
ಜಮ್ಮು (ಮೇ 05) ಕಳೆದ ವರ್ಷದ ಜುಲೈ ತಿಂಗಳಿನಲ್ಲಿ ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಬಂಧನಕ್ಕೆ ಒಳಗಾಗಿದ್ದ ಪ್ರತ್ಯೇಕವಾದಿ ನಾಯಕ ಮೊಹಮ್ಮದ್ ಅಶ್ರಫ್ ಸೆಹ್ರಾಯ್(77) ಬುಧವಾರ ಇಲ್ಲಿನ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ.
ಮಂಗಳವಾರ ಸಂಜೆ ಸೆಹ್ರಾಯ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ತಕ್ಷಣವೇ ಉಧಂಪುರ ಜೈಲಿನಿಂದ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಯಿತು. ಕೊರೋನಾ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿತ್ತು. ಕೊರೋನಾ ರೋಗ ಲ್ಷಣಗಳು ಇದ್ದರೂ ವರದಿ ನೆಗೆಟಿವ್ ಇತ್ತು ಎದು ವೈದ್ಯರು ತಿಳಿಸಿದ್ದಾರೆ.
ಆಗಸ್ಟ್ 2019 ರಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಳ್ಳೂವುದನ್ನು ವಿರೋಧಿಸಿದ್ದರು. ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ಮುನ್ನ ಲಾಕ್‌ಡೌನ್ ಸಮಯದಲ್ಲಿ ಇವರನ್ನು ಬಂಧನ ಮಾಡಲಾಗಿತ್ತು.
ಪೀಪಲ್ಸ್ ಕಾನ್ಫರೆನ್ಸ್ ಅಧ್ಯಕ್ಷ ಮತ್ತು ಮಾಜಿ ಸಚಿವ ಸಾಜಾದ್ ಲೋನ್ ಸೆಹ್ರಾಯ್ ಅವರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ ಅವರು ರಾಜಕೀಯ ನಾಯಕರಾಗಿದ್ದರು, ಭಯೋತ್ಪಾದಕರಲ್ಲ ಎಂದು ಎಂದು ಹೇಳಿದರು. ಸರಣಿಯ ಟ್ವೀಟ್‌ಗಳಲ್ಲಿ, ಲೋನ್ ಅವರು ನಾಯಕನೊಂದಿಗಿನ ಭೇಟಿಯನ್ನು ನೆನಪಿಸಿಕೊಂಡರು ಮತ್ತು "ಮತ್ತು ಅವರು ಯಾಕೆ ಸೆರೆವಾಸದಲ್ಲಿ ಸಾಯಬೇಕಾಗಿತ್ತು? ಅವರು ಮಾಡಿದ್ದ ಅಪರಾಧವಾದರೂ ಏನು? ಪ್ರತಿಯೊಬ್ಬರು ಆತ್ಮ ವಿಮರ್ಶೆ ಮಾಡಿಕೊಳ್ಳಬೇಕಾದ ಕಾಲ ಇದು ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ