ಬರಿ 101 ಜನ ಸಂಪರ್ಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ.

ಕಳೆದ ವರ್ಷ 78ಕ್ಕೆ ಹೋಲಿಸಿದರೆ ಈ ಬಾರಿ ಮೋದಿ ಶೇ.25ಕ್ಕಿಂತ ಹೆಚ್ಚು ಕಾರ್ಯಕ್ರಮಗಳಲ್ಲಿ ಭಾಗಿಯಾದಂತಾಗಿದೆ. ಕೊರೋನಾದಂಥ ಸ್ಥಿತಿಯಲ್ಲಿ ಜನರಿಗೆ ಧೈರ್ಯ ತುಂಬುವ ಸಲುವಾಗಿ ಸೆಪ್ಟೆಂಬರ್‌ನಿಂದ ನವೆಂಬರ್‌ವರೆಗೆ ಅಂದರೆ 3 ತಿಂಗಳ ಕಾಲ ಡಿಜಿಟಲ್‌ ತಂತ್ರಜ್ಞಾನದ ಮೂಲಕ ಗ್ರಾಮೀಣ ಪ್ರದೇಶದಿಂದ ಹಿಡಿದು ಹೂಡಿಕೆದಾರರು, ಯುವಕರಿಂದ ಹಿಡಿದು ಬೃಹತ್‌ ಕಂಪನಿಗಳ ಸಿಇಒಗಳವರೆಗೂ ಸಮಾಜದ ಎಲ್ಲಾ ರೀತಿಯ ಜನರೊಂದಿಗೆ ಸಮಾಲೋಚನೆ ನಡೆಸಿದ ಹೆಗ್ಗಳಿಕೆ ಪ್ರಧಾನಿ ಮೋದಿ ಅವರದ್ದು.

ವಿಶೇಷವೆಂದರೆ ಮೋದಿ ಅವರು ಸಾಮಾನ್ಯ ವರ್ಷಕ್ಕಿಂತ ಈ ವರ್ಷ ಶೇ.25ಕ್ಕಿಂತ ಹೆಚ್ಚು ಸಾರ್ವಜನಿಕ ಸಭೆಯಲ್ಲಿ ಭಾಗಿಯಾದಂತಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

5 States Assembly Election Results 2026: ಇಂದು 5 ರಾಜ್ಯಗಳ ವಿಧಾನಸಭಾ ಫಲಿತಾಂಶ: ಪಂಚ ಗದ್ದುಗೆ ಯಾರಿಗೆ?
West Bengal Election Results: ಮತ ಎಣಿಕೆಗೂ ಮುನ್ನ ಮಮತಾ ಬ್ಯಾನರ್ಜಿ 'ಪವರ್' ಫುಲ್ ಆರೋಪ!